Connect with us

    LATEST NEWS

    ಕೊರೆಯುವ ಚಳಿಯಲ್ಲಿ ತುಟಿಗಳ ಅಂದ ಮಾಸದಿರಲಿ, ಈ ರೀತಿ ಆರೈಕೆ ಮಾಡಿ

    Published

    on

    ಚಳಿಗಾಲದಲ್ಲಿ ಹವಾಮಾನದಲ್ಲಾಗುವ ಬದಲಾವಣೆಗಳು ನಾನಾ ರೀತಿಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ. ಹೀಗಾಗಿ ಈ ಋತುವಿನಲ್ಲಿ ಚರ್ಮದ ಆರೈಕೆಗೆ ಹೆಚ್ಚು ಗಮನ ಕೊಡಬೇಕು. ಎಷ್ಟೇ ಕಾಳಜಿ ವಹಿಸಿದರೂ ತುಟಿ, ಕೈಕಾಲುಗಳ ಚರ್ಮವು ಬಿರುಕು ಬಿಡುತ್ತದೆ. ಅದರಲ್ಲೂ ತುಟಿಯೂ ಒಡೆಯುವುದರಿಂದ ನೋವಿನಿಂದ ಕೂಡಿರುತ್ತದೆ. ಅದಲ್ಲದೇ, ಈ ಬಿರುಕು ತುಟಿಯ ಅಂದವನ್ನು ಹಾಳು ಮಾಡುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳನ್ನು ಬಳಸುವ ಬದಲು ಅಡುಗೆ ಮನೆಯಲ್ಲಿ ಸಿಗುವ ಈ ಸಾಮಗ್ರಿಗಳಿಂದ ತುಟಿಯ ಅಂದವನ್ನು ಹೆಚ್ಚಿಸಬಹುದು.

    ಬಾದಾಮಿ ಎಣ್ಣೆ:

    ಚಳಿಗಾಲದಲ್ಲಿ ತುಟಿಗಳು ಒಡೆಯುತ್ತಿದ್ದರೆ, ಪ್ರತಿದಿನ ಮಲಗುವ ಮುನ್ನ ಬಾದಾಮಿ ಎಣ್ಣೆಯನ್ನು ತುಟಿಗಳಿಗೆ ಹಚ್ಚಿಕೊಳ್ಳಿ. ಬಾದಾಮಿ ಎಣ್ಣೆಯಿಂದ ತುಟಿಗಳನ್ನು ಐದು ನಿಮಿಷಗಳ ಕಾಲ ಮೃದುವಾಗಿ ಮಸಾಜ್ ಮಾಡುವುದರಿಂದ ತುಟಿಗಳು ಮೃದುವಾಗುತ್ತದೆ.

    ಜೇನುತುಪ್ಪ:

    ಅಡುಗೆ ಮನೆಯಲ್ಲಿರುವ ಜೇನುತುಪ್ಪವನ್ನು ಒಡೆದಿರುವ ತುಟಿಗಳಿಗೆ ಲೇಪಿಸಬೇಕು. ಈ ರೀತಿ ಮಾಡುವುದರಿಂದ ಒಡೆದ ತುಟಿಗಳ ನೋವು ಕೂಡ ಕಡಿಮೆಯಾಗುತ್ತದೆ. ತುಟಿಗಳು ಮೃದುವಾಗುವುದಲ್ಲದೇ ಅಂದವು ಹೆಚ್ಚಾಗುತ್ತದೆ.

    ಅಲೋವೆರಾ ಜೆಲ್:

    ಅಲೋವೆರಾ ಆರೋಗ್ಯವನ್ನು ಕಾಪಾಡುವಲ್ಲಿಯೂ ಉಪಯುಕ್ತವಾಗಿದೆ. ಇದರಲ್ಲಿರುವ ಉರಿಯೂತ ಗುಣವು ಶುಷ್ಕತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ರಾತ್ರಿ ಮಲಗುವ ಮುನ್ನ ಸ್ವಲ್ಪ ಅಲೋವೆರಾ ಜೆಲ್ ಅನ್ನು ತುಟಿಗಳಿಗೆ ಹಚ್ಚಿ ಮಸಾಜ್ ಮಾಡುವುದರಿಂದ ಒಡೆಯುವ ತುಟಿಗಳ ಸಮಸ್ಯೆಯಿಂದ ಪಾರಾಗಬಹುದು.

    ತುಪ್ಪ:

    ತುಪ್ಪದಲ್ಲಿರುವ ಒಮೆಗಾ 3 ಕೊಬ್ಬಿನಾಮ್ಲಗಳು ಚರ್ಮದ ಜೀವಕೋಶಗಳಿಗೆ ತೇವಾಂಶ ನೀಡುತ್ತವೆ. ಒಡೆದ ತುಟಿಗಳಿಗೆ ತುಪ್ಪವನ್ನು ಹಚ್ಚುತ್ತಾ ಬಂದರೆ ಬಿರುಕು ಬಿಡುವುದು ಬೇಗನೇ ಗುಣಮುಖವಾಗಿ, ತುಟಿಗಳನ್ನು ಮೃದುವಾಗಿಸುತ್ತದೆ.

    ತೆಂಗಿನೆಣ್ಣೆ:

    ತೆಂಗಿನ ಎಣ್ಣೆಯಲ್ಲಿ ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಇದು ಚರ್ಮವನ್ನು ತಕ್ಷಣವೇ ಹೈಡ್ರೇಟ್ ಮಾಡುತ್ತದೆ. ತೆಂಗಿನೆಣ್ಣೆಯನ್ನು ದಿನನಿತ್ಯ ತುಟಿಗಳಿಗೆ ಲೇಪಿಸುವುದರಿಂದ ಸೋಂಕುಗಳಿಂದ ತುಟಿಗಳನ್ನು ರಕ್ಷಿಸಿ, ಮೃದುವಾಗಿಸುತ್ತದೆ.

    Click to comment

    Leave a Reply

    Your email address will not be published. Required fields are marked *

    BANTWAL

    ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

    Published

    on

    ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವಳು ಮೃ*ತಪಟ್ಟ ಘಟನೆ ನ.28ರ ಗುರುವಾರ ನಡೆದಿದೆ.

    ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ.ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃ*ತಪಟ್ಟ ಯುವತಿ ಎನ್ನಲಾಗಿದೆ.

    ಮೃ*ತರು ತಾಯಿ, ಅಕ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

    Continue Reading

    LATEST NEWS

    ಕಾರ್ಕಳ: ದುರ್ಗಾ ಫಾಲ್ಸ್‌ಗೆ ಈಜುಲು ಹೋದ ಕಾಲೇಜು ವಿದ್ಯಾರ್ಥಿ ನೀರುಪಾಲು

    Published

    on

    ಕಾರ್ಕಳ: ದುರ್ಗಾ ಫಾಲ್ಸ್‌ಗೆ ಈಜುಲು ಹೋದ ವಿದ್ಯಾರ್ಥಿಯೋರ್ವ ನೀರು ಪಾಲಾದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.

    ಮೃ*ತ ವಿದ್ಯಾರ್ಥಿಯನ್ನು ಜಾಯಲ್ ಡಯಾಸ್ (19) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

    7 ಮಂದಿ ವಿದ್ಯಾರ್ಥಿಗಳ ತಂಡ ದುರ್ಗಾ ಫಾಲ್ಸ್‌ ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಜಾರ್ಖಂಡ್ ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹೇಮಂತ್ ಸೊರೆನ್

    Published

    on

    ಮಂಗಳೂರು/ರಾಂಚಿ: ಜಾರ್ಖಂಡ್ ರಾಜ್ಯದ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕರಿಸಿದರು. 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆಗೆ ಏರಿದ್ದಾರೆ. ಈ ವೇಳೆ ಇಂಡಿಯಾ ಬಣದ ಹಲವು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


    ರಾಂಚಿಯ ಮೊರಾಬಾದಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಆದಿವಾಸಿ ನಾಯಕ 49 ವರ್ಷದ ಹೇಮಂತ್ ಸೊರೇನ್ ಅವರಿಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರತಿಜ್ಞಾವಿಧಿ ಬೋಧಿಸಿದರು.
    ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಖುರ್ತಾ, ಪೈಜಾಮಾ ಧರಿಸಿ ತಮ್ಮ ತಂದೆ, ಜೆಎಂಎಂ ಅಧ್ಯಕ್ಷ ಶಿಬು ಸೊರೇನ್ ಅವರನ್ನು ಭೇಟಿಯಾದರು.

    ಇದನ್ನೂ ಓದಿ: Watch video: ಜೈಲಿನಿಂದ ಬಿಡುಗಡೆಯಾದ ಸಂಭ್ರಮದಲ್ಲಿ ಜೈಲಾಧಿಕಾರಿಗಳ ಎದುರೇ ಯುವಕನ ಭರ್ಜರಿ ಡ್ಯಾನ್ಸ್ !
    ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಎಪಿ ನಾಯಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಜರಿದ್ದರು.

    ಇತ್ತೀಚೆಗೆ ಮುಕ್ತಾಯಗೊಂಡ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ 81 ಕ್ಷೇತ್ರಗಳ ಪೈಕಿ ಜೆಎಂಎಂ ನೇತೃತ್ವದ ಮೈತ್ರಿಕೂಟವು 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಎನ್ ಡಿಎ 24 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

    Continue Reading

    LATEST NEWS

    Trending