Connect with us

DAKSHINA KANNADA

ನವರಾತ್ರಿ ಪ್ರಯುಕ್ತ ನಮ್ಮ ಕುಡ್ಲ ವಾಹಿನಿಯಿಂದ ಹೆಣ್ಮಕ್ಕಳಿಗಾಗಿ ‘ನವರಂಗ್‌ 2023’- ಸೀರೆ ಉಡುವ ಸ್ಪರ್ಧೆ

Published

on

ಮಂಗಳೂರು: ನವರಾತ್ರಿ ವೈಭವ- 2023 ಅಂಗವಾಗಿ ನಮ್ಮ ಕುಡ್ಲ 24X7  ವಾಹಿನಿಯು ಅ. 15 ರಿಂದ 28ರ ತನಕ ಹೆಣ್ಮಕ್ಕಳು ಮತ್ತು ಮಹಿಳೆಯರಿಗಾಗಿ ‘ನವರಂಗ್‌’ ವಿಶೇಷ ಸ್ಪರ್ಧಾ ಕಾರ್ಯಕ್ರಮವನ್ನು ಸುಪ್ರಸಿದ್ಧ ಜವುಳಿ ಮಳಿಗೆ ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ ಆ್ಯಂಡ್‌ ರೆಡಿಮೇಡ್ಸ್‌ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡಿದೆ.

ಹೆಣ್ಮಕ್ಕಳು ಮತ್ತು ಮಹಿಳೆಯರು ನವರಾತ್ರಿಯ 9 ದಿನಗಳಲ್ಲಿ ದಿನಕ್ಕೊಂದು ನಿಗದಿತ ಬಣ್ಣದ ಸೀರೆಯನ್ನುಟ್ಟು ಗ್ರೂಪ್‌ ನಲ್ಲಿ ತೆಗೆದ ಫೋಟೋಗಳನ್ನು ಸಂಪೂರ್ಣ ವಿಳಾಸದೊಂದಿಗೆ 9482896309 ವಾಟ್ಸಾಪ್ ನಂಬ್ರಕ್ಕೆ ಕಳುಹಿಸಿ ಕೊಡುವ ಮೂಲಕ ಈ ಸ್ಪರ್ಧೆಯಲ್ಲಿ ಭಾಗವಹಿಸ ಬಹುದು.  ಗ್ರೂಪ್‌ ಫೋಟೋದಲ್ಲಿ ಕನಿಷ್ಠ 3 ಮಂದಿ ಇರುವುದು ಕಡ್ಡಾಯ. ಎಡಿಟ್‌ ಮಾಡಿದ ಫೋಟೋಗಳನ್ನು ಪರಿಗಣಿಸಲಾಗುವುದಿಲ್ಲ. ಕಳೆದ ಬಾರಿಯ ಫೋಟೋಗಳನ್ನು ಸ್ವೀಕರಿಸುವುದಿಲ್ಲ. ಪ್ರತಿ ದಿನ ಮಧ್ಯಾಹ್ನ 2 ಗಂಟೆಯೊಳಗೆ ಫೋಟೋಗಳನ್ನು ಕಳುಹಿಸಬೇಕು.

ಮೊದಲ ದಿನ ಅ. 15 ರಂದು ಭಾನುವಾರ ಹಳದಿ ಬಣ್ಣದ ಸೀರೆ, ಅ. 16 ರಂದು ಬಿಳಿ, ಅ. 17 ರಂದು ಕೆಂಪು, ಅ. 18 ರಂದು ನೀಲಿ, ಅ. 19 ರಂದು ಕಿತ್ತಳೆ ಬಣ್ಣ, ಅ. 20 ರಂದು ಹಸುರು, ಅ. 21 ರಂದು ಬೂದು ಬಣ್ಣ, ಅ. 22 ರಂದು ಗುಲಾಬಿ ಬಣ್ಣ ಹಾಗೂ ಅ. 23 ರಂದು ನೇರಳೆ ಬಣ್ಣದ ಸೀರೆ ಧರಿಸಿ ಫೋಟೋ ತೆಗೆಯ ಬೇಕು.

ಪ್ರತಿ ದಿನ ವಿಜೇತ ತಂಡಕ್ಕೆ ಮಂಗಳೂರು ಮತ್ತು ಪುತ್ತೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ ಆ್ಯಂಡ್‌ ರೆಡಿಮೇಡ್ಸ್‌ ವತಿಯಿಂದ ವಿಶೇಷ ಬಹುಮಾನ ನೀಡಲಾಗುವುದು. ಅಕ್ಟೋಬರ್‌ 15 ರಿಂದ 23 ರ ತನಕ ಪ್ರತಿ ದಿನ ರಾತ್ರಿ 8 ರಿಂದ ನಮ್ಮ ಕುಡ್ಲ 24X7  ಚಾನೆಲ್‌ ನಲ್ಲಿ ‘ನವರಂಗ್‌ 2023’  ವಿಶೇಷ ನೇರ ಪ್ರಸಾರ ಕಾರ್ಯಕ್ರಮದಲ್ಲಿ ವಿಜೇತರ ಹೆಸರು ಘೋಷಿಸಲಾಗುತ್ತದೆ.

 

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Published

on

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.


ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.

ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Continue Reading

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

LATEST NEWS

Trending