LATEST NEWS
ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು; ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಗೆ ಬ*ಲಿ
Published
2 days agoon
By
NEWS DESK4ಹೆಬ್ರಿ : ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ನೇತ್ರಾವತಿ ದಳದ ವಿಕ್ರಂ ಗೌಡನನ್ನು ಎನ್ ಕೌಂಟರ್ ಮಾಡಲಾಗಿದೆ. ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಕಾರ್ಯಾಚರಣೆ ನಡೆಸಿದ್ದು, ಈ ನಡುವೆ ಎಎನ್ ಎಫ್, ನಕ್ಸಲರ ನಡುವೆ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದಿದೆ.
ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿದ್ದು, ಮೃತಪಟ್ಟಿದ್ದು, ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ. ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ. ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
13 ವರ್ಷಗಳ ಬಳಿಕ ಮಲೆನಾಡು ಕರಾವಳಿಯಲ್ಲಿ ನಕ್ಸಲ್ ಎನ್ ಕೌಂಟರ್ ಮೂಲಕ ಈತನ ಹತ್ಯೆ ಮಾಡಲಾಗದೆ. ಉಡುಪಿ ಜಿಲ್ಲೆಯ ಪೀತಬೈಲ್ ಅರಣ್ಯದಲ್ಲಿ ವಿಕ್ರಂ ಗೌಡ ಹತ್ಯೆ ಮಾಡಲಾಗಿದೆ. ಮೂವರು ನಕ್ಸಲರು ಎಸ್ಕೇಪ್ ಆಗಿದ್ದು, ಅವರಿಗಾಗಿ ಹುಡುಕಾಟ ತೀವ್ರಗೊಂಡಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದಿಂದ ನಕ್ಸಲ್ ಚಳುವಳಿಗೆ ಧುಮುಕಿದ್ದ ವಿಕ್ರಂ ಗೌಡ ಕರಾವಳಿ ಭಾಗದಲ್ಲಿ ವಿಕ್ರಂ ಟೀಮ್, ಮಲೆನಾಡು ಭಾಗದಲ್ಲಿ ಮುಂಡಗಾರು ಲತಾ ಟೀಮ್ ಆ್ಯಕ್ಟಿವ್ ಆಗಿ ಕೆಲಸ ಮಾಡುತ್ತಿತ್ತು.
ಕೇರಳದಿಂದ ಕಳೆದ ಎರಡು ತಿಂಗಳ ಹಿಂದೆ ಕರ್ನಾಟಕಕ್ಕೆ ಆಗಮಿಸಿದ್ದ ನಕ್ಸಲರು, ಕೇರಳದಲ್ಲಿ ನಕ್ಸಲ್ ಕಾರ್ಯಚರಣೆ ಚುರುಕು ಪಡೆದ ಬೆನ್ನಲೇ ಕರ್ನಾಟಕ್ಕೆ ವಾಪಾಸ್ ಬಂದಿತ್ತು. ಕಸ್ತೂರಿ ರಂಗನ್ ವರದಿ ಜಾರಿ, ಅರಣ್ಯ ಒತ್ತುವರಿ ತೆರವು ಸಂಬಂಧಿಸಿದಂತೆ ಸಭೆ ನಡೆಸುತ್ತಿದ್ದ ನಕ್ಸಲರು ಚಿಕ್ಕಮಗಳೂರು ಜಿಲ್ಲೆಯ ದಟ್ಟ ಕಾನನದಲ್ಲಿ ಬೀಡು ಬಿಟ್ಟಿದ್ದರೆನ್ನಲಾಗಿದೆ.
LATEST NEWS
ತಾಯಂದಿರಿಂಲೇ ಮಕ್ಕಳ ಅ*ಪಹರಣ; ಉದ್ದೇಶ ಕೇಳಿದ್ರೆ ನೀವೆ ಶಾಕ್ ಆಗ್ತೀರ !!
Published
52 minutes agoon
21/11/2024ಮಂಗಳೂರು/ಧಾರವಾಡ: ಅಣ್ಣ-ತಮ್ಮಂದಿರ ಹೆಂಡತಿಯರು ಸ್ವಂತ ಮಕ್ಕಳನ್ನೇ ಕಿಡ್ನ್ಯಾಪ್ ಮಾಡಿರುವ ಪ್ರಕರಣ ಎಸ್, ವಿದ್ಯಾಕಾಶಿ ಧಾರವಾಡದಲ್ಲಿ ನಡೆದಿದೆ.
ಅಪಹರಣ ಕೇಸ್ ಬೇಧಿಸಿ 6 ಮಕ್ಕಳನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ರಕ್ಷಣೆ ಮಾಡಿದ್ದಾರೆ.
ನ. 7ರಿಂದ ಇಬ್ಬರು ತಾಯಂದಿರು ಹಾಗೂ ಆರು ಮಕ್ಕಳು ನಾ*ಪತ್ತೆಯಾಗಿದ್ದರು. ಮಕ್ಕಳನ್ನು ಹಾಸ್ಟೆಲ್‌ಗೆ ಸೇರಿಸುವುದಾಗಿ ಕರೆದುಕೊಂಡು ಹೋಗಿದ್ದ ತಾಯಂದಿರು, ನಂತರ ಪತ್ತೆಯಾಗಿರಲಿಲ್ಲ. ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾದ ಮೇಲೆ ಮಕ್ಕಳು ಹಾಗೂ ತಾಯಂದಿರಿಗಾಗಿ ಹುಡುಕಾಟ ನಡೆದಿತ್ತು. ತಾಯಂದಿರಿಬ್ಬರು ಮುತ್ತುರಾಜ್ ಮತ್ತು ಸುನಿಲ ಎಂಬವರೊಂದಿಗೆ ಅ*ನೈತಿಕ ಸಂಬಂಧ ಹೊಂದಿದ್ದು, ಮಕ್ಕಳನ್ನು ಸ್ವತಃ ಕಿಟ್ನಾಪ್ ಮಾಡಿ ಬಳಿಕ ಫೋನ್ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.
‘ಮಕ್ಕಳು ಬೇಕಾದರೆ ಹತ್ತು ಲಕ್ಷ ಕೊಡಿ, ಹಣ ಕೊಡಿ. ಇಲ್ಲದಿದ್ದರೆ, ಮಕ್ಕಳನ್ನು ಎಲ್ಲಿಯಾದರೂ ಬಿಟ್ಟು ನೇಪಾಳಕ್ಕೆ ಹೋಗುತ್ತೇವೆ’ ಎಂದು ಹೇಳಿದ್ದರು. ಇದರಿಂದ ಪೊಲೀಸರು ಹೈದರಾಬಾದ್, ಮಹಾರಾಷ್ಟ್ರ, ಬೆಂಗಳೂರಿನಲ್ಲಿ ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಕೊನಗೂ ಬೆಂಗಳೂರಿನಲ್ಲಿ ಮಕ್ಕಳ ಸಮೇತ ತಾಯಂದಿರನ್ನು ಪತ್ತೆ ಮಾಡಿದ್ದಾರೆ.
LATEST NEWS
ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
Published
1 hour agoon
21/11/2024By
NEWS DESK2ಇತ್ತೀಚೆಗೆ ರಿಲೀಸ್ ಆದ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ. ಈ ಚಿತ್ರಗಳಿಗೆ ಕೆಟ್ಟ ವಿಮರ್ಶೆ ಸಿಕ್ಕವು. ‘ಕಂಗುವ’ ಸಿನಿಮಾ ನೋಡಿ ಬಂದ ಎಲ್ಲರೂ ಸಾಕಷ್ಟು ಟೀಕೆ ವ್ಯಕ್ತಪಡಿಸಿದರು. ಸಿನಿಮಾ ನೋಡುತ್ತೇನೆ ಎಂದು ಹೊರಡಬೇಕು ಎಂದುಕೊಂಡಿದ್ದವರಿಗೆ ಈ ವಿಮರ್ಶೆಯಿಂದ ಹಿನ್ನಡೆ ಆಯಿತು. ಇದನ್ನು ಗಮನದಲ್ಲಿ ಇಟ್ಟುಕೊಂಡು ತಮಿಳುನಾಡು ನಿರ್ಮಾಪಕರ ಸಂಘ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ.
ಇತ್ತೀಚೆಗೆ ಯೂಟ್ಯೂಬರ್ಗಳ ಸಂಖ್ಯೆ ಹೆಚ್ಚಿದೆ. ಎಲ್ಲರೂ ಯೂಟ್ಯೂಬ್ ಮಾಡಿಕೊಂಡು, ಸಿನಿಮಾ ವಿಮರ್ಶೆ ಮಾಡುತ್ತಿದ್ದಾರೆ. ಇದರ ಜೊತೆಗೆ ಮೈಕ್ ಹಿಡಿದು ಥಿಯೇಟರ್ನಿಂದ ಹೊರ ಬರುವ ಪ್ರೇಕ್ಷಕರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುತ್ತಾರೆ. ಇದು ಸಿನಿಮಾ ಕಲೆಕ್ಷನ್ ಮೇಲೆ ಪ್ರಭಾವ ಬೀರುತ್ತಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಿಮರ್ಶೆ ಎಂದರೆ ಸಿನಿಮಾ ಬಗ್ಗೆ ಸಂಪೂರ್ಣ ವಿವರ ಇರಬೇಕು. ಆದರೆ, ಇಲ್ಲಿ ಆ ರೀತಿ ಆಗುವುದಿಲ್ಲ. ಸಿನಿಮಾ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎಂದಷ್ಟೇ ಹೇಳಲಾಗುತ್ತದೆ. ಈ ರೀತಿಯ ವಿಮರ್ಶೆಗಳಿಂದಲೇ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾ ಹಿನ್ನಡೆ ಅನುಭವಿಸಿತು ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಈ ಕಾರಣಕ್ಕೆ ತಮಿಳು ನಿರ್ಮಾಪಕರ ಸಂಘದವರು ಥಿಯೇಟರ್ ಮುಂಭಾಗದಲ್ಲಿ ಸಿನಿಮಾ ವಿಮರ್ಶೆ ಮಾಡೋದನ್ನು ಬ್ಯಾನ್ ಮಾಡಿದ್ದಾರೆ. ಇದರ ಪ್ರಕಾರ ಯಾರೂ ಥಿಯೇಟರ್ ಬಳಿ ಮೈಕ್ ಹಿಡಿದು ಬರುವಂತಿಲ್ಲ.
‘ಈ ರೀತಿಯ ವಿಮರ್ಶೆಗಳು ಸಿನಿಮಾಗೆ ತೊಂದರೆ ಮಾಡುತ್ತವೆ. ಈ ಕಾರಣಕ್ಕೆ ಬ್ಯಾನ್ ಮಾಡಲಾಗಿದೆ’ ಎನ್ನುವ ಅಭಿಪ್ರಾಯವನ್ನು ನಿರ್ಮಾಪಕರ ಕೌನ್ಸಿಲ್ ನೀಡಿದೆ. ಇದಕ್ಕೆ ಯೂಟ್ಯೂಬರ್ಗಳು ವಿರೋಧ ಹೊರಹಾಕಿದ್ದಾರೆ.
‘ಪ್ರೇಕ್ಷಕರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಇದನ್ನು ನಾವು ಜನರಿಗೆ ತಲುಪಿಸುತ್ತೇವೆ. ಇದರಲ್ಲಿ ತಪ್ಪೇನಿದೆ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಈ ರೀತಿಯ ವಿಮರ್ಶೆಗಳಿಂದಲೇ ಸೋತಿತು ಎಂಬುದಕ್ಕೆ ಯಾವುದೇ ಅರ್ಥವಿಲ್ಲ. ಈ ಸಿನಿಮಾಗಳು ಉತ್ತಮವಾಗಿರಲಿಲ್ಲ ಎಂಬ ಕಾರಣಕ್ಕೆ ಸೋತಿವೆ ಎಂದು ಅನೇಕರು ಹೇಳಿಕೊಂಡಿದ್ದಾರೆ.
ಮಂಗಳೂರು/ಕೇರಳ : ರೈಲು ಹಳಿ ದಾಟುವಾಗ ವಿದ್ಯಾರ್ಥಿನಿಯೊಬ್ಬಳಿಗೆ ರೈಲು ಡಿ*ಕ್ಕಿಯಾಗಿ ಮೃ*ತಪಟ್ಟ ದಾರುಣ ಘಟನೆ ಮಯನಾಡು ರೈಲು ನಿಲ್ದಾಣದಲ್ಲಿ ನಡೆದಿದೆ.
ಮೃ*ತಪಟ್ಟ ವಿದ್ಯಾರ್ಥಿನಿ ದೇವಾನಂದ (17) ಎಂದು ಗುರುತಿಸಲಾಗಿದೆ.
ಮಯನಾಡು ಹೈಯರ್ ಸೆಕೆಂಡರಿ ಶಾಲೆಯ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ದೇವಾನಂದ ಮಾಯನಾಡು ರೈಲು ನಿಲ್ದಾಣದಲ್ಲಿ ಹಳಿ ದಾಟಿ ಪ್ಲಾಟ್‌ಫಾರ್ಮ್ಗೆ ಹತ್ತಲು ಯತ್ನಿಸುತ್ತಿದ್ದಾಗ ಈ ದು*ರ್ಘಟನೆ ನಡೆದಿದೆ.
ಮಯನಾಡು ನಿಲ್ದಾಣದ ಮೊದಲ ಪ್ಲಾಟ್‌ಫಾರ್ಮ್ನಲ್ಲಿ ನಿಲುಗಡೆಗೊಂಡಿದ್ದ ನಾಗರ್‌ಕೋಯಿಲ್-ಕೊಟ್ಟಾಯಂ ಪ್ಯಾಸೆಂಜರ್ ರೈಲು ಅದರ ಮುಂಭಾಗದ ಹಳಿಯನ್ನು ದಾಟಿ ಎರಡನೇ ಪ್ಲಾಟ್‌ಫಾರ್ಮ್ಗೆ ಪ್ರವೇಶಿಸಿದಾಗ ನೇತ್ರಾವತಿ ಎಕ್ಸ್ಪ್ರೆಸ್ ಬಂದಿದೆ.
ದೇವಾನಂದ ತನ್ನ ಸಹಪಾಠಿಗಳೊಂದಿಗೆ ರೈಲ್ವೇ ಪ್ರವೇಶಿಸಿ ಜೊತೆಯಲ್ಲಿದ್ದ ಇತರ ವಿದ್ಯಾರ್ಥಿಗಳು ಪ್ಲಾಟ್‌ಫಾರ್ಮ್ಗೆ ಎಳೆದೊಯ್ದರು, ಆದರೆ ದೇವಾನಂದ ರೈಲಿಗೆ ಡಿ*ಕ್ಕಿ ಹೊಡೆದು ಜೀ*ವ ಕಳೆದುಕೊಂಡಿದ್ದಾರೆ. ಮಕ್ಕಳು ರೈಲಿನ ಮುಂದೆ ಇರುವುದನ್ನು ತಿಳಿದ ರೈಲಿನ ಲೊಕೊ ಪೈಲಟ್ ನಿಲ್ಲಿಸದೆ ಹಾರ್ನ್ ಮಾಡಿದರೂ ಪ್ರಯೋಜನವಾಗಲಿಲ್ಲ ಎಂದು ತಿಳಿದುಬಂದಿದೆ.
LATEST NEWS
ಕೊಲ್ಲೂರು ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ
ಅತ್ತೆ- ಸೊಸೆ ಜಗಳ; ಆ*ತ್ಮಹತ್ಯೆಗೆ ಶರಣಾದ ಮಗ !!
ಮಂಗಳೂರು: ನವೆಂಬರ್ 23 ರಂದು ಎನ್ಐಟಿಕೆ ಘಟಿಕೋತ್ಸವ
ಬ್ಯಾಹ್ಯಾಕಾಶದಲ್ಲಿರುವ ಸುನೀತಾ ವಿಲಿಯಮ್ಸ್ ಈಗ ಹೇಗಿದ್ದಾರೆ ಗೊತ್ತಾ ?
ಪ್ರಧಾನಿ ಮೋದಿಗೆ ಗಯಾನಾ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ
ಶ್ರೀ ಎಂ.ಎಸ್.ಗುರುರಾಜ್ಗೆ ಪ್ರತಿಷ್ಟಿತ ‘ಶ್ರೇಷ್ಠ ಸಹಕಾರಿ’ ರಾಜ್ಯ ಪ್ರಶಸ್ತಿ !!
Trending
- LATEST NEWS3 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS4 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS24 hours ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS23 hours ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ