Connect with us

    LATEST NEWS

    ನಕ್ಸಲ್‌ ಮುಖಂಡೆ ಹೊಸಗದ್ದೆ ಪ್ರಭಾ ಪೊಲೀಸರಿಗೆ ಶರಣು: ಕಳೆದ ತಿಂಗಳು ಬಂಧಿತರಾಗಿದ್ದ ಪತಿ ಬಿ.ಜಿ. ಕೃಷ್ಣಮೂರ್ತಿ

    Published

    on

    ವೆಲ್ಲೂರು: ಕೇರಳ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ದಳ ಹಿರಿಯ ನಕ್ಸಲ್‌ ಮುಖಂಡ ಮುಖಂಡ ಬಿ.ಜಿ. ಕೃಷ್ಣಮೂರ್ತಿ ಬಂಧನದ ಬೆನ್ನಲ್ಲೇ ಹೊಸಗದ್ದೆ ಪ್ರಭಾ ತಮಿಳುನಾಡು ಪೊಲೀಸರಿಗೆ ಶರಣಾಗಿದ್ದಾಳೆ. ಈ ಹಿಂದೆ ಆಕೆ ಸಾವನ್ನಪ್ಪಿದ್ದಳು ಎಂದು ಸುದ್ದಿಯಾಗಿತ್ತು.


    ಕಳೆದ ತಿಂಗಳು ಪತಿ ಬಿ.ಜಿ. ಕೃಷ್ಣಮೂರ್ತಿಯ ಬಂಧನದ ನಂತರ ಮಾನಸಿಕ ಖಿನ್ನತೆಗೊಳಗಾಗಿದ್ದ ಪ್ರಭಾ ಅನಾರೋಗ್ಯದಿಂದ ಬಳಲುತ್ತಿದ್ದಳು.

    ಜೊತೆಗೆ ಪಾರ್ಶ್ವವಾಯುವಿಗೆ ಒಳಗಾಗಿದ್ದಾಳೆ. ಇದೀಗ ಪತಿಯ ಬಂಧನದ ಬಳಿಕ ತಾನೂ ಪೊಲೀಸರಿಗೆ ಶರಣಾಗಿದ್ದಾಳೆ.

    ಪ್ರಭಾ ಮೂಲತಃ ಕರ್ನಾಟಕದ ಆಗುಂಬೆ ಸನಿಹದ ಹೊಸಗದ್ದೆ ಗ್ರಾಮದವಳು. ಮಲೆನಾಡಿನಲ್ಲಿ ನಕ್ಸಲ್‌ ಸಂಘಟನೆ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಸಂಘಟನೆ ಮುನ್ನಡೆಸುತ್ತಿದ್ದಳು.


    ಮಲೆನಾಡಿನಲ್ಲಿ ನಕ್ಸಲ್‌ ಸಂಘಟನೆಯ ಹಲವು ಮಂದಿ ಪೊಲೀಸ್‌ ಎನ್‌ಕೌಂಟರ್‌ಗೆ ಬಲಿಯಾದರು.

    ಮತ್ತೆ ಕೆಲವರು ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಸಂಘಟನೆಯಿಂದ ವಿಮುಖರಾದರೆ, ಮತ್ತೆ ಕೆಲವರು ಪೊಲೀಸರಿಗೆ ಶರಣಾದರು.
    2010ರಲ್ಲಿ ನಕ್ಸಲ್‌ ಪ್ರಭಾ ಮೃತಪಟ್ಟಿದ್ದಾಳೆ ಎಂಬ ಸುದ್ದಿ ದಟ್ಟವಾಗಿ ಹರಡಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಗ್ರಾಮದ ಮುಖಂಡರೊಬ್ಬರಿಗೆ ಪ್ರಭಾ ಮೃತಪಟ್ಟಿದ್ದು,

    ಆಕೆಗೆ ಶ್ರದ್ಧಾಂಜಲಿ ಅರ್ಪಿಸಿ ಎಂದು ದೂರವಾಣಿ ಕರೆಯೊಂದು ಬಂದಿತ್ತು.

    ಹೀಗಾಗಿ ಪೊಲೀಸರು ಕೂಡ ಪ್ರಭಾ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದರು. ಆದರೆ ಆಕೆಯ ಶವ ಸಿಗದೆ ಮೃತ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಅಂದಿನ ಎಸ್ಪಿ ಮುರುಗನ್‌ ಹೇಳಿದ್ದರು.

    ಆದರೆ ರಾಜ್ಯದ ಮಲೆನಾಡಿನಿಂದ ಕಣ್ಮರೆಯಾಗಿದ್ದ ಪ್ರಭಾ ಕೇರಳದ ನಕ್ಸಲ್‌ ಸಂಘಟನೆಯಲ್ಲಿ ಸಕ್ರಿಯಳಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದಟ್ಟವಾಗಿ ಸಿಕ್ಕಿತ್ತು.

    ಪತಿ ಬಿ.ಜಿ. ಕೃಷ್ಣಮೂರ್ತಿ, ಪ್ರಭಾ, ಸಾವಿತ್ರಿ, ವಿಕ್ರಂ ಗೌಡ ಸೇರಿ ಮಲೆನಾಡಿನ ನಕ್ಸಲರೆಲ್ಲರೂ ಕೇರಳದಲ್ಲಿ ಆಶ್ರಯ ಪಡೆದಿದ್ದರು.


    ಹೊಸಗದ್ದೆ ಪ್ರಭಾ ವಿರುದ್ಧ ರಾಜ್ಯದಲ್ಲಿ 40ಕ್ಕೂ ಅಧಿಕ ಕೇಸ್‌ಗಳಿವೆ. ಶಿವಮೊಗ್ಗದಲ್ಲಿ ತಲ್ಲೂರು ಅಂಗಡಿ, ಬಸ್‌ ಸುಟ್ಟ ಪ್ರಕರಣ ಸೇರಿದಂತೆ ಶಿವಮೊಗ್ಗದಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದೆ.

    BIG BOSS

    ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !

    Published

    on

    ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.


    ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.

    ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ  !! 
    ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
    ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    LATEST NEWS

    ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

    Published

    on

    ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

    ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

    ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

     

    Continue Reading

    LATEST NEWS

    Trending