Connect with us

    BANTWAL

    ಬಂಟ್ವಾಳದ ಪುರುಷೋತ್ತಮ ಪೂಜಾರಿಯ ಚಿಕಿತ್ಸೆಗೆ ಬೇಕಾಗಿದ್ದಾರೆ ಹೃದಯವಂತರು

    Published

    on

    ಮಂಗಳೂರು: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್‌ನ ಕರ್ಪೆ ಗ್ರಾಮದ ಕೊಡು ಮನೆಯ ಪುರುಷೋತ್ತಮ ಪೂಜಾರಿ ಅವರು ಕಳೆದ 25 ವರ್ಷಗಳಿಂದ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ.

    1992ರಲ್ಲಿ ಮತ್ತು 2000ರಲ್ಲಿ ಇವರಿಗೆ ಈಗಾಗಲೇ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದೆ. ಇದೀಗ ಮತ್ತೆ ಇವರಿಗೆ ಹೃದಯದ ವಾಲ್‌ಟ್ರಿಟ್‌ ಮೆಂಟ್‌ ಮಾಡಬೇಕೆಂದು ಮಂಗಳೂರಿನ ವೈದ್ಯ ಸುರೇಶ್‌ ಪೈ ತಿಳಿಸಿದ್ದು,

    ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಬೇಕಾಗಿದೆ. ಇದಕ್ಕೆ ಸುಮಾರು 6.50 ಲಕ್ಷ ರೂಪಾಯಿ ಬೇಕಾಗಿದೆ ಎಂದು ವೈದ್ಯರು ಹೇಳಿದ್ದಾರೆ.

    ಆದರೆ ತೀರಾ ಆರ್ಥಿಕವಾಗಿ ಬಡತನದಲ್ಲಿರುವ ಇವರ ಕುಟುಂಬಕ್ಕೆ ಈ ಚಿಕಿತ್ಸಾ ವೆಚ್ಚವನ್ನು ಭರಿಸುವುದು ಕಷ್ಟ ಸಾಧ್ಯವಾಗಿದೆ.

    ಈಗಾಗಲೇ ಇವರ ವೈದ್ಯಕೀಯ ಚಿಕಿತ್ಸೆಗೆ 2 ಲಕ್ಷದವರೆಗೆ ವೆಚ್ಚ ತಗುಲಿದೆ. ಅಲ್ಲದೆ ಪ್ರತಿ ತಿಂಗಳು ಆಸ್ಪತ್ರೆಯಲ್ಲಿ ಹೃದಯದ ಪರೀಕ್ಷೆ ಸೇರಿದಂತೆ ಎಲ್ಲಾ ಚಿಕಿತ್ಸೆಗಳನ್ನು ಮಾಡಬೇಕಾಗಿದೆ.

    ಇವರಿಗೆ ತನ್ನ ಚಿಕಿತ್ಸೆ ಜೊತೆಗೆ ಸಂಸಾರವನ್ನು ನಿಭಾಯಿಸುವ ಹೊಣೆಗಾರಿಕೆ ಇದ್ದು, ಒಂದು ತುತ್ತಿನ ಊಟಕ್ಕೂ ಕಷ್ಟವಾಗಿದೆ.

    ಹೀಗಾಗಿ ದಾನಿಗಳ ನೆರವು ಕೋರಿರುವ ಅವರು ತನ್ನ ವೈದ್ಯಕೀಯ ಚಿಕಿತ್ಸೆಗೆ ನೆರವಾಗುವಂತೆ ಮನವಿ ಮಾಡಿದ್ದಾರೆ.

    ದಾನಿಗಳು ತಮ್ಮ ಮಗನ ಗೂಗಲ್‌ ಪೇ ಇಲ್ಲವೇ ಬ್ಯಾಂಕ್‌ ಅಕೌಂಟ್‌ಗೆ ಹಣ ಕಳುಹಿಸುವಂತೆ ಮನವಿ ಮಾಡಿದ್ದಾರೆ.

    ದಾನಿಗಳು ಆರ್ಥಿಕ ನೆರವು ನೀಡಬೇಕಾದ ವಿಳಾಸ : 

    ಪುನೀತ್‌(ಪುತ್ರ)

    ಸಿದ್ಧಕಟ್ಟೆ, ಮಂಜರ ಕಾಂಪ್ಲೆಕ್ಸ್‌

    ಮೂಡುಬಿದಿರೆ ಬಂಟ್ವಾಳ ರಸ್ತೆ,

    ಬಂಟ್ವಾಳ ತಾಲ್ಲೂಕು- ಸಿದ್ಧಕಟ್ಟೆ

    ಖಾತೆ ಸಂಖ್ಯೆ : 713101000000672

    ಐಎಫ್‌ಎಸ್‌ಸಿ ಕೋಡ್‌ : BARBOVJSIDA MICR CODE : 575012062

    ಫೋನ್‌ ಪೇ ನಂಬರ್ : 9686939378

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending