Connect with us

    BELTHANGADY

    ತುಂಬು ಕುಟುಂಬದ ಆಧಾರಸ್ತಂಭ ಕುಸಿಯುವ ಹಂತದಲ್ಲಿ, ಬಡ ಕುಟುಂಬಕ್ಕೆ ಬೇಕಿದೆ ನೆರವಿನ ಆಸರೆ…..

    Published

    on

    ತುಂಬು ಕುಟುಂಬದ ಆಧಾರಸ್ತಂಭ ಕುಸಿಯುವ ಹಂತದಲ್ಲಿ, ಬಡ ಕುಟುಂಬಕ್ಕೆ ಬೇಕಿದೆ ನೆರವಿನ ಆಸರೆ….

    ಬೆಳ್ತಂಗಡಿ : ಕಷ್ಟವಿಲ್ಲದ ಜನ, ಮನೆ ಇರೋದು ಕಡಿಮೆಯೇ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಬಡ ಕುಟುಂಬಕ್ಕೆ ಕಷ್ಟಗಳ ಸರಮಾಲೆಯೇ ಸುತ್ತಿಕೊಂಡಿದೆ. ತುಂಬು ಕುಟುಂಬಕ್ಕೆ ಆಧಾರ ಸ್ತಂಬವಾಗಿರುವ ಮನೆಯ ಯಜಮಾನನೇ ಇದೀಗ ಕುಸಿದು ಬೀಳುವ ಹಂತದಲ್ಲಿದ್ದಾನೆ.


    ಕಷ್ಟ ಅನ್ನೋದು ಎಲ್ಲಾ ಜನರಲ್ಲೂ, ಮನೆಗಳಲ್ಲೂ ಕಂಡು, ಕೇಳಿ ಬರುವ ಸಾಮಾನ್ಯ ವಿಷಯವೇ. ಕಷ್ಟವಿಲ್ಲದ ಜನ, ಮನೆ ಇರೋದು ಸಾಧ್ಯವೇ ಇಲ್ಲ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಸಮೀಪದ ಅಂಡೆತ್ತಡ್ಕ ಎಂಬ ಕುಗ್ರಾಮದ ಬಡ ಕುಟುಂಬಕ್ಕೆ ಮಾತ್ರ ಕಷ್ಟ ಅನ್ನೋದು ಬರ ಸಿಡಿಲಿನಂತೆ ಬಡಿದಿದೆ. ಎಂಟು ಜನರಿರುವ ಈ ಕುಟುಂಬದ ಆಧಾರಸ್ತಂಭವೀಗ ಕುಸಿದು ಬೀಳುವ ಹಂತಕ್ಕೆ ತಲುಪಿದ್ದಾರೆ. ಹೌದು ಮನೆಯ ಯಜಮಾನ ಸೇಸಪ್ಪ ಗೌಡ ಅಡಿಕೆ ಮರದಿಂದ ಅಡಿಕೆ ಮರಕ್ಕೆ ಜಿಗಿದು, ಅಡಿಕೆ ಕೀಳುವ, ಮದ್ದು ಬಿಡುವ ಕಾಯಕವನ್ನು ಮಾಡಿಕೊಂಡಿದ್ದವರು. ಆದರೆ ಈ ಸೇಸಪ್ಪ ಗೌಡರಿಗೆ ಇದೀಗ ಒಂದು ಹೆಜ್ಜೆಯೂ ನಡೆಯಲಾಗುತ್ತಿಲ್ಲ. ಎರಡು ವರ್ಷಗಳ ಹಿಂದೆ ತನ್ನ ತೊಡೆ ಭಾಗದಲ್ಲಿ ಗಡ್ಡೆಯೊಂದು ಮೂಡಿರುವುದು ಸೇಸಪ್ಪ ಗೌಡರ ಗಮನಕ್ಕೆ ಬಂದಿತ್ತು.

    ಸಾಮಾನ್ಯವಾಗಿ ತೊಡೆಯಲ್ಲಿ ಮೂಡುವ ಗಡ್ಡೆಯಾಗಿರಬಹುದು ಎಂದು ಊರಿನ ವೈದ್ಯರಲ್ಲಿ ಮದ್ದು ಪಡೆದು ಮತ್ತೆ ಅಡಿಕೆ ಮರ ಹತ್ತಿದ್ದರು. ಆದರೆ ಈ ಗಡ್ಡೆ ದಿನ ಕಳೆದಂತೆ ಬೃಹದಾಕಾರದಲ್ಲಿ ಬೆಳೆಯುತ್ತಿರುವುದು ಸೇಸಪ್ಪ ಗೌಡರ ಕುಟುಂಬಕ್ಕೆ ತಲೆ ನೋವಾಗಿ ಪರಿಣಮಿಸಿತ್ತು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಟ್ಟಾಗ ಗಡ್ಡೆ ತೊಡೆ ಕ್ಯಾನ್ಸರ್ ಎಂದು ತಿಳಿದು ಬಂದಿತ್ತು. ಚಿಕಿತ್ಸೆಯಿಂದ ಗಡ್ಡೆಯನ್ನು ತೆಗೆಯಲು ಸಾಧ್ಯ ಎಂದ ವೈದ್ಯರ ಸಲಹೆಯಂತೆ ಕಿಮೋಥೆರಪಿ ಸೇರಿದಂತೆ ವಿವಿಧ ಚಿಕಿತ್ಸೆಗಳನ್ನು ಪಡೆಯಲಾಗಿತ್ತು. ಆದರೆ ಕೊಂಚ ದಿನದಲ್ಲೇ ಮತ್ತೆ ಗಡ್ಡೆ ಬೆಳೆಯಲಾರಂಭಿಸಿದ್ದು, ಇದೀಗ ಶಸ್ತ್ರ ಚಿಕಿತ್ಸೆಗೆ ಹಣವಿಲ್ಲದ ಕಾರಣ ತನ್ನ ತುಂಬು ಕುಟುಂಬಕ್ಕೆ ಏನನ್ನೂ ಮಾಡಲಾರದ ಅಸಹಾಯಕ ಸ್ಥಿತಿಯಲ್ಲಿದ್ದಾರೆ ಸೇಸಪ್ಪ ಗೌಡ.


    ತನ್ನ ಮುದಿ ವಯಸ್ಸಿನ ತಾಯಿ ಹಾಗೂ ಸಹೋದರರ ಜೊತೆಗೆ ತನ್ನ ಪತ್ನಿ ಹಾಗೂ ನಾಲ್ಕು ಮಕ್ಕಳ ತುಂಬು ಸಂಸಾರ ನಿರ್ವಹಣೆ ಹೊತ್ತಿರುವ ಸೇಸಪ್ಪ ಗೌಡರು ಇದೀಗ ಹಾಸಿಗೆ ಹಿಡಿಯುವ ಹಂತಕ್ಕೆ ಬಂದಿದ್ದಾರೆ. ತೊಡೆಯ ಗಡ್ಡೆ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಕಾರಣ ನಡೆದಾಡಲೂ ಆಗದಂತಹ ಪರಿಸ್ಥಿತಿಯಲ್ಲಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆಯಲು ಸಾಧ್ಯವಿದ್ದು, ಈ ಚಿಕಿತ್ಸೆಗೆ 8 ಲಕ್ಷ ರೂಪಾಯಿಗಳ ವೆಚ್ಚ ತಗುಲಲಿದೆ. ಆದರೆ ಇಷ್ಟೊಂದು ಹಣವನ್ನು ಸರಿದೂಗಿಸಲಾರದೆ ಈ ಕುಟುಂಬ ಇದೀಗ ಸಮಾಜದ ಸಹಾಯದ ನಿರೀಕ್ಷೆಯಲ್ಲಿದೆ.

    ಸೇಸಪ್ಪ ಗೌಡರ ಮನೆಯ ಪರಿಸ್ಥಿತಿಯನ್ನು ಕಂಡು ಮರುಗಿದ ಗ್ರಾಮಸ್ಥರು ಕುಟುಂಬಕ್ಕೆ ತನ್ನ ಕೈಯಲ್ಲಾದ ಸಹಾಯವನ್ನು ಮಾಡುವ ಮೂಲಕ ಸೇಸಪ್ಪ ಗೌಡರಿಗೆ ಸ್ಪಂದಿಸಿದ್ದಾರೆ. ಆದರೆ ಶಸ್ತ್ರಚಿಕಿತ್ಸೆಗೆ ಬೇಕಾದಷ್ಟು ಹಣ ಈ ಸಹಾಯದಿಂದ ಒಟ್ಟುಗೂಡಿಸಲು ಸಾಧ್ಯವಾಗದೆ ಈ ಕುಟುಂಬ ಇದೀಗ ಮರುಗುತ್ತಿದೆ. ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಗ ಒದಗಿಸುವುದು ಹೇಗೆನ್ನುವ ತಳಮಳದಲ್ಲಿದೆ. ಅಲ್ಲದೆ ಇಂದೋ, ನಾಳೆಯೋ ಬೀಳುವ ಸ್ಥಿತಿಯಲ್ಲಿರುವ ಮನೆಯನ್ನು ಉಳಿಸುವುದು ಹೇಗೆ ಎನ್ನುವ ತೊಳಲಾಟದಲ್ಲಿದೆ.


    ಕೇವಲ 46 ವರ್ಷದ ಆಸುಪಾಸಿನಲ್ಲಿರುವ ಸೇಸಪ್ಪ ಗೌಡರಿಗೆ ಬದುಕಿ ದುಡಿಯುವ ಛಲವಿದೆ. ಆದರೆ ನಿರಂತರವಾಗಿ ಕಾಡುತ್ತಿರುವ ಮಾರಿಯಿಂದ ಬಿಡಿಸಿಕೊಳ್ಳಲಾಗದ ಸ್ಥಿತಿಯಲ್ಲಿದ್ದಾರೆ. ಮಾನವೀಯತೆಯ ಸಮಾಜ ಈ ಬಡ ಕುಟುಂಬಕ್ಕೆ ಆಸರೆಯಾಗಿ ನಿಲ್ಲಬೇಕಿದೆ.
    ಈ ಬಡ ಕುಟುಂಬಕ್ಕೆ ಸಹಾಯ ಮಾಡಲಿಚ್ಚಿಸುವ ದಾನಿಗಳು ಈ ಅಕೌಂಟಿಗೆ ನೇರವಾಗಿ ಹಣ ಪಾವತಿಸಬಹುದು.

    Sesappa Gawda

    Canara Bank

    A/C No. 3633108000383
    Illanthila Branch
    Belthangady
    IFSC code.CNRB0003633

    Click to comment

    Leave a Reply

    Your email address will not be published. Required fields are marked *

    BELTHANGADY

    ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ

    Published

    on

    ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನ್ನಿಧ್ಯವನ್ನ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಮಂಗಳವಾರ ಲೋಕಾರ್ಪಣೆ ಮಾಡಿದರು.

    ಪತ್ನಿ ಸಮೇತರಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಧನ್‌ಕರ್, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಕಾಂಪ್ಲೆಕ್ಸ್ ಉದ್ಘಾಟಿಸಿ ಅಮೃತವರ್ಷಿಣಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾದರು.

    ವೇದಿಕೆಯಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪತ್ನಿ ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಕುಮಾರ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪರಾಷ್ಟ್ರಪತಿ ಕ್ಷೇತ್ರ ಕೆಲಸ ಕಾರ್ಯಗಳನ್ನ ಪ್ರಶಂಸಿಸಿ, ಇನ್ನಷ್ಟು ಒಳ್ಳೆ ಕಾರ್ಯ ನಡೆಯಲಿ ಎಂದು ಹಾರೈಸಿದರು.

    ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಮಂಜುನಾಥ ದೇವರ ದರ್ಶನಕ್ಕೆ ಬರುವ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಿದ್ದಾರೆ. ಲಕ್ಷಾಂತರ ಜನರು ಧರ್ಮಸ್ಥಳಕ್ಕೆ ಆಗಮಿಸುತ್ತಾರೆ. ಭಕ್ತರು ನಿಲ್ಲುವುದಕ್ಕಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಲಾಗಿದೆ. ಇದು ಕೇವಲ ಕಟ್ಟಡ ಮಾತ್ರ ಅಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ ಎಲ್ಲ ಜನರಿಗೆ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು, ಸಮಾನತೆಯನ್ನು ತೋರಿಸುತ್ತದೆ. ಧಾರ್ಮಿಕ ಸಂಸ್ಥೆಗಳು ಈ ದೇಶದಲ್ಲಿ ಸಂಸ್ಕೃತಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿವೆ. ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿ. ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ ಮುಖ್ಯ ಸಾಧನವಾಗಿದೆ ಎಂದು ತಿಳಿಸಿದರು.

    ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು. ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು, ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕು. ಮೆಸಪೊಟೆಮಿಯಾ, ಚೀನಾ ನಾಗರಿಕತೆ ನಾಶವಾಗಿದೆ. ನಮ್ಮ ನಾಗರಿಕತೆ ಮಾತ್ರ ಇನ್ನೂ ಬೆಳೆಯುತ್ತಿದೆ. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ‍್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ‍್ಯ ಇದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆ ಇದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಸಂವಿಧಾನವೇ ನಮ್ಮಲ್ಲಿ ಪರಮೋಚ್ಛವಾದುದು. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದರು.

    ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ, ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು. ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದು. ದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ? ದೇಶ ಸೇವೆಗೆ ಸಮಯ ವಿನಿಯೋಗ ಮಾಡುತ್ತಿದ್ದಾರೆಯೇ? ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ, ಅತ್ಯುನ್ನತ ನಾಗರಿಕತೆ ನಮ್ಮದು. ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ. ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಹುಟ್ಟಬೇಕಾಗಿದೆ. ಸಾಮಾಜಿಕ ಸದ್ಭಾವ ಎಲ್ಲಿಂದ ಬರಬೇಕು, ಭಾರತ ಮಾತೆ ಒಂದೇ ಎಂದಾಗ ಈ ಭಾವನೆ ಬರುತ್ತದೆ. ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ, ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಹೇಳಿದರು.

    Continue Reading

    BELTHANGADY

    ಧರ್ಮಸ್ಥಳ; ಭಕ್ತರಿಗೆ ಸುಸಜ್ಜಿತವಾದ ಸರತಿ ಸಾಲಿನ ನೋಂದಣಿ ವ್ಯವಸ್ಥೆ: ಡಾ. ವೀರೇಂದ್ರ ಹೆಗ್ಗಡೆ

    Published

    on

    ಧರ್ಮಸ್ಥಳ: ವಿವಿಧ ಪ್ರದೇಶದಿಂದ ಆಗಮಿಸುವ ಜನರು ಸಾಕಷ್ಟು ಹೊತ್ತು ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ಕಾಯು ತ್ತಾರೆ. ಭಕ್ತರಿಗೆ ಆಗುತ್ತಿರುವ ಈ ತೊಂದರೆಯನ್ನು ತಪ್ಪಿಸಲು ಸುಸಜ್ಜಿತವಾದ ಸರತಿ ಸಾಲಿನ ನೋಂದಣಿ ವ್ಯವಸ್ಥೆ ಮತ್ತು ಆರಾಮವಾಗಿ ಕುಳಿತುಕೊಳ್ಳಲು ವ್ಯವಸ್ಥೆ ಇರುವ ಸುಸಜ್ಜಿತ ಕಟ್ಟಡ ನಿರ್ಮಿಸಬೇಕೆನ್ನುವುದು ಹಲವು ವರ್ಷಗಳ ಹಿಂದಿನ ನಿರೀಕ್ಷಿತ ಯೋಜನೆ ಇದೀಗ ಪೂರ್ಣಗೊಂಡು ಉಪರಾಷ್ಟ್ರಪತಿ ಜಗದೀಪ್ ಧನಕರ್ ಉದ್ಘಾಟಿಸಲಿದ್ದಾರೆ. ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾಧಿಗಳು ಈ ವ್ಯವಸ್ಥೆಯನ್ನು ಉಪಯೋಗಿಸುವಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

    ಭಾರತದ ಉಪರಾಷ್ಟ್ರ ಪತಿ ಜಗದೀಪ್ ಧನ್ಕರ್ ಅವರು ಮಂಗಳವಾರ ಶ್ರೀ ಕ್ಷೇತ್ರದ ನೂತನ ಸೌಲಭ್ಯಗಳನ್ನು ಒಳ ಗೊಂಡ ಸರತಿ ಸಾಲಿನ ಕಟ್ಟಡ ಸಂಕೀರ್ಣ ಶ್ರೀ ಸಾನ್ನಿಧ್ಯ ಇದರ ಉದ್ಘಾಟನೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ 2024- 25ರ ಜ್ಞಾನದೀಪ ಕಾರ್ಯಕ್ರಮದ ಉದ್ಘಾಟನೆಯ ತಯಾರಿಯ ಸಂದರ್ಭ ಸೋಮವಾರ ಸುದ್ದಿಗಾರ ರನ್ನುದ್ದೇಶಿಸಿ ಮಾತನಾಡುತ್ತಿದ್ದರು.

    ಈ ರೀತಿಯ ಸುಸಜ್ಜಿತ ಸಂಕೀರ್ಣ ನಿರ್ಮಿ ಸಲು ಕಳೆದ 15 ವರ್ಷದಿಂದ ಯೋಜಿಸಿ 11 ವಿವಿಧ ಯೋಜನೆ ರೂಪಿಸಿ ಅಂತಿಮವಾಗಿ ರೂಪಿಸಿದ ಸಾನಿಧ್ಯ ಸಂಕೀರ್ಣ ಸುಸಜ್ಜಿತ ವಾಗಿ ರೂಪಿಸಲಾಗಿದೆ.ಇದರಲ್ಲಿ ವ್ಯವಸ್ಥಿ ತವಾಗಿ ನೋಂದಣಿ, ಸೂಕ್ತ ಮಾಹಿತಿ ನೀಡುವ ವ್ಯವಸ್ಥೆ, ಕುಳಿತು ಕೊಳ್ಳಲು ವ್ಯವಸ್ಥೆ, ಇದರಿಂದ ಭಕ್ರರು ಸಮಾಧಾನ ಚಿತ್ತ ರಾಗಿ ಕುಳಿತು ದೇವರ ದರ್ಶನ ಮಾಡಬಹುದಾಗಿದೆ. ಈ ವ್ಯವಸ್ಥೆ ಉಪಯೋಗ ಭಕ್ತಾದಿಗಳಿಗೆ ಲಭಿಸಲಿದೆ ಎಂದು ಹೆಗ್ಗಡೆ ವಿವರಿಸಿದರು.

    Continue Reading

    BELTHANGADY

    ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ

    Published

    on

    ಮಂಗಳೂರು: ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಭಕ್ತರು ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ.

    ಕದ್ರಿ ಮಂಜುನಾಥ ದೇಗುಲಕ್ಕೆ ಬೆಳ್ಳಗ್ಗಿನಿಂದಲೂ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ದೇವಳದ ಕೆರೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೇವಳದ ಮುಂದೆ ಕಲಶ ಸ್ನಾನ ಮಾಡುತ್ತಿದ್ದಾರೆ. ಕದ್ರಿ ದೇವಳದಲ್ಲಿ ಕಲಶ ಸ್ನಾನ ಸೇವೆ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

    ಹೊಸ ವರ್ಷಾರಂಭದ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಭಕ್ತ ಸಾಗರವೇ ನೆರೆದಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ದಂಡು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬಿದ್ದಿದೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸದ್ಯ ದೇವಸ್ಥಾನದ ಕ್ಯೂ ಸೆಂಟರ್ನಲ್ಲಿ ಭಾರೀ ಜನಜಂಗುಳಿ ಏರ್ಪಟ್ಟಿದೆ.

    ದೇವಸ್ಥಾನದ ಮುಂಭಾಗದಲ್ಲಿಯೂ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

    Continue Reading

    LATEST NEWS

    Trending