Saturday, August 20, 2022

ವಿಶ್ವ ಅಥ್ಲೆಟಿಕ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ನೀರಜ್‌ ಚೋಪ್ರಾ

ಯೂಜೀನ್‌: ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ನೀರಜ್‌ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.


ಭಾನುವಾರ ನಡೆದ ಫೈನಲ್‌ನಲ್ಲಿ ಭಾರತದ ನೀರಜ್‌, ತಮ್ಮ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್‌ ದೂರ ಎಸೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ. ಅವರು ಅರ್ಹತಾ ಸುತ್ತಿನಲ್ಲಿಯೂ ಎರಡನೇ ಸ್ಥಾನ ಪಡೆದು ಫೈನಲ್‌ ಪ್ರವೇಶಿಸಿದ್ದರು.

ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಚೋಪ್ರಾ ಅವರ ಮೇಲಿತ್ತು. ಸ್ಪರ್ಧೆಯಲ್ಲಿ ಗ್ರೆನಾಡದ ಆ್ಯಂಡರ್ಸನ್‌ ಪೀಟರ್ಸ್‌ ಅವರು ಚೋಪ್ರಾಗಿಂತ ಉತ್ತಮ ಸಾಧನೆ ತೋರಿದರು.

ಪೀಟರ್ಸ್‌ 90.54 ಮೀಟರ್‌ ದೂರ ಎಸೆದು ಚಿನ್ನದ ಪದಕ ಬಾಚಿಕೊಂಡಿದ್ದಾರೆ.ಚೆಕ್‌ ಗಣರಾಜ್ಯದ ಜಾಕೂಬ್‌ ವಾಡ್ಲೆಚ್‌ ಅವರು ದೂರ ಎಸೆಯುವುದರೊಂದಿಗೆ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗೆದ್ದರು.


ಈ ಬಗ್ಗೆ ಪ್ರತಿಕ್ರಿಯಿಸಿ, ಜಾವೆಲಿನ್ ಎಸೆಯಲು ಉತ್ತಮ ಪರಿಸ್ಥಿತಿ ಇರಲಿಲ್ಲ. ಗಾಳಿಯ ವೇಗವೂ ಹೆಚ್ಚಾಗಿದ್ದರೂ ಉತ್ತಮ ಪ್ರದರ್ಶನ ನೀಡುತ್ತೇನೆಂಬ ವಿಶ್ವಾಸವಿತ್ತು.

ನನ್ನ ಫಲಿತಾಂಶ ತೃಪ್ತಿದಾಯಕವಾಗಿದ್ದು, ದೇಶಕ್ಕಾಗಿ ಪದಕ ಗೆಲ್ಲಲು ಸಾಧ್ಯವಾಗಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ. ಸ್ಪರ್ಧೆ ಕಠಿಣ ಹಾಗೂ ಸವಾಲಿನಿಂದ ಕೂಡಿತ್ತು. ಪ್ರತಿಸ್ಪರ್ಧಿಗಳು ಉತ್ತಮವಾಗಿ ಎಸೆಯುತ್ತಿದ್ದರು.

ಇಂದಿನ ಸ್ಪರ್ಧೆಯಿಂದ ನಾನು ಸಾಕಷ್ಟು ವಿಚಾರಗಳನ್ನು ಕಲಿತುಕೊಂಡಿದ್ದೇನೆ. ಚಿನ್ನ ಗೆಲ್ಲಬೇಕೆಂಬ ಹಂಬಲ ಮುಂದುವರಿಯಲಿದೆ. ಪ್ರತಿ ಸಲವೂ ಚಿನ್ನ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ನಂಬಬೇಕು. ನನ್ನಿಂದ ಸಾಧ್ಯವಾಗುವ ಎಲ್ಲವನ್ನೂ ಮಾಡುತ್ತೇನೆ. ತರಬೇತಿ ಮೇಲೆ ಗಮನ ಕೇಂದ್ರಿಕರಿಸುತ್ತೇನೆ ಎಂದು ಹೇಳಿದ್ದಾರೆ.


19 ವರ್ಷದ ಬಳಿಕ ಪದಕ
ನೀರಜ್‌ ಚೋಪ್ರಾ ಅವರು ಬೆಳ್ಳಿ ಸಾಧನೆ ಮಾಡುವ ಮೂಲಕ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ 19 ವರ್ಷಗಳ ಬಳಿಕ ಭಾರತಕ್ಕೆ ಪದಕ ಗೆದ್ದುಕೊಟ್ಟರು.

LEAVE A REPLY

Please enter your comment!
Please enter your name here

Hot Topics

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.ಈ...

1924ರ ನಂತರದ ಹೋರಾಟದಲ್ಲಿ ಸಾವರ್ಕರ್ ಭಾಗವಹಿಸಿದ ಸಾಕ್ಷಿ ಇದ್ರೆ ತೋರ್ಸಿ-ಖಾದರ್ ಸವಾಲ್

ಮಂಗಳೂರು: ಸಾವರ್ಕರ್ 1924 ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಇತಿಹಾಸ ಇದ್ರೆ , ಇತಿಹಾಸ ಪುಸ್ತಕದಲ್ಲಿ ಅದು ಕಾಣ ಸಿಕ್ಕರೆ ಅಥವಾ ಸಾಕ್ಷಿ ಇದ್ರೆ ನನಗೆ ತೋರಿಸುತ್ತೀರಾ ಎಂದು...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....