Connect with us

    DAKSHINA KANNADA

    ನೀಟಾಗಿ ನಡೆಯದ “ನೀಟ್ ಪರೀಕ್ಷೆ…”! ರಿಸಲ್ಟ್‌ ಬಳಿಕ ತನಿಖೆಗೆ ಒತ್ತಾಯ..!

    Published

    on

    ಹೊಸದಿಲ್ಲಿ: ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ಈ ವರ್ಷ ನಡೆದಿದ್ದ ನೀಟ್‌ (ಯುಜಿ) ಪರೀಕ್ಷೆಯ ಫಲಿತಾಂಶಗಳು ಮೆರಿಟ್ ಪಟ್ಟಿ, ಟಾಪರ್‌ಗಳು ಮತ್ತು ಅಂಕಗಳ ವ್ಯವಸ್ಥೆಯಲ್ಲಿ ಗುರುತಿಸಲಾದ ವಿವಿಧ ಲೋಪ ದೋಷಗಳಿಂದಾಗಿ ಗೊಂದಲದ ಗೂಡಾಗಿದೆ. 67 ಮಂದಿಗೆ ಪ್ರಥಮ ರ್ಯಾಂಕ್, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ 8 ಮಂದಿಗೆ ಪ್ರಥಮ ರ್ಯಾಂಕ್‌, ಕೆಲವು ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್, ನಿರ್ಧರಿತ ದಿನಾಂಕಕ್ಕಿಂತ ಮೊದಲು ಅಂದರೆ ಲೋಕಸಭಾ ಚುನಾವಣೆಯ ಫಲಿತಾಂಶದ ದಿನದಂದೇ ನೀಟ್‌ ಪರೀಕ್ಷೆಯ ಫಲಿತಾಂಶ ಪ್ರಕಟ ಇತ್ಯಾದಿಗಳು ನೀಟ್‌ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಮತ್ತು ಅವರ ಪೋಷಕರಲ್ಲಿ ಅನೇಕ ಅನುಮಾನಗಳನ್ನು ಹುಟ್ಟು ಹಾಕಿವೆ.

    ಪರೀಕ್ಷೆ ನಡೆಸುವ ನೋಡಲ್ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ- ಎನ್‌ಟಿಎ ಇದರ ಕ್ರಮದ ಬಗ್ಗೆ ಅಸಮಾಧಾನವನ್ನು ಉಂಟು ಮಾಡಿದೆ. ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.   ಅಕ್ರಮಗಳನ್ನು ಮರೆಮಾಚಲು ಲೋಕ ಸಭಾ ಚುನಾವಣಾ ಫಲಿತಾಂಶದ ದಿನದಂದು ಫಲಿತಾಂಶಗಳನ್ನು ಘೋಷಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಫಲಿತಾಂಶಗಳನ್ನು ಜೂ. 14 ರಂದು ಘೋಷಿಸ ಬೇಕಾಗಿತ್ತು. ಅದರೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ಇನ್ನೂ ಇತ್ಯರ್ಥ ಆಗದಿರುವಾಗ ಫಲಿತಾಂಶ ಪ್ರಕಟಿಸಿದ್ದು ಯಾಕೆ..? ಲೋಕಸಭೆ ಚುನಾವಣೆಯ ಫಲಿತಾಂಶಗಳು ನೀಟ್‌ ಫಲಿತಾಂಶಗಳ ಗೊಂದಲ ಹಾಗೂ ವಿವಾದಗಳನ್ನು ಮುಚ್ಚಿ ಹಾಕಬಹುದೆಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ ಎಂಬುದು ನೊಂದ ಅಭ್ಯರ್ಥಿಗಳ ಆರೋಪ. ಆದರೆ ಎನ್‌ಟಿಎ ಅಕ್ರಮಗಳ ಆರೋಪಗಳನ್ನು ತಳ್ಳಿಹಾಕಿದೆ. ಈ ವರ್ಷ ಅಭ್ಯರ್ಥಿಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದಾಗಿ ಟಾಪ್ ಸ್ಕೋರರ್‌ಗಳ ಸಂಖ್ಯೆ ಹೆಚ್ಚಳವಾಗಿದೆ.

    ಮುಂದೆ ಓದಿ..;  ನೀಟ್‌ ಪರೀಕ್ಷೆಯಲ್ಲಿ ಎಕ್ಸ್‌ ಪರ್ಟ್ ಕಾಲೇಜಿನ ಅರ್ಜುನ್ ಕಿಶೋರ್ ದೇಶಕ್ಕೆ ಪ್ರಥಮ

    2023 ರಲ್ಲಿ 20,38,596 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 2024 ರಲ್ಲಿ ಹಾಜರಾದ ಅಭ್ಯರ್ಥಿಗಳ ಸಂಖ್ಯೆ 23,33,297 ಕ್ಕೆ ಏರಿದೆ. ಅಭ್ಯರ್ಥಿಗಳ ಹೆಚ್ಚಳವು ಸ್ವಾಭಾವಿಕವಾಗಿ ಪ್ರಥಮ ರ್ಯಾಂಕ್‌ ವಿಜೇತರ ಸಂಖ್ಯೆ ಹೆಚ್ಚಳಕ್ಕೆ  ಕಾರಣವಾಗಿದೆ ಎಂದು ಅದು ತಿಳಿಸಿದೆ. ಕೆಲವು ಕೇಂದ್ರಗಳಲ್ಲಿ ಪರೀಕ್ಷಾ ಸಮಯದ ನಷ್ಟವನ್ನು ಸರಿದೂಗಿಸಲು ವಿದ್ಯಾರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ ಕಾರಣ ಗ್ರೇಸ್ ಅಂಕಗಳನ್ನು ನೀಡಲಾಗಿದೆ ಎಂದು ಎನ್.ಟಿ.ಎ. ಸ್ಪಷ್ಟಪಡಿಸಿದೆ. ಫಲಿತಾಂಶದಲ್ಲಿ ದೋಷಗಳು ಕಂಡು ಬಂದಿರುವುದರಿಂದ ಅಭ್ಯರ್ಥಿಗಳು ಮತ್ತು ಅವರ ಪೋಷಕರು ಇದೀಗ  ಮರು ಪರೀಕ್ಷೆಗೆ ಆಗ್ರಹಿಸಿದ್ದಾರೆ. ಅಲ್ಲದೆ ಈ ಬಾರಿ ನೀಟ್‌ ಪರೀಕ್ಷಾ ಅಕ್ರಮಗಳ ಕುರಿತು ಸಿಬಿಐ ಅಥವಾ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯವೂ ಕೇಳಿ ಬಂದಿದೆ.

    1 Comment

    1 Comment

    1. Pingback: ಬಿಜೆಪಿ ಗೆಲುವಿಗಾಗಿ ಕಾಳಿ ದೇವಿಗೆ ಕೈ ಬೆರಳನ್ನೇ ಅರ್ಪಣೆ ಮಾಡಿದ ಕಾರ್ಯಕರ್ತ..!! - NAMMAKUDLA NEWS - ನಮ್ಮಕುಡ್ಲ ನ್ಯೂಸ್

    Leave a Reply

    Your email address will not be published. Required fields are marked *

    DAKSHINA KANNADA

    ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು

    Published

    on

    ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.

    ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

    ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

    Published

    on

    ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

    ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.

    Continue Reading

    DAKSHINA KANNADA

    ಅರ್ಜುನ್​ ಪತ್ತೆಗೆ ಸೇನೆಗೆ ಸಹಾಯ..! ಶಿರೂರಿಗೆ ಈಶ್ವರ ಮಲ್ಪೆಗೆ ಬುಲಾವ್..!

    Published

    on

    ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್​ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕಾಕ್ ನಿಂದ ಬಂದ ಪೋಕ್ಲೈನ್ ತನ್ನ ಕೆಲಸ ಮುಗಿಸಿದ್ದು, ವಾಪಾಸ್ ಆಗುತ್ತಿದೆ.

    ಇಂದು ಅರ್ಜುನ್​ಗಾಗಿ ಮುಳುಗು ತಜ್ಞರಿಂದ ಹುಡುಕಾಟ ನಡೆಯಲಿದೆ. ಈಶ್ವರ್ ಮಲ್ಪೆ ತಂಡ ಇಂದು ಶಿರೂರಿಗೆ ಬರಲಿದ್ದು, ಅರ್ಜುನ್​​ಗಾಗಿ ಹುಡುಕಾಡಲಿದ್ದಾರೆ. ಜಿಲ್ಲಾಡಳಿತದ ಮನವಿ ಮೇರೆಗೆ ಮುಳುಗು ತಜ್ಞರ ತಂಡ ಶಿರೂರಿಗೆ ಆಗಮಿಸಲಿದ್ದಾರೆ.

     

    ಗಂಗಾವಳಿ ನದಿಯಲ್ಲಿ ನೀರಿನ ವೇಗ ಹೆಚ್ಚಿರುವ ಹಿನ್ನಲೆಯಲ್ಲಿ, ನೀರಿನೊಳಗೆ ಹೋಗಲು ನೌಕಾದಳದ ಮುಳುಗು ತಜ್ಞರು ಹಿಂದೇಟು ಹಾಕಿದ್ದಾರೆ. ಈ ವೇಳೆ ಶಾಸಕ ಸತೀಶ್ ಸೈಲ್ ಸ್ಥಳೀಯ ಮೀನುಗಾರ ಹಾಗೂ ಈಶ್ವರ್ ಮಲ್ಪೆ ಸಹಾಯ ಕೇಳಿದ್ದಾರೆ.

    ಇಂದು ಅರ್ಜುನ್​ ಮತ್ತು ಲಾರಿ ಪತ್ತೆಯಾದರೆ ನದಿಯ ಕೆಳಗೆ ಸುಮಾರು 20 ಅಡಿ ಆಳದಲ್ಲಿರುವ ಲಾರಿ ಮೇಲಕ್ಕೆ ಎತ್ತಲು ಪ್ರಯತ್ನ ನಡೆಯಲಿದೆ.

    Continue Reading

    LATEST NEWS

    Trending