Connect with us

    LATEST NEWS

    NEET ಪರೀಕ್ಷಾ ಫಲಿತಾಂಶ ‘ಪರೀಕ್ಷೆಯ ಪಾವಿತ್ರ್ಯ’ದ ಮೇಲೆ ಪರಿಣಾಮ ಬೀರಿದೆ : ಸುಪ್ರೀಂಕೋರ್ಟ್

    Published

    on

    ದೆಹಲಿ/ಮಂಗಳೂರು: ಭಾರೀ ವಿವಾದಕ್ಕೆ ಒಳಗಾದ NEET ಪರೀಕ್ಷಾ ಫಲಿತಾಂಶ ‘ಪರೀಕ್ಷೆಯ ಪಾವಿತ್ರ್ಯ’ದ ಮೇಲೆ ಪರಿಣಾಮ ಬೀರಿದ್ದು, ಇದಕ್ಕೆ ಉತ್ತರ ನೀಡಲೇಬೇಕಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದೇ ವೇಳೆ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ.


    ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ – 2024 ಪದವಿಪೂರ್ವ (NEET-UG) 2024 ಅನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಬಗ್ಗೆ ಮಂಗಳವಾರ(ಜೂ.11) ವಿಚಾರಣೆ ನಡೆಯಿತು.

    ನೀಟ್ ಪರೀಕ್ಷಾ ಫಲಿತಾಂಶದ ಕುರಿತ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್​ಟಿಎ)ಗೆ ನೋಟಿಸ್ ನೀಡಿದೆ.

    ನ್ಯಾಯಮೂರ್ತಿ ವಿಕ್ರಮ್ ನಾಥ್​ ಹಾಗೂ ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠವು ಜೂ. 8 ರಂದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳ ಪಟ್ಟಿ ಮಾಡಿದೆ. 2024ನೇ ಸಾಲಿನ ನೀಟ್​-ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಸುಪ್ರೀಂಕೋರ್ಟ್​ಗೆ ಮೊರೆಹೋಗಿದ್ದಾರೆ.

    2024ನೇ ಸಾಲಿನ ನೀಟ್​ ಪರೀಕ್ಷೆಯು ಕಳೆದ ತಿಂಗಳ ಮೇ. 5 ರಂದು ನಡೆದಿತ್ತು. ದೇಶದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಹಾಗೂ ಇತರೆ ಕೋರ್ಸ್​ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಈ ಪರೀಕ್ಷೆಯನ್ನು ನಡೆಸಿತ್ತು. ಜೂ.​ 4 ರಂದು ಪ್ರಕಟವಾದ ನೀಟ್​ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳ ಕೌನ್ಸೆಲಿಂಗ್​ಗೆ ತಡೆಯಾಜ್ಞೆ ನೀಡಬೇಕು. ಹೊಸದಾಗಿ ನೀಟ್​ ಯುಜಿ ಪರೀಕ್ಷೆಯನ್ನು ನಡೆಸಬೇಕು ಎಂದು ಅರ್ಜಿಗಳು ಒತ್ತಾಯಿಸಿದ್ದವು.

    ಇದನ್ನೂ ಓದಿ : ಮಗುವಿನಿಂದ ಬಾಂ*ಬ್‌ ಬೆದರಿಕೆ ಸಂದೇಶ..! ಮಗು ಹೇಳಿದ್ದೇನು ?

    ನೀಟ್​ ಪರೀಕ್ಷೆ ಬರೆದ ಆಂಧ್ರಪ್ರದೇಶ ವಿದ್ಯಾರ್ಥಿಯೊಬ್ಬರು ಅರ್ಜಿ ಸಲ್ಲಿಸಿದ್ದು, ಸಮಯದ ನಷ್ಟದ ಆಧಾರದ ಮೇಲೆ 1536 ವಿದ್ಯಾರ್ಥಿಗಳಿಗೆ ಗ್ರೇಸ್​ ಅಂಕಗಳನ್ನು ನೀಡುವ ಎನ್​ಟಿಎ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

    DAKSHINA KANNADA

    ಫ್ರಿಡ್ಜ್​​​ ಮುಟ್ಟುವ ಮುನ್ನ ಹುಷಾರ್.. ವಿದ್ಯುತ್ ಶಾಕ್ ಹೊಡೆದು ತಾಯಿ-ಮಗಳು ಸಾವು

    Published

    on

    ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ದಾರುಣ ಘಟನೆ ನಡೆದಿದ್ದು, ವಿದ್ಯುತ್ ಸ್ಪರ್ಶಿಸಿ ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    55 ವರ್ಷದ ಶೈದಾ ಅವರು ಫ್ರಿಡ್ಜ್​​​ನಲ್ಲಿಟ್ಟಿದ್ದ ಮಾವಿನ ಹಣ್ಣು ಹೊರತೆಗೆಯಲು ಹೋಗಿದ್ದರು. ಆಗ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ಗಮನಿಸಿದ ಮಗಳು ಅಮ್ಮನ ರಕ್ಷಣೆಗೆ ಓಡಿ ಬಂದಿದ್ದಾಳೆ. ಈ ವೇಳೆ ಆಕೆಯೂ ವಿದ್ಯುತ್ ಶಾಕ್ ಹೊಡೆದಿದ್ದು, ಮಗಳು ಅಫ್ಸನಾ ಕಾತೂನ್ ಕೂಡ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.

    ಮೃತ ವ್ಯಕ್ತಿಯ ಮನೆಯಲ್ಲಿ ಮದುವೆ ಸಮಾರಂಭ ಇತ್ತು. ತಂಗಿಯ ಮದುವೆಯಲ್ಲಿ ಭಾಗಿಯಾಗಲು ತಾಯಿ ಮನೆಗೆ ಅಫ್ಸನಾ ಬಂದಿದ್ದಳು. ಬುಧವಾರ ನಡೆದ ಘಟನೆಯಲ್ಲಿ ತಾಯಿ ಮಗಳು ಸಾವನ್ನಪ್ಪಿದ್ದಾರೆ.

    ವಿಷಯ ತಿಳಿದು ಪೊಲೀಸರು ಮನೆಗೆ ಭೇಟಿ ನೀಡಿದ್ದರು. ಆದರೆ ಕುಟುಂಬಸ್ಥರು ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿದ್ದಾರೆ. ಹೀಗಾಗಿ ಪೊಲೀಸರು ಪಂಚನಾಮೆ ನಡೆಸಿ ತಾಯಿ ಹಾಗೂ ಮಗಳ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಮನಪಾ ಆದೇಶ

    Published

    on

    ಮಂಗಳೂರು: ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ.

    ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಅಳವಡಿಸಿಕೊಂಡು ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದೆ.

    ಅವೈಜ್ಞಾನಿಕವಾಗಿ ಭೂಮಿಯನ್ನು ಅಗೆದು ಹಾಕದಂತೆ ಸೂಚನೆ ನೀಡಿದೆ. ಆದೇಶ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಿ ಮನಾಪ ಆಯುಕ್ತರು ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ.

    Continue Reading

    DAKSHINA KANNADA

    ಕರಾವಳಿ ಭಾಗದಲ್ಲಿ ಇಂದಿನಿಂದ ಮೂರು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ

    Published

    on

    ರಾಜ್ಯದಲ್ಲಿ‌ ಮುಂದಿನ 3 ದಿನ ಕಾಲ ಮಳೆರಾಯ ಅಬ್ಬರಿಸಲಿದ್ದಾನೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಮೂರು ದಿನ ಭರ್ಜರಿ ಮಳೆಯಾಗುವ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿಯ ಭಾಗದಲ್ಲಿ ಎಚ್ಚರಿಕೆ ವಹಿಸಲಾಗಿದೆ.

    ಈಗಾಗಲೇ ಕಳೆದ ಹಲವು ದಿನಗಳಿಂದಲೂ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ. ಮತ್ತೆ ಮಳೆ ಅಬ್ಬರಿಸುತ್ತಿದೆ. ಹಾಗೇ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಮಳೆ ಆರ್ಭಟಿಸುವ ಮುನ್ಸೂಚನೆಯು ಸಿಗುತ್ತಿದೆ.

    ಚಿಕ್ಕಮಗಳೂರು ಜಿಲ್ಲೆಗೆ ಜುಲೈ 7ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ ಜುಲೈ 7ರವರೆಗೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.

    Continue Reading

    LATEST NEWS

    Trending