Thursday, August 11, 2022

ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯದ ಆರೋಪ: ತಾಯಿ ಸಾವು-ನವಜಾತ ಶಿಶು ಅನಾಥ

ಚಿಕ್ಕಬಳ್ಳಾಪುರ: ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯತೆಯಿಂದ ತಾಯಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆ ಎದುರು ನಡೆದಿದೆ.


ತಾಲೂಕಿನ ಬೈರಾಪುರ ಗ್ರಾಮದ ಸವಿತಾ(22) ಮೃತ ಮಹಿಳೆ. ಹೆರಿಗೆಗಾಗಿ ತಾಯಿ, ಮಗು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆ ಆಧಿಕ ರಕ್ತಸ್ರಾವದಿಂದ ಹೆರಿಗೆಯಾದ ಕ್ಷಣದಲ್ಲೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಮೃತಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ಹೊಟ್ಟೆಯಲ್ಲಿದ್ದ ಮಗು 4 ಕೆ.ಜಿ. ತೂಕ ಇದ್ದು ಹೆರಿಗೆ ಮಾಡಿಸುವುದು ಸವಾಲಿನ ಕೆಲಸವಾಗಿತ್ತು.

ಇದೀಗ ತಾಯಿ ಕಳೆದುಕೊಂಡು ನವಜಾತ ಶಿಶು ಅನಾಥವಾಗಿದೆ. ಇದರಿಂದ ಸಿಟ್ಟಿಗೆದ್ದ ಕುಟುಂಬದವರು ವೈದ್ಯರ ವಿರುದ್ಧ ಸರ್ಕಾರಿ ತಾಯಿ ಮಗು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.

ಆಕ್ರೋಶಗೊಂಡ ಮೃತಪಟ್ಟ ಮಹಿಳೆಯ ಗಂಡ ರಮೇಶ್ “ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದರೆ, ನಾವು ಕರೆದುಕೊಂಡು ಹೋಗುತ್ತಿದ್ದೆವು.

ಆದರೆ ವೈದ್ಯರು ಇಲ್ಲಿಯೇ ಹೆರಿಗೆ ಮಾಡುವುದಾಗಿ ಧೈರ್ಯ ಹೇಳಿ ಕೊನೆಗೆ ಜೀವವನ್ನು ತೆಗೆದಿದ್ದಾರೆ. ಹುಟ್ಟಿದ ಕ್ಷಣದಲ್ಲಿ ಮಗುವಿಗೆ ತಾಯಿ ಇಲ್ಲದಂತೆ ಮಾಡಿದ್ದಾರೆ” ಎಂದು ಮೃತಳ ಗಂಡ ಆರೋಪಿಸಿದ್ದಾರೆ

LEAVE A REPLY

Please enter your comment!
Please enter your name here

Hot Topics

ಸ್ಥಳೀಯರೇ ಪ್ರವೀಣ್‌ನನ್ನು ಹತ್ಯೆಗೈದಿದ್ದು, ಆರೋಪಿಗಳಿಗೆ ಎಸ್‌ಡಿಪಿಐ ಲಿಂಕ್‌ ಎಂದ ಎಡಿಜಿಪಿ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.ಈ ಬಗ್ಗೆ ಮಂಗಳೂರಿನ ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

ಮಂತ್ರಾಲಯದಲ್ಲಿ ರಾಯರಿಗೆ ಪೂಜೆ ಸಲ್ಲಿಸಿದ ಮಾಜಿ CM ಬಿ.ಎಸ್ ವೈ & ಕುಟುಂಬ

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಅಂಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಹಾಗೂ ಸಹೋದರ ಬಿ. ವೈ ವಿಜಯೇಂದ್ರ ಅವರು...

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜಗಮಗಿಸುತ್ತಿದೆ ಮಂಗಳೂರು ಸಿಟಿ ಕಾರ್ಪೊರೇಶನ್

ಮಂಗಳೂರು: ಆಜಾದಿ ಕಾ ಅಮೃತ್‌ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ಹರ್‌ಘರ್‌ತಿರಂಗಾ...