Connect with us

    FILM

    ಕ್ಯೂಟ್​ ಮಗಳ ಜೊತೆ ಕ್ರಿಸ್ಮಸ್ ಹಬ್ಬದ ಖುಷಿಯಲ್ಲಿ ನಟಿ ನೇಹಾ ಗೌಡ

    Published

    on

    ಕನ್ನಡ ಕಿರುತೆರೆಯಲ್ಲಿ ಗೊಂಬೆ, ಬಿಗ್​ಬಾಸ್​ ಬೆಡಗಿ ನೇಹಾ ಗೌಡ ಮನೆಯಲ್ಲಿ ಸಂತಸದ ಮನೆ ಮಾಡಿದೆ. ಕನ್ನಡದ ಸ್ಟಾರ್ ದಂಪತಿ ತಮ್ಮ ಮುದ್ದಾದ ಮಗಳ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ಲಕ್ಷ್ಮೀ ಬಾರಮ್ಮ ಸೀರಿಯಲ್​ ಮೂಲಕ ಕನ್ನಡಿಗರ ಮನಸ್ಸಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿರೋ ನೇಹಾ ಗೌಡ ದಂಪತಿ ಜೂನ್​ 1ರಂದು ಅಭಿಮಾನಿಗಳಿಗೆ ಗುಡ್​ ನ್ಯೂಸ್ ಕೊಟ್ಟಿದ್ದರು.

    ಇದೀಗ ನಟಿ ಗೌಡ ಕ್ರಿಸ್ಮಸ್ ಹಬ್ಬದ ಖುಷಿಯಲ್ಲಿದ್ದಾರೆ. ಇದೇ ಖುಷಿಯಲ್ಲಿ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಮಗಳ ಜೊತೆಗೆ ಮುದ್ದಾದ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಇದೇ ಕ್ಲಿಪ್​ನಲ್ಲಿ ನೇಹಾ ಗೌಡ ಮಗಳು ಕೆಂಪು ಬಣ್ಣದ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾಳೆ. ಸದ್ಯ ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ. ಇದನ್ನೂ ನೋಡಿದ ಅಭಿಮಾನಿಗಳು ಎಷ್ಟು ಮುದ್ದಾಗಿದೆ, ನಿಮ್ಮಿಬ್ಬರ ಮೇಲೆ ಯಾರ ದೃಷ್ಟಿ ಬೀಳದಿರಲಿ ಎಂದು ಕಾಮೆಂಟ್ಸ್ ಹಾಕಿದ್ದಾರೆ.

    ಹೌದು, ನಟಿ ನೇಹಾ ಗೌಡ ಅವರು ಲಕ್ಷ್ಮೀ ಬಾರಮ್ಮ ಸೀರಿಯಲ್‌ನಲ್ಲಿ ಗೊಂಬೆ ಪಾತ್ರದಲ್ಲಿ ಅಭಿನಯಿಸಿದವರು. ಗೊಂಬೆ ಪಾತ್ರದ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ನಟಿ ನೇಹಾ ಗೌಡ ಹಾಗೂ ಚಂದನ್​ ಗೌಡ ಫೆಬ್ರವರಿ 18, 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಚಂದನ್​ ಗೌಡ ಅವರು ಕಲರ್ಸ್​ ಕನ್ನಡದಲ್ಲಿ ಮೂಡಿ ಬರುತ್ತಿರೋ ಅಂತರಪಟ ಸೀರಿಯಲ್​ನಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದರು.

    ಸದ್ಯ ನೇಹಾ ಗೌಡ ಅವರ ಮತ್ತೊಂದು ಲೈಫ್​ ಶುರುವಾಗಿದೆ. ಅಕ್ಟೋಬರ್​ 29ರಂದು ನಟಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ರು. ಚಂದನ್​ಗೆ ಮಕ್ಕಳು ಅಂದ್ರೆ ಸಿಕ್ಕಾಪಟ್ಟೆ ಇಷ್ಟ. ನೇಹಾಗೂ ಅಷ್ಟೇ ಪ್ರೀತಿ. ಮಗಳು ಬಂದ್ಮೇಲೆ ಅವಳೇ ಪ್ರಪಂಚ ಆಗಿದ್ದಾಳೆ. ದೊಡ್ಡಮ್ಮನಾದ ಸಂಭ್ರಮದಲ್ಲಿ ಸೋನು ಗೌಡ ಇದ್ದಾರೆ.

    Click to comment

    Leave a Reply

    Your email address will not be published. Required fields are marked *

    FILM

    ಸಂಭಾವನೆಯಲ್ಲಿ ದಾಖಲೆ ಬರೆದ ಯಶ್ !

    Published

    on

    ಮಂಗಳೂರು/ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಬಾಲಿವುಡ್ ನಟ-ನಟಿಯರು ಅತಿಹೆಚ್ಚು ಸಂಭಾವನೆ ಪಡೆದುಕೊಳ್ಳುತ್ತಿದ್ದರು. ಆದರೆ ಈಗ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಖಳನಾಯಕ ಪಾತ್ರಕ್ಕಾಗಿ ಯಶ್ ಮೊದಲ ಬಾರಿಗೆ ದಾಖಲೆಯ ಸಂಭಾವನೆ ಪಡೆಯುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

    ಬಾಲಿವುಡ್ ನಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್, ರಣಬೀರ್ ಕಪೂರ್ ಮತ್ತಿತರರು ಅತಿ ಹೆಚ್ಚು ಸಂಭಾವನೆ ಪಡೆಯುತ್ತಾರೆ. ಬಳಿಕ ಸೌತ್ ಸ್ಟಾರ್ ಗಳಾದ ರಜನಿಕಾಂತ್, ಕಮಲ್ ಹಾಸನ್ ಮತ್ತು ಪ್ರಭಾಸ್ ಸೇರಿದಂತೆ ಹಲವು ನಟರು ದುಪ್ಪಟ್ಟು ಸಂಭಾವನೆ ಪಡೆಯುತ್ತಾರೆ ಎಂದು ವರದಿಯಾಗಿದೆ. ಈ ಸಾಲಿಗೆ ಈಗ ಕನ್ನಡದ ಸ್ಟಾರ್ ನಟ ಯಶ್ ಸೇರ್ಪಡೆಗೊಂಡಿದ್ದಾರೆ.

    ಕೆಜಿಎಫ್ ಚಿತ್ರದ ಮೂಲಕ ಖ್ಯಾತಿ ಪಡೆದಿರುವ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಸಾಲು ಸಾಲು ಅವಕಾಶಗಳು ದೊರೆಯುತ್ತಿದೆ. ಆದರೆ ಯಶ್ ತಮ್ಮ ಮುಂದಿನ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಎಲ್ಲೆಡೆ ಸದ್ದು ಮಾಡುತ್ತಿದೆ.

    ಬಾಲಿವುಡ್ ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ರಾಮಾಯಣ ಚಿತ್ರದಲ್ಲಿ ಯಶ್ ಖಳನಾಯಕನ(ರಾವಣ) ಪಾತ್ರ ನಿರ್ವಹಿಸುತ್ತಿದ್ದು, ಈ ಪಾತ್ರಕ್ಕೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ ಇದೆ ಎಂದು ವರದಿಯಾಗಿದೆ. ಅಲ್ಲದೇ, ಈ ಚಿತ್ರದಲ್ಲಿನ ರಾಮನ ಪಾತ್ರಧಾರಿ ರಣಬೀರ್ ಕಪೂರ್ ಗಿಂತ ದುಪ್ಪಟ್ಟು ಎಂದು ಹೇಳಲಾಗುತ್ತಿದೆ.

    Continue Reading

    FILM

    ಆ ಒಂದು ದೃಶ್ಯದಿಂದ ಪುಷ್ಪ 2 ಚಿತ್ರಕ್ಕೆ ಮತ್ತೆ ಸಂಕಷ್ಟ!

    Published

    on

    ಮಂಗಳೂರು/ಹೈದರಾಬಾದ್ : ಪುಷ್ಪ 2 ಚಿತ್ರಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರದ ದೃಶ್ಯವೊಂದನ್ನು ಆಕ್ಷೇಪಿಸಿ ಕಾಂಗ್ರೆಸ್ ನಾಯಕರೊಬ್ಬರು ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಬಗ್ಗೆ ವರದಿಯಾಗಿದೆ. ಪುಷ್ಪ 2 ಚಿತ್ರದ ದೃಶ್ಯವೊಂದರಲ್ಲಿ ಪೊಲೀಸರಿಗೆ ಅವಮಾನ ಮಾಡಲಾಗಿದೆ ಎಂದು ತೆಲಂಗಾಣ ಕಾಂಗ್ರೆಸ್ ನಾಯಕ ತಿನ್ಮಾರ್ ಮಲ್ಲಣ್ಣ ಪೊಲೀಸರಿಗೆ ದೂರು ನೀಡಿದ್ದಾರೆ.

    ಮೇಡಿಪಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ಚಿತ್ರದ ನಾಯಕ ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್, ನಿರ್ಮಾಪಕ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

    ಚಿತ್ರದ ಒಂದು ದೃಶ್ಯದಲ್ಲಿ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್(ಫಹದ್ ಫಾಸಿಲ್) ಈಜುಕೊಳದಲ್ಲಿ ಇರುವಾಗ ಪುಷ್ಪರಾಜ್(ಅಲ್ಲು ಅರ್ಜುನ್) ಮೂತ್ರ ವಿಸರ್ಜನೆ ಮಾಡುತ್ತಾನೆ. ಈ ದೃಶ್ಯವನ್ನು ಅವಹೇಳನಕಾರಿ ಎಂದು ಕರೆದಿರುವ ಮಲ್ಲಣ್ಣ, ಪೊಲೀಸರಿಗೆ ಮಾಡಿದ ಅವಮಾನ ಎಂದು ಹೇಳಿದ್ದು, ನಿರ್ಮಾಪಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

    ಇದನ್ನೂ ಓದಿ : ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಚಿನ್ನ ಖರೀದಿಸಿ ವಂಚನೆ; ನಟ ಧಮೇಂದ್ರ ವಿರುದ್ದ ಎಫ್ ಐ ಆರ್ ದಾಖಲು !

    ಸಂಧ್ಯಾ ಚಿತ್ರಮಂದಿರಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ ಸಂದರ್ಭ ಕಾಲ್ತುಳಿತ ನಡೆದು, ಓರ್ವ ಮಹಿಳೆ ಸಾ*ವನ್ನಪ್ಪಿ, ಆಕೆಯ ಪುತ್ರ ಗಾಯಗೊಂಡಿದ್ದರು. ಇದು ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ ಪ್ರಕರಣವಾಗಿದ್ದು,  ಈ ಬಗ್ಗೆ ಅಲ್ಲು ಅರ್ಜುನ್‌ರನ್ನು ಬಂಧಿಸಲಾಗಿತ್ತು. ಸದ್ಯ ಅವರು ಮಧ್ಯಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

     

    Continue Reading

    bangalore

    ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಚಿನ್ನ ಖರೀದಿಸಿ ವಂಚನೆ; ನಟ ಧಮೇಂದ್ರ ವಿರುದ್ದ ಎಫ್ ಐ ಆರ್ ದಾಖಲು !

    Published

    on

    ಮಂಗಳೂರು/ಬೆಂಗಳೂರು: ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ ಖರೀದಿಸಿದ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಡಿಸಿಎಂ ಡಿ.ಕೆ ಶಿವಕುಮಾರ್ ಸಹೋದರ ಡಿ.ಕೆ ಸುರೇಶ್ ಅವರ ತಂಗಿ ಎಂದು ನಂಬಿಸಿ 8.41 ಕೋಟಿ ರೂಪಾಯಿ ಮೌಲ್ಯದ 14 ಕೆಜಿ 660 ಗ್ರಾಂ ಚಿನ್ನ ಖರೀದಿಸಿ ವಂಚನೆ ಮಾಡಿರೋ ಆರೋಪ ಕೇಳಿ ಬಂದಿದೆ.

    ಆರ್.ಆರ್ ನಗರದ ಐಶ್ವರ್ಯ ಗೌಡ (ನವ್ಯಶ್ರೀ) ಅವರ ಮೇಲೆ ಈ ವಂಚನೆ ಆರೋಪ ಕೇಳಿ ಬಂದಿದ್ದು, ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

    ಕಳೆದ 2023 ಅಕ್ಟೋಬರ್‌ನಿಂದ 2024 ಏಪ್ರಿಲ್‌ನವರೆಗೆ ಐಶ್ವರ್ಯ ಗೌಡ ಅವರು ಹಂತ ಹಂತವಾಗಿ ಚಿನ್ನವನ್ನು ಪಡೆದಿದ್ದಾರೆ. ಹಣ ಕೇಳಿದಾಗ ಡಿ.ಕೆ ಸುರೇಶ್ ಅವರಿಂದ ಕರೆ ಮಾಡಿಸಿ ಕಾಲಾವಕಾಶ ಕೋರಿರುವುದಾಗಿ ಎಫ್ಐಆರ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

    ಇದನ್ನೂ ಓದಿ: ತೈವಾನ್ ಗೆ ಅಮೆರಿಕಾ ಸಹಾಯ; ವಾರ್ನಿಂಗ್ ಕೊಟ್ಟ ಚೀನಾ !

    ಅಷ್ಟೇ ಅಲ್ಲ ಸ್ಯಾಂಡಲ್‌ವುಡ್ ನಟ ಧರ್ಮ ಎಂಬುವವರಿಂದ ಕರೆ ಮಾಡಿಸಿ ಕೊಲೆ ಮಾಡಿಸೋದಾಗಿ ಬೆದರಿಕೆ ಹಾಕಿರೋ ಆರೋಪ ಕೂಡ ಮಾಡಲಾಗಿದೆ. ಡಿ.ಕೆ ಸುರೇಶ್​ ವಾಯ್ಸ್​ನಲ್ಲಿ ನಟ ಧರ್ಮೇಂದ್ರ ಅವರು ಕರೆ ಮಾಡಿ ಮಾತನಾಡಿದ್ದಾರೆ ಎಂದು ಚಿನ್ನದ ವ್ಯಾಪಾರಿ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದ ಅಂಗಡಿ ಮಾಲೀಕರಾದ ವನಿತಾ ಐತಾಳ್ ದೂರಿನಲ್ಲಿ ತಿಳಿಸಿದ್ದಾರೆ.

    8.41 ಕೋಟಿ ಮೌಲ್ಯದ ಚಿನ್ನ ಖರೀದಿಸಿ ವಂಚಿಸಿರೋ ಈ ಪ್ರಕರಣದಲ್ಲಿ ಮೂವರ ಮೇಲೆ FIR ದಾಖಲಾಗಿದೆ. ಐಶ್ವರ್ಯ ಗೌಡ, ಅವರ ಪತಿ‌ ಹರೀಶ್ ಕೆ.ಎನ್ ಹಾಗೂ ಸಿನಿಮಾ ನಟ ಧರ್ಮೇಂದ್ರ ವಿರುದ್ಧ ದೂರು ನೀಡಲಾಗಿದೆ.

    ಐಶ್ವರ್ಯ ಗೌಡ ಅವರ ಪತಿ‌ ಹರೀಶ್ ಕೆ.ಎನ್ ಕೂಡ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಡಿ ಕೆ ಸುರೇಶ್ ತಂಗಿ, ನನಗೆ ಅನೇಕ‌ ರಾಜಕೀಯ ವ್ಯಕ್ತಿಗಳ ಸಂಪರ್ಕವಿದೆ. ನಾನು ದೊಡ್ಡ ಬ್ಯುಸಿನೆಸ್ ವುಮೆನ್. ನಿಮಗೆ ಒಳ್ಳೆ ವ್ಯಾಪಾರ ವಹಿವಾಟು ನೀಡುತ್ತೇನೆ ಎಂದೆಲ್ಲ ಹೇಳಿ ವನಿತಾ ಅವರನ್ನು ಐಶ್ವರ್ಯ ನಂಬಿಸಿದ್ದರು ಎನ್ನಲಾಗಿದೆ. ಸಧ್ಯ ಘಟನೆ ಬಗ್ಗೆ ಚಂದ್ರ ಲೇಔಟ್​ನಲ್ಲಿರುವ ವಾರಾಹೀ ವರ್ಲ್ಡ್ ಆಫ್ ಗೋಲ್ಡ್ ಜ್ಯುವೆಲ್ಲರಿ ಶಾಪ್ ಮಾಲೀಕರಾದ ವನಿತಾ ಅವರು ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Continue Reading

    LATEST NEWS

    Trending