ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ – ಪಂಗಡವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು, ಯಾರಿಗೆ, ಯಾವಾಗ, ಯಾರಮೇಲಾದರೂ ಎಲ್ಲಿ ಬೇಕಾದರೂ ಪ್ರೀತಿ ಹುಟ್ಟಬಹುದು.
ಮಂಗಳೂರು: ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ – ಪಂಗಡವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು, ಯಾರಿಗೆ, ಯಾವಾಗ, ಯಾರಮೇಲಾದರೂ ಎಲ್ಲಿ ಬೇಕಾದರೂ ಪ್ರೀತಿ ಹುಟ್ಟಬಹುದು.
ಇದಕ್ಕೆ ನೆದರ್ಲೆಂಡ್ ಯುವತಿ ಮಂಗಳೂರಿನ ಯುವಕ ಪರಸ್ಪರ ಪ್ರೀತಿಸಿ ಮದುವೆಯಾಗಿರುವ ಘಟನೆ ಸಾಕ್ಷಿಯಾಗಿದೆ.
ಯುವಕ ಮೂಲತಃ ಮಂಗಳೂರಿನವನಾಗಿದ್ದು ನೆದರ್ಲೆಂಡ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ.ಈ ವೇಳೆ ಪ್ರೀತಿಯಾಗಿದ್ದು , ಇಬ್ಬರೂ ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದಾರೆ .
ನೆದರ್‌ಲೆಂಡ್ ಯುವತಿ ಮುಸ್ಲಿಂ ಸಂಪ್ರದಾಯದಂತೆಯೇ ಇಲ್ಲಿನ ಸುರತ್ಕಲ್ ನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.ಯುವತಿ ಕುಟುಂಬಸ್ಥರೂ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.
ಈ ಸಂಭ್ರಮದ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಮದುವೆ ಬಳಿಕ ಭಾಷೆ ತಿಳಿಯದ ಹುಡುಗನ ಹಿರಿಯಜ್ಜಿ ವಿದೇಶಿಗರ ಜೊತೆ ಮಾತನಾಡಲು ಪ್ರಯತ್ನಿಸಿದ್ದಾರೆ, ಈ ತಮಾಷೆಯ ವೀಡಿಯೋ ತುಣುಕು ನೆಟ್ಟಿಗರಲ್ಲಿ ಹಾಸ್ಯ ತರಿಸಿದೆ.