Sunday, September 27, 2020

ನೆಟ್ವರ್ಕ್ ಇಲ್ಲದ ಡಿಜಿಟಲ್ ಇಂಡಿಯಾ…ಆನ್ ಲೈನ್ ಕ್ಲಾಸ್ ಗಾಗಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!   

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!    ಮಂಗಳೂರು : ಅಶ್ವತ್ಥ ಎಲೆಯನ್ನು ಕಲಾತ್ಮಕವಾಗಿ ಕತ್ತರಿಸಿ ಚಿತ್ರ ರಚಿಸುವ ಕಲೆ ಇತ್ತೀಚೆನ ದಿನಗಳಲ್ಲಿ...

ಟೀಂ ಗರುಡ ಎಂಬ ಪಡ್ಡೆ ಹುಡುಗರ ಗ್ಯಾಂಗ್ ನ ಮಟ್ಟ ಹಾಕಿದ ಉಡುಪಿ ಪೊಲೀಸರು

ಉಡುಪಿ :ಉಡುಪಿ ನಗರ ಆಸುಪಾಸಿನ ದ್ವಿಚಕ್ರ ವಾಹನದಲ್ಲಿ ಬಂದು ಹಣ, ಮೊಬೈಲ್, ಪರ್ಸ್ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮೊಹಮ್ಮದ್ ಆಶಿಕ್(19), ಮಹಮ್ಮದ್ ಆಸಿಫ್ ಯಾನೆ ರಮೀಝ್(30), ಮಿಸ್ವಾ(22),...

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! ಉಡುಪಿ : ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು...

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..! ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ. ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ...

ಕೊರೊನಾದಿಂದಾಗಿ ಮೃತಪಟ್ಟ ಕೇಂದ್ರ ಸಚಿವರೊಬ್ಬರ ಅಂತ್ಯಕ್ರಿಯೆ ಹೀಗೂ ನಡೆಯುತ್ತಾ….!!

ಬೆಂಗಳೂರು : ಕೊರೊನಾ ವೈರಸ್ ಸೋಂಕು ಬಂದವರನ್ನು ಅನೇಕರು ತುಂಬ ಹೀನಾಯವಾಗಿ ನೋಡುತ್ತಾರೆ. ಬಹುತೇಕ ಸಾಮಾಜಿಕ ಬಹಿಷ್ಕಾರ ಇರುತ್ತೆ ಅನ್ನೊದನ್ನು ಕೇಳಿದ್ದೇವೆ. ಅದರಲ್ಲೂ ಕೊರೊನಾದಿಂದ ಸತ್ತವರ ಮುಖ ನೋಡಲು, ಹತ್ತಿರ ಹೋಗಲು, ಅವರ ಅಂತ್ಯಕ್ರಿಯೆಯನ್ನು...

ಪುತ್ತೂರು : ದಕ್ಷಿಣಕನ್ನಡ ವಿದ್ಯಾವಂತರ, ಅಭಿವೃದ್ಧಿ ಹೊಂದಿರುವ ಜಿಲ್ಲೆ ಎನ್ನುವ ಮಾತಿದೆ. ಆದರೆ ಇಲ್ಲಿನ ವಿದ್ಯಾವಂತರಾಗಲು ಪಡುವ ಪಾಡೇನು ಎನ್ನುವುದು ಇದೀಗ ಜಗಜ್ಜಾಹೀರಾಗುತ್ತಿದೆ. ಕೊರೊನಾ ಹಿನ್ನಲೆಯಲ್ಲಿ ಶಾಲಾ- ಕಾಲೇಜುಗಳು ಬಂದ್ ಆಗಿರುವ ಹಿನ್ನಲೆಯಲ್ಲಿ ಈ ಭಾಗದ ವಿದ್ಯಾರ್ಥಿಗಳು ಕಲಿಕೆಗಾಗಿ ಪಡುತ್ತಿರುವ ಪಾಡು ದೇವರಿಗೇ ಪ್ರೀತಿ.


ಶಿಕ್ಷಣ ಸಚಿವರು ರಾಜ್ಯ ಸರಕಾರ ಶಾಲೆಗಳಿಗೆ ಆನ್ ಲೈನ್ ಕ್ಲಾಸ್ ನಡೆಸಲು ಅವಕಾಶ ನೀಡಿದ್ದಾರೆ. ಆದರೆ ಅದಕ್ಕೂ ಮೊದಲು ರಾಜ್ಯದ ಮೊಬೈಲ್ ನೆಟ್ ವರ್ಕ್ ಕವರೇಜ್ ಹೇಗಿದೆ ಅಂತ ಒಂದು ಬಾರಿಯೂ ನೋಡಲಿಲ್ಲ. ಡಿಜಿಟಲ್ ಇಂಡಿಯಾ ಎಂದು ಪ್ರಚಾರ ಮಾಡಲು ಹೊರಟ ಕೇಂದ್ರ ಸರಕಾರವೂ ದೇಶದಲ್ಲಿ ನೆಟ್ ವರ್ಕ್ ಇಲ್ಲದ ಪ್ರದೇಶಗಳೂ ಇವೆ ಎನ್ನುವ ಸಾಮಾನ್ಯ ಮಾಹಿತಿ ಕೂಡ ಇದ್ದಂತಿಲ್ಲ.


ಡಿಜಿಟಲ್ ಆಗಿರುವ ಇಂಡಿಯಾದಲ್ಲಿ ಆನ್ ಲೈನ್ ತರಗತಿಗಳಿಗೆ ವಿಧ್ಯಾರ್ಥಿಗಳು ಕಿಲೋ ಮೀಟರ್ ಅಲೆದಾಡುವ ಪರಿಸ್ಥಿತಿ ಬಂದೊದಗಿದೆ.
ಹೌದು ಬೆಟ್ಟ-ಗುಡ್ಡ, ಬಯಲು ಸೀಮೆ- ದಟ್ಟ ಕಾಡು ಹೀಗೆ ಪ್ರಕೃತಿಯ ಎಲ್ಲಾ ರೂಪಗಳನ್ನು ಮೈಗೂಡಿಸಿಕೊಂಡಿರುವ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ನೆಟ್ವರ್ಕ್ ನದ್ದೇ ಪ್ರಾಬ್ಲಮ್.

ಮಂಗಳೂರು ಸೇರಿದಂತೆ ಪಟ್ಟಣಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈಗಾಗಲೇ ಆನ್ ಲೈನ್ ಕ್ಲಾಸ್ ಆರಂಭಗೊಂಡಿದ್ದು, ಈ ಕ್ಲಾಸ್ ಗಳನ್ನು ಎಟೆಂಡ್ ಮಾಡೋದೇ‌ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ತಲೆನೋವಾಗಿದೆ. ಕುಗ್ರಾಮಗಳಲ್ಲಿ ಇರುವಂತಹ ಈ ವಿದ್ಯಾರ್ಥಿಗಳು ಮೊಬೈಲ್ ನೆಟ್ವರ್ಕ್ ಹುಡುಕಿಕೊಂಡು ಮನೆ ಬಿಟ್ಟು ಬೀದಿ ಸುತ್ತಾಡಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂ‌ಬಲ್ಲಿನ ವಿದ್ಯಾರ್ಥಿಗಳಿಗೆ ಬಸ್ ನಿಲ್ದಾಣವೇ ತರಗತಿಯಾಗಿದೆ.

ಬೆಳಿಗ್ಗೆ ಎದ್ದು ಆನ್ ಲೈನ್ ಕ್ಲಾಸ್ ಗೆ ಹಾಜರಾಗಲು ಇಲ್ಲಿನ ಹತ್ತಾರು ವಿದ್ಯಾರ್ಥಿಗಳು ಈ ಬಸ್ ನಿಲ್ದಾಣದ ಬಳಿ ಬರುತ್ತಾರೆ. ಬೆಳಿಗ್ಗಿನಿಂದ ಮಧ್ಯಾಹ್ನದವರೆಗೆ ತರಗತಿ ಇರುವ ಕಾರಣ ಕುಳಿತುಕೊಳ್ಳಲು ಕುರ್ಚಿಗಳನ್ನೂ ಕೊತ್ತುಕೊಂಡು ಬರುತ್ತಾರೆ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಹೆಚ್ಚಾಗಿ ಇಲ್ಲದ ಕಾರಣ ಈ ವಿದ್ಯಾರ್ಥಿಗಳ ಕ್ಲಾಸ್ ಗಳಿಗೆ ಯಾವುದೇ ಅಡಚಣೆಯಾಗುತ್ತಿಲ್ಲ.

ಮೊಬೈಲ್ ನೆಟ್ವರ್ಕ್ ಗಾಗಿ ಮನೆಯಿಂದ ಒಂದು,ಎರಡು ಕಿಲೋಮೀಟರ್ ಕಾಡಿನ ಹಾದಿಯಲ್ಲಿ ಬರುವ ಈ ವಿದ್ಯಾರ್ಥಿಗಳು ಮಧ್ಯಾಹ್ನದ ತನಕ ಬಸ್ ನಿಲ್ದಾಣದಲ್ಲೇ ನಿಂತು ಬಳಿಕ ತರಗತಿ ಮುಗಿದ ಬಳಿಕ ಮನೆಗೆ ಮರಳುತ್ತಾರೆ. ಸರಕಾರಿ ಸಾಮ್ಯದ ಬಿಎಸ್ಎನ್ಎಲ್ಲ ಸೇರಿದಂತೆ ಈ ಭಾಗದಲ್ಲಿ ಯಾವ ನೆಟ್ವರ್ಕ್ ಗಳೂ ವರ್ಕ್ ಆಗದ ಕಾರಣ ವಿದ್ಯಾರ್ಥಿಗಳು ಆನ್ಲೈನ್ ಕ್ಲಾಸ್ ಗಳಿಗಾಗಿ ಈ‌ ಪಾಡು ಪಡುವಂತಾಗಿದೆ. ಜಿಲ್ಲೆಯ ಎಲ್ಲಾ ಊರಿನ ಸಮಸ್ಯೆಗಳೂ ಇದೊಂದೇ ಆಗಿರುವುದರಿಂದ ಎಲ್ಲರೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಅಜೆಸ್ಟ್ ಆಗಿಕೊಂಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.