Tuesday, July 5, 2022

ಜೀವಕ್ಕೆಶೂಲವಾದ ಸಾಲ: ಊಟದಲ್ಲಿ ವಿಷ ಬೆರೆಸಿ ನವದಂಪತಿ ಆತ್ಮಹತ್ಯೆ

ಮೈಸೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಹೊರಬರಲಾರದೆ ನವ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಸೂರು ನಗರದ ಉದಯಗಿರಿಯ ಸಾತಗಳ್ಳಿ ಲೇಔಟ್‌ನಲ್ಲಿ ನಡೆದಿದೆ.

ಸಂತೋಷ್ (26) ಹಾಗೂ ಭವ್ಯ (22) ಮೃತ ದಂಪತಿ. ಚಿಕ್ಕ ವಯಸ್ಸಲ್ಲೇ ಈ ಜೋಡಿ ಆತುರದ ನಿರ್ಧಾರ ಕೈಗೊಂಡಿದ್ದು ಇಬ್ಬರೂ ಊಟದಲ್ಲಿ ವಿಷ ಬೆರೆಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂತೋಷ್ ಮತ್ತು ಭವ್ಯ ಕಳೆದ ಕೆಲ ದಿನಗಳಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ್ದರು. ಹೀಗಾಗಿ ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಉದಯಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...