DAKSHINA KANNADA
ದ.ಕ ಜಿಲ್ಲೆಯಲ್ಲಿ ಫೆ.15 ರವರೆಗೆ ನೈಟ್ ಕರ್ಫ್ಯೂ ಹಿಂದಕ್ಕೆ-ಜಿಲ್ಲಾಧಿಕಾರಿ ಆದೇಶ
ಮಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಫೆಬ್ರವರಿ 15ರವರೆಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರು ಆದೇಶಿಸಿದ್ದಾರೆ.
ಜಿಲ್ಲೆಯಾದ್ಯಂತ ಜನವರಿ 31ರಿಂದ ಜಾರಿಗೆ ಬರುವಂತೆ ಪ್ರತಿ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲಾಗಿದೆ.
2 ಡೋಸ್ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಪಬ್, ಕ್ಲಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಗಳು ಹಾಗೂ ಹೋಟೆಲ್ ಗಳಲ್ಲಿ ತಿನ್ನುವ ಸ್ಥಳಗಳಿಗೆ ಶೇ. 100 ರಷ್ಟು ಆಸನ ವ್ಯವಸ್ಥೆಗೆ ಅನುಮತಿ ನೀಡಲಾಗಿದೆ.
ರಾಜ್ಯ ಸರ್ಕಾರದ ಚಾಲ್ತಿಯಲ್ಲಿರುವ ಮಾರ್ಗಸೂಚಿಯಂತೆ ಮದುವೆ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಮತ್ತು ಒಳಾಂಗಣದಲ್ಲಿ 200 ಜನರಿಗೆ ಅವಕಾಶವನ್ನು ಕಲ್ಪಿಸಲಾಗಿದೆ.
ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ರಂಗಮಂದಿರ, ಸಭಾಭವನಗಳಲ್ಲಿ ಶೇಕಡ 50 ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ.
ದೇವಾಲಯಗಳಲ್ಲಿ ದರ್ಶನ ಮತ್ತು ಸೇವೆಗೆ ಅವಕಾಶ ಒಮ್ಮೆಗೆ 50 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ರಾಲಿ, ಧರಣಿ, ಸಮಾವೇಶ, ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.
ಕ್ರೀಡಾ ಸಂಕೀರ್ಣ, ಸ್ಟೇಡಿಯಂ, ಈಜುಕೊಳ ಮತ್ತು ಜಿಮ್ ಗಳಲ್ಲಿ ಶೇಕಡ 50 ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಶೇಕಡ 100 ರಷ್ಟು ಎಲ್ಲಾ ನೌಕರರು ಕಡ್ಡಾಯವಾಗಿ ಹಾಜರಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ವಯ ಕೇರಳ ರಾಜ್ಯದಿಂದ ಜಿಲ್ಲೆಗೆ ಪ್ರವೇಶ ಕಲ್ಪಿಸುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ಕಣ್ಗಾವಲು ಮತ್ತು ತಪಾಸಣೆ ಕಾರ್ಯವನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.