Connect with us

    LATEST NEWS

    ನೂತನ ಸಂಸತ್ತಿನ ಎದುರು ಪ್ರತಿಭಟನೆ ಮಾಡಿದ ಕುಸ್ತಿ ಪಟುಗಳ ಬಂಧನ..!ಪೊಲೀಸರ ಅತೀರೇಕದ ವರ್ತನೆಗೆ ಖಂಡನೆ..

    Published

    on

    ನೂತನ ಸಂಸತ್ತಿನ ಎದುರು ಕುಸ್ತಿ ಪಟುಗಳ ಮೆರವಣಿಗೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

    ನವದೆಹಲಿ: ನೂತನ ಸಂಸತ್ತಿನ ಎದುರು ಕುಸ್ತಿ ಪಟುಗಳ ಮೆರವಣಿಗೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ ಆದರೆ ಪೊಲೀಸರು ದೇಶಕ್ಕೆ ಕೀರ್ತಿ ತಂಡ ಮಹಿಳಾ ಕುಸ್ತಿಪಟುಗಳನ್ನ ನಡೆಸಿಕೊಂಡ ರೀತಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

    ಸಂಸತ್ ನ್ನು ಮೇ 28ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದರು.

    ಅದೇ ದಿನದಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಸಂಸತ್‌ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

    ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಅಥ್ಲೀಟ್‌ಗಳು ಮಹಿಳಾ ಸಮ್ಮಾನ್ ಮಹಾಪಂಚಾಯತ್ ಆಯೋಜಿಸಿದ್ದರು.

    ಬ್ರಿಜ್ ಭೂಷಣ್ ಸಿಂಗ್ ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಅವರ ಬಂಧನಕ್ಕೆ ಒತ್ತಾಯಿಸಿ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

    ಈ ಆರೋಪಗಳು ರಾಷ್ಟ್ರವ್ಯಾಪಿ ವಿವಾದವನ್ನು ಎಬ್ಬಿಸಿದ್ದು, ಅವರ ಬಂಧನಕ್ಕೆ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಯಿತು.

    ಆ ಕಾರಣದಿಂದ ಕುಸ್ತಿಪಟುಗಳು ಪ್ರತಿಭಟನೆಯ ಮೆರವಣಿಗೆಯೊಂದಿಗೆ ಸಂಸತ್ತಿನ ಎದುರು ಪ್ರತಿಭಟನೆ ಮಾಡಲು ನಿರ್ಧರಿಸಿದರು.
    ಈ ವೇಳೆ ದೆಹಲಿ ಪೊಲೀಸರು ಕುಸ್ತಿಪಟುಗಳ ಮುಷ್ಕರವನ್ನು ಅಂತ್ಯಗೊಳಿಸಿದರು.

    ಜಂತರ್ ಮಂತರ್‌ನಿಂದ ಟೆಂಟ್‌ಗಳನ್ನು ತೆಗೆದುಹಾಕಿ, ಮಾರ್ಗದುದ್ದಕ್ಕೂ ಬ್ಯಾರಿಕೇಡ್‌ಗಳನ್ನು ಹಾಕಿ ಅಡ್ಡಗಟ್ಟಿದ್ದಾರೆ.

    ಕಳೆದ 35 ದಿನಗಳಿಂದ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳು ಕೇಂದ್ರದ ಮಧ್ಯಸ್ತಿಕೆ ಪ್ರಸ್ತಾಪಗಳಿಗೆ ಒಪ್ಪದೇ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದ್ದಾರೆ.

    ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಕುಸ್ತಿ ಫಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ರನ್ನು ಬಂಧಸಿಬೇಕೆಂದು ಕುಸ್ತಿಪಟುಗಳು ಒತ್ತಾಯಿಸುತ್ತಿದ್ದಾರೆ.

    ಇಂದಿನ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ ರೈತರು ಮತ್ತು ವಿದ್ಯಾರ್ಥಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

    ಖಾಪ್ ಪಂಚಾಯತ್ ಸದಸ್ಯರು ಮಹಿಳಾ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಆಗಮಿಸುತ್ತಿದ್ದು, ದೆಹಲಿ ಪೊಲೀಸರು ಹೀಗಾಗಲೇ ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಆದರೆ ಪೊಲೀಸರು ದೇಶಕ್ಕೆ ಕೀರ್ತಿ ತಂಡ ಮಹಿಳಾ ಕುಸ್ತಿಪಟುಗಳನ್ನ ನಡೆಸಿಕೊಂಡ ರೀತಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

    ಮಹಿಳಾ ಕುಸ್ತಿಪಟುಗಳನ್ನು ನೆಲದಲ್ಲಿ ಹಾಕಿ ತುಳಿದು ಎಳೆದಾಡಿದ ವಿಡಿಯೋಗಳು ವೈರಲ್ ಆಗಿದ್ದು ಆನೇಕ ಸಂಘ ಸಂಸ್ಥೆಗಳು, ಸೆಲೆಬ್ರೆಟಿಗಳು ಪೊಲೀಸರ ನಡವಳಿಕೆಯನ್ನು ಖಂಡಿಸಿದ್ದಾರೆ.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending