Connect with us

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿಯಿಂದ ಹೊಸಮುಖ … ! ಭಾವುಕರಾದ ಹಾಲಿ ಸಂಸದ..!

    Published

    on

    ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೇಟ್ ಈ ಬಾರಿ ಕೈ ತಪ್ಪಲಿದೆಯಾ ? ಇಂತಹ ಒಂದು ಪ್ರಶ್ನೆಗೆ ಸ್ವತಃ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾದ್ಯಮಗಳಿಗೆ ನೀಡಿದ ಹೇಳಿಕೆಯಲ್ಲೇ ಉತ್ತರ ಸಿಕ್ಕಿದೆ.

    ಸಂಸದ ನಳಿನ್ ಕುಮಾರ್ ಕಟೀಲ್‌

    ಸಂಸದ ನಳಿನ್ ಕುಮಾರ್ ಹೇಳಿದ್ದೇನು..?
    ಟಿಕೇಟ್ ವಿಚಾರವಾಗಿ ಮಾದ್ಯಮಗಳ ಜೊತೆ ಭಾವನಾತ್ಮಕವಾಗಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್‌ , ಪಕ್ಷ ಕಸ ಗುಡಿಸಿ ನೆಲ ಒರೆಸಿ ಅಂದ್ರೂ ಮಾಡ್ತೇನೆ. ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಹೀಗಾಗಿ ರಾಷ್ಟ್ರೀಯ ನಾಯಕರು ಯೋಚಿಸಿ ನಿರ್ಧಾರ ಮಾಡಿರುತ್ತಾರೆ. ನಾಯಕರ ತೀರ್ಮಾನಕ್ಕೆ ನಾನು ಬದ್ಧನಾಗಿದ್ದು, ನನಗೆ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಅನ್ನೋದಷ್ಟೇ ಗುರಿ ಎಂದು ಹೇಳಿದ್ದಾರೆ.

    ಸಾಮಾಜಿಕ ಜಾಲತಾಣದ ಚರ್ಚೆಯ ಬಗ್ಗೆ…!
    ಸಾಮಾಜಿಕ ಜಾಲತಾಣದಲ್ಲಿ ನಳಿನ್‌ ಕುಮಾರ್ ಕಟೀಲ್ ಅವರ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡಿತಾ ಇದೆ. ಟಿಕೆಟ್ ವಿಚಾರದಲ್ಲಿ ಕೆಲವರು ಸಂಸದರ ಬಗ್ಗೆ ಟೀಕೆಗಳನ್ನೂ ಮಾಡ್ತಾ ಇದ್ದಾರೆ. ಮತ್ತೊಂದು ಕಡೆಯಲ್ಲಿ ಸಂಭಾವ್ಯ ಅಭ್ಯರ್ಥಿಯ ಬಗ್ಗೆಯೂ ಚರ್ಚೆಗಳು ನಡಿತಾ ಇದೆ. ಟಿಕೆಟ್ ಇನ್ನೂ ಅನೌನ್ಸ್ ಆಗದ ಕಾರಣ ಸಂಸದ ನಳಿನ್ ಕುಮಾರ್ ಕಟೀಲ್ ಇನ್ನೂ ಹತಾಶರಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಬರುವ ವಿಚಾರಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳುವ ಮೂಲಕ ಟಿಕೇಟ್ ಸಿಕ್ಕರೂ ಸಿಗಬಹುದು ಅನ್ನೋ ನಿರೀಕ್ಷೆ ಇಟ್ಟುಕೊಂಡಿದ್ದಾರೆ.ಹಾಗಂತ ಸಾಮಾಜಿಕ ಜಾಲತಾಣದಲ್ಲಿ ಬರುವ ವಿಚಾರಗಳಿಗೂ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರ ಆಧಾರದಲ್ಲಿ ನಮ್ಮ ಪಕ್ಷ ಬೆಳೆದು ಬಂದಿದೆ. ಪಕ್ಷ ನಿಂತ ನೀರಾಗಬಾರದು ಅಂದ್ರೆ ಹೊಸಬರು ಬರುತ್ತಲೇ ಇರಬೇಕು. ಸಾಮಾನ್ಯ ಕಾರ್ಯಕರ್ತನಾಗಿದ್ದ ನಾನು 15 ವರ್ಷ ಸಂಸದನಾಗಿ , ರಾಜ್ಯದ ಅಧ್ಯಕ್ಷನೂ ಆಗಿದ್ದೇನೆ. ಹೀಗಾಗಿ ಇನ್ನೊಬ್ಬರಿಗೆ ಅವಕಾಶ ನೀಡಲು ಪಕ್ಷದ ಹಿರಿಯರು ತೀರ್ಮಾನಿಸಿದ್ರೆ ಅದಕ್ಕೆ ಸ್ವಾಗತವೇ ಹೊರತು ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ.

    ಬ್ರಿಜೇಶ್ ಚೌಟ

    ನಳಿನ್ ಕುಮಾರ್ ಕಟೀಲ್ ಅವರ ಈ ಹೇಳಿಕೆ ಅವರಿಗೆ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಕೈತಪ್ಪಿದೆ ಅನ್ನೋದು ಸ್ಪಷ್ಟ ಪಡಿಸ್ತಾ ಇದೆ. ಕ್ಯಾಪ್ಟನ್ ಬ್ರಿಜೇಶ್ ಚೌಟಾ ಹೆಸರು ಮುಂಚೂಣಿಯಲ್ಲಿ ಇರುವ ಕಾರಣ ಬಹುತೇಕ ಅವರಿಗೆ ಟಿಕೆಟ್ ಖಾತ್ರಿಯಾಗುವ ಸಾದ್ಯತೆ ಕೂಡಾ ಇದೆ.

    Click to comment

    Leave a Reply

    Your email address will not be published. Required fields are marked *

    BANTWAL

    ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು

    Published

    on

    ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.

    ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.

    ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

     

    ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

     

    ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

    ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

    Published

    on

    ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

     

    ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

     

    ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

     

    ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

    Continue Reading

    DAKSHINA KANNADA

    ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

    Published

    on

    ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

    ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

    ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
    ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.

    ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.

    ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.

    Continue Reading

    LATEST NEWS

    Trending