DAKSHINA KANNADA
ಲೇಖನ : ಯಕ್ಷಗಾನ ಕ್ಷೇತ್ರದಲ್ಲಿ ಮಿನುಗುತ್ತಿರೋ ಯುವ ಕಲಾವಿದ ‘ಅಕ್ಷಯ್ ಭಟ್ ಮೂಡುಬಿದ್ರೆ’
Published
2 months agoon
By
NEWS DESKಜೀವನದಲ್ಲಿ ಯಾವಾಗಲೂ ಉತ್ತಮ ವ್ಯಕ್ತಿಗಳನ್ನು ಮಾದರಿಯಾಗಿ ಇಟ್ಟುಕೊಳ್ಳುವುದು ಸಾಮಾನ್ಯ. ಅದೇನೋ ಇಂತಹವರೇ ಆಗಬೇಕೆಂದಿಲ್ಲ , ಕೆಲವೊಮ್ಮೆ ಸಾಮಾನ್ಯ ವ್ಯಕ್ತಿಯಲ್ಲೂ ಅಸಾಮಾನ್ಯ ಶಕ್ತಿ ಇರುವುದನ್ನು ನಾವು ಕಾಣುತ್ತೇವೆ. ನನ್ನ ಜೀವನದಲ್ಲಿ ತುಂಬಾ ಪ್ರಭಾವ ಬೀರಿದ ವ್ಯಕ್ತಿಗಳಲ್ಲಿ ‘ಅಕ್ಷಯ್ ಭಟ್ ಮೂಡುಬಿದ್ರೆ’ ಒಬ್ಬರು.
ಹುಟ್ಟಿದ್ದು 24.4.1997 ರಂದು ಮೂಡುಬಿದ್ರೆಯಲ್ಲಿ. ಕಡುಬಡತನದ ಜೀವನ ಸಾಗಿಸುತ್ತಿದ್ದ ಸಮಯದಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು ಪದವಿ ಶಿಕ್ಷಣ ಮುಗಿಸಿದರು. ಶೈಕ್ಷಣಿಕ ಜೀವನದ ವೇಳೆಯೇ ಯಕ್ಷಗಾನ ಕೈ ಬೀಸಿ ಕರೆದಿತ್ತು. ಇದೀಗ ತನ್ನ ನಿರಂತರ ಪರಿಶ್ರಮದಿಂದ 4 ಜನರಿಗೆ ಪರಿಚಯವಾಗುವಷ್ಟು ಬೆಳೆದಿದ್ದಾರೆ. ಜೊತೆಗೆ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಎಂಬ ಉದ್ದೇಶದಿಂದ, ಪಿತ್ರಾರ್ಜಿತವಾದ ಯಾವುದೇ ಆಸ್ತಿಯು ದೊರಕದ ಕಾರಣ ತಾನೇ ಶಿರ್ತಾಡಿಯಲ್ಲಿ ಜಾಗ ಖರೀದಿಸಿ, ಮನೆಯನ್ನು ಕಟ್ಟಿ ಸತತ 8 ತಿಂಗಳಿಂದ ತಂದೆ ತಾಯಿಯೊಂದಿಗೆ ಹೊಸ ಮನೆಯಲ್ಲಿ ವಾಸವಿದ್ದಾರೆ. ಇಂತಹ ಜೀವನ ದೊರಕುವುದಕ್ಕೆ ಮೂಲ ಕಾರಣ ಯಾವುದು ಎಂದು ಕೇಳಿದರೆ “ಕಟೀಲು ದುರ್ಗಾಪರಮೇಶ್ವರಿ ಅಮ್ಮನ ಅನುಗ್ರಹ ಹಾಗೂ ತಂದೆ ತಾಯಿಯ ಆಶೀರ್ವಾದ ಮತ್ತು ಪ್ರೋತ್ಸಾಹ” ಎನ್ನುತ್ತಾರೆ ಅಕ್ಷಯ್.
ಎಳವೆಯ ಪ್ರಾಯದಿಂದಲೂ ಕಷ್ಟದ ಜೀವನವನ್ನು ಸಾಗಿಸಿ ತನ್ನನ್ನು ಹಾಗೂ ತನ್ನ ತಂದೆ ತಾಯಿಯನ್ನು ಆಡಿಕೊಂಡವರ ಬಾಯಲ್ಲಿ ಹೊಗಳಿಸಿಕೊಳ್ಳಬೇಕೆಂಬ ಹಠದಿಂದ ಪದವಿ ಶಿಕ್ಷಣ ಮುಗಿಸಿ ಬಳಿಕ ಹನುಮಗಿರಿ ಮೇಳದಲ್ಲಿ 3 ವರ್ಷ ತಿರುಗಾಟ ಮಾಡಿ, ಪ್ರಸ್ತುತ ಕಟೀಲು ಮೇಳದಲ್ಲಿ 8ನೇ ವರ್ಷದ ತಿರುಗಾಟದಲ್ಲಿದ್ದಾರೆ. ಆವತ್ತು ಯಾರೆಲ್ಲ ತಮ್ಮ ಪರಿಸ್ಥಿತಿಯನ್ನು ಕಂಡು ನಕ್ಕು ಅಪಹಾಸ್ಯ ಮಾಡುತ್ತಿದ್ದರೋ, ಈಗ ಅವರೇ ಹೊಗಳುತ್ತಿದ್ದಾರೆ. ಸಾಧನೆಗೆ ಕೊನೆ ಇಲ್ಲ ಹಾಗಾಗಿ ಸಾಧಿಸಿದ್ದು ಏನು ಇಲ್ಲ, ಇನ್ನಷ್ಟು ಸಾಧನೆಯನ್ನು ಮಾಡಿ ಯಕ್ಷಗಾನ ಕ್ಷೇತ್ರದಲ್ಲಿ ಉತ್ತಮ ಕಲಾವಿದನಾಗಿ ಬೆಳೆಯಬೇಕು ಎಂಬುವುದು ಅವರ ಆಲೋಚನೆ.
ಯಾವ ಪಾತ್ರಕ್ಕೂ ‘ಸೈ’ ಎಂಬಂತೆ ಪ್ರತಿಭೆ ಮೆರೆಯುತ್ತಿರೊ ಅಕ್ಷಯ್ ಅವರ ಮುಖದ ಲವಲವಿಕೆ, ಸದಾ ಉತ್ಸಾಹಿ ಭಾವವೇ ಎಲ್ಲರನ್ನೂ ಸೆಳೆಯುತ್ತದೆ. ಸಣ್ಣ ಪ್ರಾಯದಲ್ಲೇ ಯಕ್ಷಗಾನ ರಂಗದಲ್ಲಿ ತಮ್ಮದೇ ಆದ ಛಾಯೆ ಬೀರುತ್ತಿದ್ದಾರೆ. ಯಾರ ಹಂಗೂ ಇಲ್ಲದೆ ಸ್ವತಂತ್ರ್ಯವಾಗಿ ತಮ್ಮ ಕುಟುಂಬದೊಂದಿಗೆ ದಿನ ಕಳೆಯುತ್ತಾ, ದುರ್ಗಾಮಾತೆ ಸೇವೆಯೊಡನೆ, ಹೋಟೆಲ್ ವ್ಯವಹಾರವನ್ನು ನಿರ್ವಹಿಸುತ್ತಿದ್ದಾರೆ. ಅಕ್ಷಯ್‌ನಂಥ ಅನೇಕ ಕಲಾವಿದರು ನಮ್ಮ ನಿಮ್ಮ ನಡುವೆಯೇ ಇದ್ದಾರೆ. ಆದರೆ, ಅವರನ್ನು ಗುರುತಿಸುವಲ್ಲಿ ನಾವು ಸೋತಿದ್ದೇವಷ್ಟೇ.
ಬರಹ : ಅಶ್ವಿತಾ ಭಟ್
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
23 hours agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
ಶೀಘ್ರದಲ್ಲೇ ಉಬರ್ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ