Saturday, February 4, 2023

‘ಮನೆಯಲ್ಲಿ ಮೃತಪಟ್ರೆ & ಗಂಭೀರ ಖಾಯಿಲೆಯಿದ್ರೆ ಮಾತ್ರ ರಜೆ’ ಪೊಲೀಸರಿಗೆ DCP ಶಾಕ್-ಆದೇಶಕ್ಕೆ ಗರಂ ಆದ ಗೃಹಸಚಿವ ಜ್ಞಾನೇಂದ್ರ

ಬೆಂಗಳೂರು: ಪೊಲೀಸ್ ಸಿಬ್ಬಂದಿಗೆ ರಜೆ ನೀಡುವ ವಿಚಾರದ ಹಿನ್ನೆಲೆ ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ ಬಾಬಾ ಹೊರಡಿಸಿದ ಸುತ್ತೋಲೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಗೃಹಸಚಿವ ಆರಗ ಜ್ಞಾನೇಂದ್ರ ಈ ಬಗ್ಗೆ ಗರಂ ಆಗಿದ್ದಾರೆ.


ತಮ್ಮ ವಿಭಾಗದ ಸಿಬ್ಬಂದಿಗೆ ರಜೆ ತೆಗದುಕೊಳ್ಳುವ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ. ಈ ಸುತ್ತೋಲೆಯಲ್ಲಿ ಎರಡು ಕಾರಣಗಳಿಗೆ ಮಾತ್ರ ರಜೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಡಿಸಿಪಿ ಹೊರಡಿಸಿದ ಆದೇಶಕ್ಕೆ ಪೊಲೀಸ್​ ಸಿಬ್ಬಂದಿ ಅಸಮಾಧಾನ ಹೊರ ಹಾಕಿದ್ದಾರೆ. ಸುತ್ತೋಲೆಯಲ್ಲಿ ‘ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದರೆ ಹಾಗೂ ಮನೆಯಲ್ಲಿ ಸಾವಿನ ಕಾರಣವಿದ್ದರೆ ಮಾತ್ರ ರಜೆ’ ಎಂದು ಉಲ್ಲೇಖಿಸಲಾಗಿದೆ.


ಸಕಾರಣವಿಲ್ಲದೆ ಸುಮ್ಮನೆ ರಜೆಗಳು ಹಾಕಿದಾಗ ಶಿಸ್ತುಕ್ರಮದ ಎಚ್ಚರಿಕೆ ನೀಡಲಾಗಿದೆ. ಎರಡು ಕಾರಣ ಬಿಟ್ಟು ಬೇರೆ ಕಾರಣಕ್ಕೆ ರಜೆ ಬೇಕಾಗಿದ್ದಲ್ಲಿ ಡಿಸಿಪಿಯಿಂದಲೇ ಅನುಮತಿ ಕಡ್ಡಾಯ ಎಂದು ಹೇಳಲಾಗಿದೆ.

ಇತ್ತೀಚೆಗೆ ಆಗ್ನೇಯ ವಿಭಾಗದಲ್ಲಿ ರಜೆಗಳ ಮೆಲೆ ಸಿಬ್ಬಂದಿ ಹೆಚ್ಚು ಹೋಗ್ತಿದ್ದು, ಕರ್ತವ್ಯಕ್ಕೆ ಸಮಸ್ಯೆ ಹಿನ್ನೆಲೆ ಸುತ್ತೋಲೆ ಹೊರಡಿಸಲಾಗಿದೆ.

ಯಾರಾದರೂ ಮೃತಪಟ್ಟರಷ್ಟೇ ಪೊಲೀಸರಿಗೆ ಸಿಗಲಿದೆ ರಜೆ ಕುರಿತ ಆದೇಶದ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ಕೊಡುವಂತೆ ಡಿಸಿಪಿ ಅವರಿಗೆ ಸೂಚನೆ ನೀಡಿದ್ದಾರೆ.

ಇದರ ಜೊತೆಗೆ ತಕ್ಷಣ ಈ ಆದೇಶ ಹಿಂಪಡೆಯುವಂತೆ ಸೂಚಿಸಿದ್ದಾರೆ

LEAVE A REPLY

Please enter your comment!
Please enter your name here

Hot Topics

ಮುಲ್ಕಿ : ಇಬ್ಬರ ಸಾವಿಗೆ ಕಾರಣರಾದ ತುಳು ಕಾಮಿಡಿಯನ್ ಅರ್ಪಿತ್ ಅರೆಸ್ಟ್..!

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರುಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ...

ಮಂಗಳೂರು ಮುಸ್ಲಿಂ ಯುವಕನನ್ನು ವರಿಸಿದ ನೆದರ್ಲೆಂಡ್ ಕ್ರೈಸ್ತ ಕನ್ಯೆ..!

ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು, ಯಾರಿಗೆ, ಯಾವಾಗ, ಯಾರಮೇಲಾದರೂ ಎಲ್ಲಿ ಬೇಕಾದರೂ ಪ್ರೀತಿ ಹುಟ್ಟಬಹುದು. ಮಂಗಳೂರು: ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ,...

ಮಂಗಳೂರು : ಸುರತ್ಕಲಿನಿಂದ ಕೆಲಸಕ್ಕೆ ತೆರಳಿದ್ದ ಯುವತಿ ಕಾವೇರಿ ಮಿಸ್ಸಿಂಗ್..!

ಮಂಗಳೂರು: ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿ ತಡಂಬೈಲ್‌ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಎಂದು ತಿಳಿದು ಬಂದಿದೆ.ಜ.27ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು...