Connect with us

DAKSHINA KANNADA

ನ್ಯೂ ಇಯರ್ ಸೆಲೆಬ್ರೇಷನ್: ಸಾರ್ವಜನಿಕರಿಗೆ ಬೀಚ್ ಪ್ರವೇಶ -ನಿಷೇಧಾಜ್ಞೆ..!

Published

on

 ನ್ಯೂ ಇಯರ್ ಸೆಲೆಬ್ರೇಷನ್: ಸಾರ್ವಜನಿಕರಿಗೆ ಬೀಚ್ ಪ್ರವೇಶ -ನಿಷೇಧಾಜ್ಞೆ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಪ್ರಸ್ತುತ ಯುನೈಟೆಡ್ ಕಿಂಗ್‍ಡಮ್‍ನಲ್ಲಿ ಹೊಸದಾಗಿ ರೂಪಾಂತರಗೊಂಡಿರುವ ಸಾರ್ಸ್ ಪತ್ತೆಯಾಗಿದ್ದು, ತೀವ್ರ ಗತಿಯಲ್ಲಿ ಹರಡಿ ಬೆಳವಣಿಗೆ ಹೊಂದುತ್ತಿದೆ.
ಅಲ್ಲದೇ ಯುನೈಟೆಡ್ ಕಿಂಗ್‍ಡಮ್‍ನಿಂದ ರಾಜ್ಯಕ್ಕೆ ಇತ್ತೀಚೆಗೆ ಆಗಮಿಸಿರುವ ಪ್ರಯಾಣಿಕರಲ್ಲಿ ಕೋವಿಡ್-19 ಪಾಸಿಟಿವ್ ಇರುವುದು ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ ಸಾರ್ಸ್  ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಹೊಸವರ್ಷ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ
ಜಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ ಸೇರಿದಂತೆ    ಎಲ್ಲಾ ಕಡಲ ಕಿನಾರೆಗಳಿಗೆ ಡಿಸೆಂಬರ್ 31 ರಂದು ಮಧ್ಯಾಹ್ನ 12 ಗಂಟೆಯಿಂದ ಜನವರಿ  2 ರಂದು ಮಧ್ಯಾಹ್ನ 12 ಗಂಟೆಯವರೆಗೆ ಸ್ಥಳೀಯ ಹಾಗೂ ಸಾಂಪ್ರದಾಯಿಕ ಮೀನುಗಾರರನ್ನು ಹೊರತು ಪಡಿಸಿ, ಇತರೇ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಪ್ರವೇಶಿಸುವುದನ್ನು ವಿಪತ್ತು ನಿರ್ವಹಣಾ ಕಾಯ್ದೆ-2005 ರ ಕಲಂ (34) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ  ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
https://www.youtube.com/watch?v=AA3ffRES904
Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending