Wednesday, December 1, 2021

ಹೊಸ ವರ್ಷಾಚರಣೆಗೆ ಕಠಿಣ ನಿಯಮ? ನಾಳೆ ನೂತನ ಮಾರ್ಗಸೂಚಿ ಬಿಡುಗಡೆ : ಗೃಹ ಸಚಿವ ಬಸವರಾಜ್ ಬೊಮ್ಮಾಯಿ..!

ಹೊಸ ವರ್ಷಾಚರಣೆಗೆ ಕಠಿಣ ನಿಯಮ? ನಾಳೆ ನೂತನ ಮಾರ್ಗಸೂಚಿ ಬಿಡುಗಡೆ : ಗೃಹ ಸಚಿವ ಬಸವರಾಜ್ ಬೊಮ್ಮಾಯಿ..!

ಬೆಂಗಳೂರು :  ಹೊಸ ವರ್ಷಾಚರಣೆ ಸಂದರ್ಭದಲ್ಲಿ ರೂಪಾಂತರಗೊಂಡ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬುವ ಸಾಧ್ಯತೆ ಇರುವುದರಿಂದ ಇದಕ್ಕೆ ನಿರ್ಬಂಧ ಹಾಕಲು ನಾಳೆ ಅಥವಾ ಸೋಮವಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದಿಂದ ಕೊರೋನಾ ನಮ್ಮೆಲ್ಲರನ್ನೂ ಕಾಡಿತ್ತು.

ಈಗ ಒಂದು ಹಂತಕ್ಕೆ ಬರುತ್ತಿರುವ ಸಂದರ್ಭದಲ್ಲೇ ಹೊಸ ಮಾದರಿಯ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕ ತಂದಿದೆ ಎಂದು ಹೇಳಿದರು.

ಸೋಂಕು ಹಬ್ಬುವುದನ್ನು ತಡೆಗಟ್ಟುವ ಉದ್ದೇಶದಿಂದಲೇ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ಕುರಿತು ಮಾರ್ಗಸೂಚಿಗಳ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆದಿದೆ. ನಗರ ಪೊಲೀಸ್ ಆಯುಕ್ತರು ಹಾಗೂ ಬಿಬಿಎಂಪಿ ಆಯುಕ್ತರು ಚರ್ಚೆ ನಡೆಸಿ ಮಾರ್ಗಸೂಚಿ ಹೊರಡಿಸುತ್ತಾರೆ ಎಂದು ತಿಳಿಸಿದರು.

ಕೊರೊನಾ ಆತಂಕ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹೊರ ದೇಶಗಳಿಂದ ಬರುವವರ ಮೇಲೆ ನಿಗಾ ಇಡಲಾಗಿದೆ. ಅದರಲ್ಲೂ ವಿಮಾನ ನಿಲ್ದಾಣಗಳಲ್ಲಿ ವಿಶೇಷ ನಿಗಾವಹಿಸಲಾಗಿದೆ.

ಯುರೋಪ್ ದೇಶಗಳಿಂದ ಬಂದವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದರು. ಈಗಾಗಲೇ ವಿದೇಶದಿಂದ ಬಂದವರನ್ನು ಪತ್ತೆ ಮಾಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ವಿದೇಶದಿಂದ ಬಂದವರು ಕೂಡ ನಮಗೆ ಸಹಕಾರ ನೀಡಬೇಕೆಂದು ಬೊಮ್ಮಾಯಿ ಮನವಿ ಮಾಡಿದರು.

ಖ್ಯಾತ ಚಲನಚಿತ್ರ ನಟ ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಗರ ಪೊಲೀಸ್ ಆಯುಕ್ತರು ಇದರ ಬಗ್ಗೆ ಮಾತನಾಡಿದ್ದಾರೆ. ಯಾಕಾಯ್ತು? ಏನಾಯ್ತು? ಎಂಬುದರ ಸಂಪೂರ್ಣ ಬಗ್ಗೆ ಮಾಹಿತಿ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...