BELTHANGADY
ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ
Published
2 days agoon
By
NEWS DESK2ಮಂಗಳೂರು: ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಭಕ್ತರು ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ.
ಕದ್ರಿ ಮಂಜುನಾಥ ದೇಗುಲಕ್ಕೆ ಬೆಳ್ಳಗ್ಗಿನಿಂದಲೂ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ದೇವಳದ ಕೆರೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೇವಳದ ಮುಂದೆ ಕಲಶ ಸ್ನಾನ ಮಾಡುತ್ತಿದ್ದಾರೆ. ಕದ್ರಿ ದೇವಳದಲ್ಲಿ ಕಲಶ ಸ್ನಾನ ಸೇವೆ ಸಾಕಷ್ಟು ಪ್ರಸಿದ್ಧಿ ಪಡೆದಿದೆ.
ಹೊಸ ವರ್ಷಾರಂಭದ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಭಕ್ತ ಸಾಗರವೇ ನೆರೆದಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ದಂಡು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬಿದ್ದಿದೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸದ್ಯ ದೇವಸ್ಥಾನದ ಕ್ಯೂ ಸೆಂಟರ್ನಲ್ಲಿ ಭಾರೀ ಜನಜಂಗುಳಿ ಏರ್ಪಟ್ಟಿದೆ.
ದೇವಸ್ಥಾನದ ಮುಂಭಾಗದಲ್ಲಿಯೂ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.
ಉಜಿರೆ : ರಸ್ತೆ ಬದಿ ಅಪರಿಚಿತ ವ್ಯಕ್ತಿಯೊಬ್ಬರ ಶ*ವ ಪ*ತ್ತೆಯಾದ ಘಟನೆ ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಇಂದು (ಡಿ.27) ಮುಂಜಾನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಸುಮಾರು 55-60 ವರ್ಷದ ಅಪರಿಚಿತ ವ್ಯಕ್ತಿಯು ಹೃ*ದಯಾಘಾ*ತದಿಂದ ಮೃ*ತಪಟ್ಟು, ಶ*ವವಾದ ಸ್ಥಿತಿಯಲ್ಲಿ ಪ*ತ್ತೆಯಾಗಿದ್ದಾರೆ.
ಇದನ್ನೂ ಓದಿ : ಮಹಿಳೆಗೆ ಎಲೆಕ್ಟ್ರಾನಿಕ್ ಬದಲು ‘ಅಪರಿಚಿತ ಶವ’ ಇರುವ ಪಾರ್ಸೆಲ್ ರವಾನೆ
ಮೃ*ತದೇಹವನ್ನು ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಶ*ವಪರೀಕ್ಷೆಗೆ ಸಾಗಿಸಲಾಗಿದೆ. ವಾರಿಸುದಾರರ ಪ*ತ್ತೆಗೆ ಬೆಳ್ತಂಗಡಿ ಪೊಲೀಸರು ಮನವಿ ಮಾಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ಕುರಿತು ಪ್ರಕರಣ ದಾಖಲಾಗಿದೆ.
BELTHANGADY
ಅರಣ್ಯ ವಾಸಿಗಳ ಸಮಸ್ಯೆ ಬಗೆಹರಿಸಲು ಅರಣ್ಯ ಸಚಿವರಿಗೆ ಮನವಿ..!
Published
2 weeks agoon
23/12/2024By
NEWS DESKಮಂಗಳೂರು : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ರಾಜ್ಯದ ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಿದರು.
ಅರಣ್ಯ ಮತ್ತು ಕಂದಾಯ ಜಮೀನಿನ ಬಗ್ಗೆ ಇರುವ ಗೊಂದಲಗಳನ್ನು ಬಗೆಹರಿಸಬೇಕು . ಜಂಟಿ ಸರ್ವೇ ನಡೆಸಿ , ಕೃಷಿ ಚಟುವಟಿಕೆಗಳನ್ನು ನಡೆಸಿರುವ ಅರಣ್ಯವಾಸಿಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿಗಳನ್ನು ಇತ್ಯರ್ಥಪಡಿಸಿ ಹಕ್ಕುಪತ್ರ ವಿತರಣೆ ಮಾಡಬೇಕು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಆದಿವಾಸಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಮತ್ತು ಇತರರಿಗೆ ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಅವಕಾಶ ನಿರಾಕರಣೆ ಮಾಡಬೇಕು. ಕಸ್ತೂರಿ ರಂಗನ್ ವರದಿ ಸೇರಿದಂತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ , ಆನೆ ಕಾರಿಡಾರ್ , ಅರಣ್ಯ ಸೂಕ್ಷ್ಮ ವಲಯ , ಹುಲಿ ಸಂರಕ್ಷಿತ ವಲಯ ಸೇರಿದಂತೆ ವಿವಿಧ ಯೋಜನೆಗಳ ಹೆಸರಿನಲ್ಲಿ ಅರಣ್ಯವಾಸಿಗಳಿಗೆ ತೊಂದರೆ ಉಂಟುಮಾಡುವ ಯಾವುದೇ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಬಾರದು . ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳಲ್ಲಿ ಅರಣ್ಯವಾಸಿಗಳಿಗೆ ಪ್ರಾಶಸ್ತ್ಯ ನೀಡುವ ವಿಚಾರ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು. ಸಮಸ್ಯೆಗಳನ್ನು ಕಾನೂನಿನ ಪರಿಮಿತಿಯಲ್ಲಿ ಬಗೆಹರಿಸಲು ಸಹಾಯ ಮಾಡುವಂತೆ ಸಚಿವರು ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಇತರ ರಾಜ್ಯ ಮಟ್ಟದ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು. ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ ನೆರಿಯ , ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.
BELTHANGADY
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಭೇಟಿ
Published
2 weeks agoon
23/12/2024By
NEWS DESK2ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪತ್ನಿ ಗೀತಾ ಖಂಡ್ರೆ ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ್ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ ಬೆಲ್ಲ ಮತ್ತು ಕಡ್ಲೆ ಬೇಳೆಯಿಂದ ಧರ್ಮಾಧಿಕಾರಿಗಳ ಮುಂದೆ ತುಲಭಾರ ಸೇವೆ ಮಾಡಿಸಿದರು. ಬಳಿಕ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಸಚಿವರ ಭೇಟಿ ವೇಳೆ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು DCF ಶ್ರೀಕಾಂತ್ ಖಣದಾಳಿ ಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.
LATEST NEWS
ಶುಭ್ ಮನ್ ಗಿಲ್ ಸೇರಿ 4 ಕ್ರಿಕೇಟಿಗರಿಗೆ ಸಿಐಡಿ ಸಮನ್ಸ್ !
BBK 11: 2ನೇ ಮಗುವಿನ ಬಗ್ಗೆ ಮಾತನಾಡಿದ ಧನರಾಜ್- ನಾಚಿ ನೀರಾದ ಪತ್ನಿ
ದೆಹಲಿಯಲ್ಲಿ ದಟ್ಟವಾದ ಮಂಜು, ಶೀತ ಗಾಳಿ – ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಪ್ಲೇಯಿಂಗ್-11ನಿಂದ ರೋಹಿತ್ ಶರ್ಮಾ ಡ್ರಾಪ್; ಸ್ಪಷ್ಟನೆ ಕೊಟ್ಟ ಬುಮ್ರಾ !
ಫೆ.17, 18ರಂದು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಾವಧಿ ಮಹಾಪೂಜೆ ಸಂಭ್ರಮ
185 ರನ್ ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ; ಆಸೀಸ್ ಗೆ ಆರಂಭಿಕ ಆಘಾತ
Trending
- DAKSHINA KANNADA2 days ago
ಬೊಜ್ಜು ಕರಗಿಸಲು ವ್ಯಾಯಾಮದ ಅಗತ್ಯ ಇಲ್ಲ : ಮಾತ್ರೆ ತಿಂದರೆ ಸಾಕು..!
- BIG BOSS6 days ago
ಎಂಟು ಮಂದಿ ನಾಮಿನೇಟ್; ಈ ವಾರ ಮನೆಯಿಂದ ಹೊರ ಬರೋದು ಇವರೇ ?
- DAKSHINA KANNADA6 days ago
‘ದಿ ಅಕ್ಸಿಡೆಂಟಲ್ PM’ ಸುಳ್ಳಿನ ಕಂತೆ..! ಕ್ಷಮಿಸಿ ಎಂದ ಚಿತ್ರ ನಿರ್ಮಾಪಕ..!
- BIG BOSS5 days ago
ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಸ್ಪರ್ಧಿ ಇವರೇ ನೋಡಿ..!