ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ.
ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್, ಹೊಟೇಲ್ ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ 12:30ರವರೆಗೆ ಸಂಭ್ರಮಾಚರಣೆಗೆ ಅನುಮತಿ ನೀಡಲಾಗಿದೆ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದ ಉಂಟುಮಾಡುವ ಉಪಕರಣಗಳನ್ನು ರಾತ್ರಿ 10 ರ ಬಳಿಕ ಬಳಸುವಂತಿಲ್ಲ.
ಈ ನಿಯಮಗಳಿಗೆ ಒಳಪಟ್ಟು ಕಾರ್ಯಕ್ರಮವನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವಂತೆ ಆದೇಶಿಸಲಾಗಿದೆ.
ಅದಲ್ಲದೆ ಸಭಾಂಗಣ, ತೆರೆದ ಸ್ಥಳ/ಹೊರಾಂಗಣ ಪ್ರದೇಶಗಳಾದ ಕಲ್ಯಾಣ ಮಂಟಪ, ಸಭಾ ಭವನ,
ಸರ್ವೀಸ್ ಅಪಾರ್ಟೆಂಟ್, ಕಡಲತೀರ, ಹೋಂಸ್ಟೇ,ಮಾಲ್ ಇತ್ಯಾದಿ ತೆರೆದ ಪ್ರದೇಶಗಳಲ್ಲಿ ಡಿಜೆ/ಡಾಲ್ಟಿ ಡ್ಯಾನ್ಸ್ ಗಳನ್ನು ನಡೆಸುಂತಿಲ್ಲ.
ವಿಶೇಷ ಪಾರ್ಟಿ ಇತ್ಯಾದಿ ಆಯೋಜಿಸುವ ಮುನ್ನ ಕಡ್ಡಾಯವಾಗಿ ನಗರ ಸ್ಥಳೀಯ ಸಂಸ್ಥೆ/ಗ್ರಾಮೀಣ ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್ ಇಲಾಖೆಯ ಅನುಮತಿ ಪಡೆಯಬೇಕು.
ಆದರೆ ಧಾರ್ಮಿಕಕಾರ್ಯಕ್ರಮ ನಡೆಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮವನ್ನು ನಡೆಸುವ ಮೇಲ್ವಿಚಾರಕರು/ಆಯೋಜಕರು ಸರ್ವೋಚ್ಚ ನ್ಯಾಯಾಲಯದ ಆದೇಶಗಳಿಗೆ ಮತ್ತು ಸರಕಾರದ
ನಿಯಮಾವಳಿಗೆ ಒಳಪಟ್ಟು ಕ್ರಮ ಕೈಗೊಳ್ಳಬೇಕು.
ದಿನನಿತ್ಯ ನಡೆಯುವ ಕ್ಲಬ್/ಪಬ್/ರೆಸ್ಟೋರೆಂಟ್ ಗಳ ದೈನಂದಿನ ವ್ಯವಹಾರ ನಡೆಸಲು ಹಾಗೂ ಪರ್ಮಿಟ್ಟಂತೆ ನಿಗದಿತ ಸಮಯದೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು ಎಂದು ಸೂಚಿಸಲಾಗಿದೆ.