Monday, January 24, 2022

ನಿವಾರ್ ಚಂಡಮಾರುತ: ದಕ್ಷಿಣ ಭಾರತದ ಹಲವು  ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ,

ನಿವಾರ್ ಚಂಡಮಾರುತ: ದಕ್ಷಿಣ ಭಾರತದ ಹಲವು  ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ, 

ಚೆನೈ: ನಿವಾರ್ ಚಂಡಮಾರುತ ಬುಧವಾರ ರಾತ್ರಿ 8 ಗಂಟೆ ವೇಳೆಗೆ ತಮಿಳುನಾಡಿನ ಕರಾವಳಿ ಮೇಲೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ನಿವಾರ್ ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆಈ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.  ಮಂಗಳವಾರ ರಾತ್ರಿಯೇ ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಅದು ತಮಿಳುನಾಡು ಮತ್ತು ಪುದುಚೇರಿಯ ಕಾರೈಕಲ್ ಮತ್ತು ಮಾಮಲ್ಲಪುರಂ ನಡುವೆ ಹಾದು ಹೋಗಲಿದೆ.

ಈ ವೇಳೆಗೆ ಗಂಟೆಗೆ 120-130 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳಲ್ಲಿ ಭಾರೀ ಮಳೆಯ ಸಾಧ್ಯತೆಗಳಿವೆ. ಹೀಗಾಗಿ ಯಾರೂ ಕೂಡ ಮೀನುಗಾರಿಕೆಗೆ, ಮೋಟಾರ್ ಬೋಟ್ಸ್ ಸೇರಿ ಇನ್ನಿತರೆ ಚಟುವಟಿಕೆಗಳಿಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ತಮಿಳುನಾಡಿನಲ್ಲಿ ಮಂಗಳವಾರದಿಂದಲೇ ಮಳೆಯಾಗುತ್ತಿದ್ದು, ಚಂಡಮಾರುತದ ಹಿನ್ನೆಲೆಯಲ್ಲಿ ಬುಧವಾರ ರಜೆ ಘೋಷಿಸಲಾಗಿದೆ. ಅಲ್ಲದೆ 7 ಜಿಲ್ಲೆಗಳಲ್ಲಿ ಬಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳಿ ತಿಳಿಸಿವೆ.

ಈ ನಡುವೆ ಚಂಡಮಾರುತದ ಸವಾಲುಗಳನ್ನು ಎದುರಿಸಲು ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ 1200 ಸಿಬ್ಬಂದಿ ಸಜ್ಜಾಗಿದ್ದಾರೆ. ಇತರೆ 800 ಹೆಚ್ಚುವರಿ ಮಂದಿ ಸನ್ನದ್ಧ ಸ್ಥಿತಿಯಲ್ಲಿದ್ದಾರೆ. ಮತ್ತೊಂದೆಡೆ ಬುಧವಾರ ಆಂಧ್ರಪ್ರದೇಶದ ಮೇಲೆ ಗತಿ ಚಂಡಮಾರುತ ಕೂಡ ದಾಳಿ ನಡೆಸಲಿದೆ.

‘ನಿವಾರ್’ ಚಂಡಮಾರುತ ಹಿನ್ನೆಲೆಯಲ್ಲಿ ಚೆನ್ನೈನಿಂದ ನಿರ್ಗಮಿಸಬೇಕಿದ್ದ ಆರು ವಿಮಾನಗಳು ಮತ್ತು ಚೆನ್ನೈಗೆ ಆಗಮಿಸಬೇಕಿದ್ದ ಆರು ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಕಣ್ಣೂರು, ಕೋಯಿಕೋಡ್, ವಿಜಯವಾಡ, ತಿರುಚಿ, ತೂತ್ತುಕುಡಿ, ಬೆಂಗಳೂರು, ಮಂಗಳೂರು ಮತ್ತು ಹುಬ್ಬಳ್ಳಿ ವಿಮಾನಗಳ ಸಂಚಾರ ಸದ್ಯ ರದ್ದಾಗಿದೆ.

Hot Topics

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ನಾಪತ್ತೆಯಾಗಿದ್ದ ಬಸ್ ಮಾಲಕ ಶವವಾಗಿ ಪತ್ತೆ: ಸಾಲದಿಂದ ಬೇಸತ್ತು ಆತ್ಮಹತ್ಯೆ ಶಂಕೆ

ಶಿವಮೊಗ್ಗ: ಶನಿವಾರದಂದು ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್​ನ ಮಾಲೀಕ ಇಂದು ಶವವಾಗಿ ಪತ್ತೆಯಾಗಿದ್ದಾರೆ.ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಶನಿವಾರದಂದು ಅವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಪಟಗುಪ್ಪ ಸೇತುವೆ ಬಳಿ...

ಮಂಗಳೂರಿನ ಕುವರಿ ರೆಮೊನಾ ಇವೆಟ್ಟಾ ಪಿರೇರಾಗೆ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ

ಮಂಗಳೂರು: ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ಮಂಗಳೂರಿನ ರೆಮೊನಾ ಇವೆಟ್ಟಾ ಪಿರೇರಾ ಅವರಿಗೆ ದೊರೆತಿದೆ.ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆಗೆ ಈ ಗೌರವ ಲಭಿಸಿದ್ದು, ಪುರಸ್ಕಾರವು ಒಂದು ಲಕ್ಷ ಮೊತ್ತ,...