Connect with us

LATEST NEWS

ಕೆಲವೇ ನಿಮಿಷದ ಮೊದಲು ಜನಿಸಿದ್ದ ಶಿಶು ತಾಯಿ ಕಣ್ಣೆದುರೇ ನರ್ಸ್‌ ಕೈಯಿಂದ ಜಾರಿ ಬಿದ್ದು ದುರ್ಮರಣ

Published

on

ಲಖನೌ: ಆಗ ತಾನೇ ತಾಯಿ ಗರ್ಭದಿಂದ ಹೊರಬಂದ ನವಜಾತ ಶಿಶುವನ್ನು ನರ್ಸ್ ಎತ್ತಿ ಸ್ಥಳಾಂತರಿಸುತ್ತಿದ್ದಾಗ ಜಾರಿ ಬಿದ್ದು ತಾಯಿ ಕಣ್ಣೆದುರೇ ಜೀವಬಿಟ್ಟ ಮನಕಲಕುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಖನೌನದ ಆಸ್ಪತ್ರೆಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

ನಗರದ ಮಲ್ಹಾರ್‌ ಬಡಾವಣೆಯ ಖಾಸಗಿ ಆಸ್ಪತ್ರೆಯಲ್ಲಿ ಏಪ್ರಿಲ್‌ 19ರಂದು ಬೆಳಗ್ಗೆ ಗರ್ಭಿಣಿ ಸಹಜ ಹೆರಿಗೆ ನವಜಾತ ಶಿಶುವಿಗೆ ಜನ್ಮ ನೀಡಿದ್ದರು. ಇದಾದ ಕೆಲವು ನಿಮಿಷಗಳಲ್ಲಿ ಮಗುವನ್ನು ಕರ್ತವ್ಯ ನಿರತ ನರ್ಸ್‌ ಎತ್ತಿಕೊಂಡು ಬೇರೆಡೆ ಸ್ಥಳಾಂತರಿಸಲು ಮುಂದಾದರು.

ಆ ವೇಳೆ, ಒದ್ದೆಮುದ್ದೆಯಾಗಿದ್ದ ಮಗು, ನರ್ಸ್‌ ಕೈಯಿಂದ ಜಾರಿ ಟೈಲ್ಸ್‌ ನೆಲ ಹಾಸಿನ ಮೇಲೆ ಬಿತ್ತು. ಕ್ಷಣಾರ್ಧ, ಆಗ ತಾನೆ ಜನಿಸಿದ್ದ ಜೀವ ಹಾರಿ ಹೋಯಿತು.
ತಾಯಿಯ ಕಣ್ಣೇದುರೇ ಈ ದಾರುಣ ಘಟನೆ ನಡೆದರೂ ಸಿಬ್ಬಂದಿ, ತಕ್ಷಣವೇ ಪ್ರಕರಣವನ್ನು ಮುಚ್ಚಿಟ್ಟಿದ್ದರು. ಜನಿಸುವಾಗಲೇ ದೋಷ ಇದ್ದದ್ದರಿಂದ ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ಸುಳ್ಳು ಹೇಳಿ ಸುಮ್ಮನಾಗಿಸಿದ್ದರು.

ಆದರೆ, ಮರಣೋತ್ತರ ಪರೀಕ್ಷೆ ವರದಿಯಿಂದ ತಲೆಗೆ ಬಿದ್ದ ಪೆಟ್ಟಿನಿಂದ ಮಗು ಮೃತಪಟ್ಟಿದೆ ಎಂದು ವರದಿ ತಿಳಿಸಿದೆ. ಆ ಆಧಾರದ ಮೇಲೆ ನಿರ್ಲಕ್ಷದ ಪ್ರಕರಣ ದಾಖಲಿಸಿ ದಾದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಗುವಿನ ತಂದೆ ಜೀವನ್‌ ರಜಪೂತ್‌ ಮಾತನಾಡಿ, ‘ಘಟನೆ ಬಗ್ಗೆ ನನ್ನ ಪತ್ನಿಗೆ ಎಲ್ಲವೂ ಗೊತ್ತಿತ್ತು. ಸಹಜ ಹೆರಿಗೆ ಆಗಿತ್ತು. ಮುದ್ದಾದ ಗಂಡು ಮಗು ಆರೋಗ್ಯವಾಗಿತ್ತು. ನರ್ಸ್‌ ಕೈಯಿಂದ ಜಾರಿಬಿದ್ದಾಗ ನನ್ನ ಪತ್ನಿ ಕಿರುಚಿಕೊಂಡಳಂತೆ.

ಆಗ ಆಸ್ಪತ್ರೆ ಸಿಬ್ಬಂದಿ ಸೇರಿ ಬೆದರಿಸಿ ಬಾಯಿ ಮುಚ್ಚಿಸಿದ್ದರು. ಈ ಆಘಾತದಿಂದ ನನ್ನ ಪತ್ನಿ ಇನ್ನೂ ಹೊರ ಬಂದಿಲ್ಲ’ ಎಂದು ಜೀವನ್‌ ತಿಳಿಸಿದ್ದಾರೆ.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?

Published

on

ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.

ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.

ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.

ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್‌ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.

ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.

Continue Reading

LATEST NEWS

ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು

Published

on

ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.

ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ‌ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.

Continue Reading

LATEST NEWS

Trending