Wednesday, October 5, 2022

ಮುರ್ಡೇಶ್ವರಕ್ಕೆ ಹನಿಮೂನ್‌ ಗೆ ಬಂದ ನವವಿವಾಹಿತೆ ನಾಪತ್ತೆ..!

ಕಾರವಾರ : ಪತಿಯೊಂದಿಗೆ ಉತ್ತರ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣ ಮುರ್ಡೇಶ್ವರಕ್ಕೆ ಹನಿಮೂನ್‌ಗೆ ಬಂದ ನವವಿವಾಹಿತೆ ಕಾಣೆಯಾಗಿದ್ದಾಳೆ. ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನವವಿವಾಹಿತೆಯೊಬ್ಬಳು ಗೋವಾದಿಂದ ಪತಿಯೊಂದಿಗೆ ಮುರ್ಡೇಶ್ವರಕ್ಕೆ ಬಂದಿದ್ದಳು. ಈ ವೇಳೆ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿ ರೂಮ್ ನೋಡಲು ಪತಿ ಗೆಸ್ಟ್ ಹೌಸ್ ಗೆ ಹೋಗಿ ವಾಪಸ್ ಬಂದು ನೋಡಿದಾಗ ಪಾರ್ಕಿಂಗ್ ಸ್ಥಳದ ಕಟ್ಟೆ ಮೇಲೆ ಕುಳಿತಿದ್ದ ಮಹಿಳೆ ಏಕಾಏಕಿ ಕಾಣೆಯಾಗಿದ್ದಾಳೆ.

ಗೋವಾದ ವಾಸ್ಕೋಡಗಾಮ ಬೈನಾದ ನಿವಾಸಿ ವಿದ್ಯಾ ಸಂದೀಪ ಹರಿಜನ ಕಾಣೆಯಾದ ಮಹಿಳೆಯಾಗಿದ್ದಾಳೆ.

ಎಷ್ಟು ಹುಡುಕಿದರೂ ಮಹಿಳೆ ಪತ್ತೆಯಾಗಿಲ್ಲ. ಹೀಗಾಗಿ ಮುರ್ಡೇಶ್ವರ ಠಾಣೆಯಲ್ಲಿ ಆಕೆಯ ಪತಿ ದೂರು ದಾಖಲಿಸಿದ್ದು ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...