DAKSHINA KANNADA
ಪತಿ- ಪತ್ನಿ ನಡುವಣ ಮನಸ್ತಾಪ : ಉಳ್ಳಾಲ ಕೋಟೆಕಾರಿನಲ್ಲಿ ವಿವಾಹಿತೆಯಿಂದ ಜೀವಾಂತ್ಯ..!
ಮಂಗಳೂರು: ವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕೋಟೆಕಾರು ಸಮೀಪ ಮಾಡೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.
ಮಾಡೂರು ನಿವಾಸಿ ಚಂದ್ರಶೇಖರ -ಗಿರಿಜ ಅವರ ಪುತ್ರಿ 26 ವರ್ಷ ಪ್ರಾಯದ ದಿವ್ಯಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಜ.21 ರಂದು ದಿವ್ಯಾ ತನ್ನ ಗಂಡನೊಂದಿಗೆ ನೆರೆಮನೆಯ ಕಾರ್ಯಕ್ರಮವೊಂದಕ್ಕೆ ಹೋಗಿದ್ದು, ಅಲ್ಲಿ ಗಂಡ- ಹೆಂಡತಿ ನಡುವೆ ಯಾವುದೋ ಕಾರಣಕ್ಕೆ ಮನಸ್ತಾಪ ಉಂಟಾವಾಗಿತ್ತು.
ಈ ಹಿನ್ನೆಲೆಯಲ್ಲಿ ದಿವ್ಯಾ ಒಬ್ಬರೇ ಮನೆಗೆ ಹಿಂತಿರುಗಿದ್ದರು. ಬಳಿಕ ಜ.22 ರಂದು ಸಂಜೆ ಮನೆಯ ಬೆಡ್ ರೂಂನಲ್ಲಿ ದಿವ್ಯಾ ನೇಣುಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತಾಯಿ ಗಿರಿಜಾ ಅವರು ಕೂಡಲೇ ದಿವ್ಯಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಆದಾಗಲೇ ದಿವ್ಯಾ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ದಿವ್ಯಾ ಅವರು ಒಂದೂವರೆ ವರ್ಷದ ಹಿಂದೆ ಹರೀಶ್ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!