Wednesday, October 5, 2022

ಮುಂದಿನ 30-40 ವರ್ಷಗಳು ಬಿಜೆಪಿ ಯುಗ: ಅಮಿತ್‌ ಶಾ

ಹೈದರಾಬಾದ್‌: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿದ್ದಾರೆ.


ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅಮಿತ್‌ ಶಾ, ಬಿಜೆಪಿಯ ಅಭಿವೃದ್ಧಿ ಪರ ರಾಜಕಾರಣಕ್ಕೆ ರಾಷ್ಟ್ರದ ಜನರು ಸಮ್ಮತಿ ಸೂಚಿಸಿದ್ದಾರೆ.

ಹಾಗಾಗಿ ಬಿಜೆಪಿ ಚುನಾವಣೆಗಳಲ್ಲಿ ಸರಣಿ ಜಯವನ್ನು ಕಾಣುತ್ತಿದೆ. ಕುಟುಂಬ ರಾಜಕಾರಣ, ಜಾತಿ ರಾಜಕಾರಣ, ತುಷ್ಟೀಕರಣಗಳೆಲ್ಲವೂ ಅಂತ್ಯಗೊಳ್ಳುತ್ತಿವೆ ಎಂದರು.

ಬಿಜೆಪಿಯು ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಲ್ಲಿರುವ ಕುಟುಂಬ ರಾಜಕಾರಣವನ್ನು ಅಂತ್ಯಗೊಳಿಸಲಿದೆ. ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಒಡಿಶಾ ಸೇರಿದಂತೆ ಮತ್ತಿತರ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

LEAVE A REPLY

Please enter your comment!
Please enter your name here

Hot Topics

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.