Connect with us

    BANTWAL

    ಕರಾವಳಿ ಸೇರಿದಂತೆ ನಾಳೆಯಿಂದ ರಾಜ್ಯದಲ್ಲಿ ಮತ್ತೆ ಎರಡು ದಿನ ಮಳೆ..!?

    Published

    on

    ಕರಾವಳಿ ಸೇರಿದಂತೆ ನಾಳೆಯಿಂದ ರಾಜ್ಯದಲ್ಲಿ ಮತ್ತೆ ಎರಡು ದಿನ ಮಳೆ..!?

    ಬೆಂಗಳೂರು :  ಡಿಸೆಂಬರ್ 31ರಿಂದ ಎರಡು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

    ನಗರದಲ್ಲಿ 29 ಡಿಗ್ರಿ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೀದರ್‌ನಲ್ಲಿ 9.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ರಾಜ್ಯಾದ್ಯಂತ ಚಳಿಯ ವಾತಾವರಣ ಮುಂದುವರೆದಿದ್ದು, ತಾಪಮಾನ ಕಡಿಮೆಯಾಗುತ್ತಿದೆ.

    ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ.

    ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿಯಲ್ಲಿ 33 ಡಿಗ್ರಿ ಗರಿಷ್ಠ ಉಷ್ಣಾಂಶವಿರಲಿದೆ.

    ಮಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.

    ಬೆಳಗಾವಿ 31-16, ಮೈಸೂರು 31-19, ಮಂಡ್ಯ 31-19, ರಾಮನಗರ 29-19, ಮಡಿಕೇರಿ 28-16, ವಿಜಯಪುರ 27-17 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending