Connect with us

DAKSHINA KANNADA

ಬಿಹಾರದಲ್ಲಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯಕ್ಕೆ ಹಣಕಾಸು ನೆರವು: ಬಂಟ್ವಾಳದ ನಂದಾವರದಲ್ಲಿ NIA ದಾಳಿ..!

Published

on

ರಾಷ್ಟ್ರೀಯ ತನಿಖಾ ದಳ NIA ಸ್ಥಳೀಯ ಪೊಲೀಸರ ನೆರವಿನೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಭಾನುವಾರ ರಾತ್ರಿ ನಡೆಸಿ ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದೆ.

ಬಂಟ್ವಾಳ: ರಾಷ್ಟ್ರೀಯ ತನಿಖಾ ದಳ NIA ಸ್ಥಳೀಯ ಪೊಲೀಸರ ನೆರವಿನೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಭಾನುವಾರ ರಾತ್ರಿ ನಡೆಸಿ ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದೆ.
ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಸಂದರ್ಭದಲ್ಲಿ ಗಲಭೆ ಸೃಷ್ಟಿಸಿ, ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಹೋಗಿದೆ ಎಂಬ ಅನುಮಾನದ ಮೇರೆಗೆ ಬಂಟ್ವಾಳ ಮೂಲದ ನಾಲ್ವರ ಮನೆಗಳಿಗೆ ತೆರಳಿದ ಅಧಿಕಾರಿಗಳು ದಾಖಲೆಗಳನ್ನು ಶೋಧಿಸಿದ್ದಾರೆ.
ಬಂಟ್ವಾಳ ಪೊಲೀಸರು ಮತ್ತು ಕೆಎಸ್​ಆರ್​ಪಿಯ ಮೂರು ತುಕಡಿಗಳು ನಂದಾವರಕ್ಕೆ ಬಿಗಿ ಬಂದೋಬಸ್ತ್ ಮಾಡಿದ್ದರು.
ಕಳೆದ ವರ್ಷವೂ ಸಹ ಬಂಟ್ವಾಳದ ಬಿ.ಸಿ.ರೋಡ್​ನಲ್ಲಿದ್ದ ಮುಖಂಡರೊಬ್ಬರ ಮನೆ ಮೇಲೆ ಎನ್‌ಐಎ ದಾಳಿ ನಡೆಸಿ, ಬಿಹಾರದ ಘಟನೆಗೆ ಸಂಬಂಧಿಸಿದಂತೆ ವಿವರಗಳನ್ನು ಪಡೆದುಕೊಂಡಿತ್ತು.
ಇದೀಗ ನಂದಾವರದ ವ್ಯಕ್ತಿಯೊಬ್ಬರು ಹಣಕಾಸಿನ ನೆರವು ನೀಡಿದ ಮೂಲ ಹಾಗೂ ವಿವರಗಳನ್ನು ಪಡೆದುಕೊಳ್ಳಲು ದಾಳಿ ನಡೆದಿದ್ದು, ಮೂವರ ವಿಚಾರಣೆ ನಡೆಸಲಾಗಿದೆ.
ಇವರಲ್ಲಿ ಒಬ್ಬರು ದುಬೈನಲ್ಲಿ ವ್ಯವಹಾರ ಮಾಡಿಕೊಂಡಿದ್ದು, ಇತ್ತೀಚೆಗಷ್ಟೇ ಊರಿಗೆ ಮರಳಿದ್ದಾರೆ. ಉಳಿದವರು ಮೆಲ್ಕಾರ್​ನಲ್ಲಿ ಪಾಸ್ ಪೋರ್ಟ್ ವ್ಯವಹಾರ ಮಾಡಿಕೊಂಡಿದ್ದರು
ಕಳೆದ ವರ್ಷ ಪಾಟ್ನಾದಲ್ಲಿ ನಡೆದ ಮೋದಿ ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಿರುವವರ ಜೊತೆ ಈ ನಾಲ್ವರು ಸಂಪರ್ಕ ಹೊಂದಿದ್ದು, ಹಣಕಾಸು ನೆರವು ಒದಗಿಸಿದ್ದಾರೆ ಎಂಬ ಆರೋಪದಡಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಕೃತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವೂ ಸಹ ಇವರ ಮೇಲಿದೆ ಎಂದು ಹೇಳಲಾಗುತ್ತಿದೆ.
ಅಷ್ಟೇ ಅಲ್ಲದೆ, ದುಬೈನಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬ ನಡೆಸುತ್ತಿರುವ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಮೆಲ್ಕಾರ್​ನಲ್ಲಿ ಅಂಗಡಿ ವ್ಯವಹಾರ ನಡೆಸಿಕೊಂಡಿರುವ ಈ ನಾಲ್ವರು ಸಹಾಯ ಮಾಡಿದ್ದಾರೆ ಎಂಬ ಸಂಶಯ ಸಹ ವ್ಯಕ್ತವಾಗಿದ್ದು ಈ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending