Connect with us

BANTWAL

ಬಂಟ್ವಾಳ : ಪಿಎಸ್‌ಐ ತರಬೇತಿ ಅವಧಿಯಲ್ಲಿ ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿ ಪಡೆದ ನಿಧಿ ಬಿ.ಎನ್. ಬಂಡಸಾಲೆ

Published

on

ಬಂಟ್ವಾಳ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಕುವರಿಯೊಬ್ಬಳು ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿಯನ್ನು ಮತ್ತು ಮಹಿಳಾ ಹೊರಾಂಗಣ ವಿಭಾಗದ ಅತ್ಯುತ್ತಮ ನಿರ್ವಹಣ ಪ್ರಶಸ್ತಿ ಮುಡುಗೇರಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸಬ್ ಇನ್ಸ್ ಪೆಕ್ಟರ್ ಆಗಿ 2020 ರಲ್ಲಿ ಆಯ್ಕೆಯಾದ ಬಂಟ್ವಾಳ ತಾಲ್ಲೂಕಿನ ಸೊರ್ನಾಡು ಬಂಡಸಾಲೆಯ ನಿಧಿ ಬಿ.ಎನ್. ಕರ್ತವ್ಯದ 11 ತಿಂಗಳ ತರಬೇತಿ ಅವಧಿಯನ್ನು ಕಲಬುರಗಿಯ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ಪಡೆಯುವ ಸಂದರ್ಭದಲ್ಲಿ ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿಯನ್ನು ಮತ್ತು ಮಹಿಳಾ ಹೊರಾಂಗಣ ವಿಭಾಗದ ಅತ್ಯುತ್ತಮ ನಿರ್ವಹಣ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಸರಕಾರದ ಗೃಹಮಂತ್ರಿ ಅರಗ ಜ್ಞಾನೇಂದ್ರ ಅವರು ಖಡ್ಗ ಮತ್ತು ಟ್ರೋಫಿ ಹಾಗೂ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ .

.ಕು॥ ನಿಧಿ ಬಿ.ಎನ್. ಬಂಟ್ವಾಳ ಎಸ್ ವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ನಾರಾಯಣ ಭಂಡಾರಿ ಬೊಟ್ಯಾಡಿ ಮತ್ತು ಬಂಟ್ವಾಳ ಬಿಎಸ್ಸೆನ್ನೆಲ್ ನ ನಿವೃತ್ತ ಅಧಿಕಾರಿ ಯಶೋದಾ ದಂಪತಿಯ ಪುತ್ರಿಯಾಗಿದ್ದಾರೆ .

ಬಂಟ್ವಾಳ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಪೂರೈಸಿ ಎಸ್.ವಿ.ಎಸ್.ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಏಳನೇ ೦್ಯಾಂಕ್ ‍‍ ನೊಂದಿಗೆ ಪದವಿಯನ್ನು ಪಡೆದಿದ್ದರೆ ಕೆ.ಎ.ಎಸ್.ಪರೀಕ್ಷೆ ಬರೆದಿರುವ ಇವರು ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ಇದ್ದಾರೆ.

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್

Published

on

ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.

ಕಾರಿನ ಬ್ಯಾಟರಿ ಶಾರ್ಟ್‌ ಸಕ್ಯೂರ್ಟ್‌ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.

Continue Reading

LATEST NEWS

Trending