Connect with us

    LATEST NEWS

    ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ

    Published

    on

    ಬೆಂಗಳೂರು: ಈ ಬಾರಿಯ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಚನ್ನಪಟ್ಟಣ ಹೈವೋಲ್ಟ್ಜ್ ಕ್ಷೇತ್ರವಾಗಿದೆ. ಕೊನೆಗೂ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯನ್ನು ಜೆಡಿಎಸ್ ಕಣಕ್ಕೆ ಇಳಿಸಿದೆ.

    ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕುಮಾರಸ್ವಾಮಿಯನ್ನ ಹೇಗಾದ್ರು ಮುಗಿಸಬೇಕು ಅಂತ ಇದೆ. ಚನ್ನಪಟ್ಟಣದ ಕಾರ್ಯಕರ್ತರು, ಜನರು ಇದಕ್ಕೆ ಉತ್ತರ ಕೊಡಬೇಕು. ನಾನೇ ಚನ್ನಪಟ್ಟಣಕ್ಕೆ ಬಂದು ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು. ಯೋಗೇಶ್ವರ್‌ಗೆ ಪ್ರಬಲ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎಂಬ ಒತ್ತಾಯ ಪಕ್ಷದಲ್ಲಿ ಕೇಳಿ ಬಂದಿತ್ತು.

    ಕುಮಾರಸ್ವಾಮಿ ತೆರವಾಗಿರುವ ಕ್ಷೇತ್ರಕ್ಕೆ ದೇವೇಗೌಡರ ಕುಟುಂಬದವರೇ ಅಭ್ಯರ್ಥಿ ಆಗಬೇಕು ಎಂದು ಕಾರ್ಯಕರ್ತರ ಒತ್ತಾಸೆಯಾಗಿತ್ತು. ಅಷ್ಟೇ ಅಲ್ಲದೇ ನಿಖಿಲ್ ಅಭ್ಯರ್ಥಿ ಆಗದೇ ಹೋದರೆ ನಾವು ಚುನಾವಣೆ ನಡೆಸುವುದಿಲ್ಲ ಎಂಬ ಸಂದೇಶವನ್ನು ದಳಪತಿಗಳಿಗೆ ಚನ್ನಪಟ್ಟಣ ನಾಯಕರು ರವಾನೆ ಮಾಡಿದ್ದರು. ಈ ಕಾರಣಕ್ಕೆ ಅಂತಿಮವಾಗಿ ಕುಮಾರಸ್ವಾಮಿ ಅವರನ್ನೇ ಜೆಡಿಎಸ್ ಕಣಕ್ಕೆ ಇಳಿಸಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಸಾಹಿತಿ ಡಾ.ಲಕ್ಷ್ಮೀ ಜಿ ಪ್ರಸಾದ್ ವಿರುದ್ಧ ಪೊಲೀಸರಿಂದಲೇ ದೂರು

    Published

    on

    ಲೇಖಕಿ ಸಾಹಿತಿ ಡಾ.ಲಕ್ಷ್ಮೀ ಜಿ ಪ್ರಸಾದ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯೊಂದರ ಸಂಬಂಧ ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಆದರೆ ಪೊಲೀಸರ ಬಂಧನದ ವೇಳೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಗಾಯಗೊಳಿಸಿದ ಬಗ್ಗೆ ಪೊಲೀಸರು ಮತ್ತೊಂದು ಕೇಸು ದಾಖಲಿಸಿದ್ದಾರೆ.

    ಡಾ.ಲಕ್ಷ್ಮೀ ಜಿ.ಪ್ರಸಾದ್ ಹಾಗೂ ಅವರ ಪುತ್ರ ಅರವಿಂದ್‌ ವಿರುದ್ಧ ಜ್ಞಾನಬಾರತಿ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದಾರೆ. ಸಾಹಿತಿ ಪವನಜ ಎಂಬವರು ನೀಡಿದ್ದ ಮಾನನಷ್ಟ ಮೊಕದ್ದಮೆಯ ಹಿನ್ನಲೆಯಲ್ಲಿ ಅವರನ್ನು ಬಂಧಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಬೆಂಗಳೂರು 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ಈ ಬಗ್ಗೆ ಆದೇಶ ಹೊರಡಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಬಂಧನ ಮಾಡಲು ಹೋದ ವೇಳೆ ತಾಯಿ ಹಾಗೂ ಮಗ ಅಡ್ಡಿ ಪಡಿಸಿದಾಗಿ ಎಫ್‌ಐಆರ್ ದಾಖಲಾಗಿದೆ.

    ಅಕ್ಟೋಬರ್ 20 ರಂದು ಸಂಜೆ ಈ ಘಟನೆ ನಡೆದಿದ್ದು, ಜ್ಞಾನಬಾರತಿ ಪೊಲೀಸ್ ಠಾಣೆಯ ಮಹಿಳಾ ಸಬ್‌ ಇನ್ಸ್‌ಪೆಕ್ಟರ್ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಯ ಬಳಿಕ ನ್ಯಾಯಾದೀಶರ ಮುಂದೆ ಹಾಜರಿ ಪಡಿಸುವ ಮೊದಲು ಆರೋಪಿ ಡಾ. ಲಕ್ಷ್ಮೀ ಜಿ ಪ್ರಸಾದ್ ಅವರು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾಗಿ ಜ್ಞಾನಬಾರತಿ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಸುರೇಖ ಹಾಗೂ ಇನ್ನಿಬ್ಬರು ಸಿಬ್ಬಂದಿ ದೂರು ನೀಡಿದ್ದಾರೆ.

    ಸಾಹಿತಿಯಾಗಿರುವ ಡಾ. ಲಕ್ಷ್ಮೀ ಜಿ ಪ್ರಸಾದ್ ಅವರು ಸಾಮಾಜಿಕ ಜಾಲತಾಣವೊಂದರಲ್ಲಿ ಅವಮಾನ ಮಾಡಿದ್ದಾಗಿ ಸಾಹಿತಿ ಪವನಜ ಎಂಬವರು ನ್ಯಾಯಾಲಯದಲ್ಲಿ ದೂರು ದಾಖಲಿಸಿ ಬಂಧನ ವಾರೆಂಟ್ ಮಾಡಿಸಿದ್ದರು. ಆದರೆ ಪೊಲೀಸ್ ಠಾಣೆಯಲ್ಲಿ ಮಗನನ್ನು ಕರೆಯಿಸಿ ಗಲಾಟ ಮಾಡಿ ಬೆದರಿಕೆ ಹಾಕಿ ಹೊಡೆದು ಗಾಯ ಮಾಡಿದ್ದಾರೆ ಎಂದು ಪೊಲೀಸರೇ ಕೇಸು ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    Zomato ಪ್ರತಿ ಆರ್ಡರ್ ಗೆ ₹10 ಶುಲ್ಕ ಹೆಚ್ಚಳ!

    Published

    on

    ನವದೆಹಲಿ: ಆನ್ ಲೈನ್ ನಲ್ಲಿ ಆಹಾರ ಪದಾರ್ಥ ಪೂರೈಸುವ ಜೊಮಾಟೊ ಕಂಪನಿಯು ತನ್ನ ಪ್ರತಿ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್ ಫಾರ್ಮ್ ಫೀ) ₹10 ಹೆಚ್ಚಳ ಮಾಡಿದೆ.

    ಹಬ್ಬಗಳ ಸಂದರ್ಭದಲ್ಲಿ ಆರ್ಡರ್ ಗಳ ಸಂಖ್ಯೆ ಹೆಚ್ಚಿರುವುದರಿಂದ ಶುಲ್ಕವನ್ನು ಏರಿಕೆ ಮಾಡಲಾಗಿದ್ದು, ಸದ್ಯ ದೆಹಲಿಯಲ್ಲಿ ₹10 ಹೆಚ್ಚು ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ. ಬೇರೆ ಬೇರೆ ನಗರದಲ್ಲಿ ಶುಲ್ಕದ ದರ ಬದಲಾಗಲಿದೆ ಎಂದಿರುವ ಕಂಪನಿ ಯಾವ ನಗರದಲ್ಲಿ ಎಷ್ಟು ಶುಲ್ಕ ಇರಲಿದೆ ಎನ್ನುವ ಬಗ್ಗೆ ಮಾಹಿತಿ ನೀಡಿಲ್ಲ.

    ಕಳೆದ ಏಪ್ರಿಲ್ ತಿಂಗಳಿನಲ್ಲಿಯೂ ಜೊಮಾಟೊ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು ₹4 ಏರಿಕೆ ಮಾಡಿತ್ತು. ಈಗ ಮತ್ತೆ ದರ ಏರಿಸಿ ಪ್ರಕಟಣೆ ಹೊರಡಿಸಿದೆ.

    Continue Reading

    LATEST NEWS

    ಗ್ರಾಹಕನಿಗೆ 50 ಪೈಸೆ ಹಿಂತಿರುಗಿಸದ ಅಂಚೆ ಕಚೇರಿಗೆ 15,000 ರೂ. ದಂಡ

    Published

    on

    ಚೆನ್ನೈ: ಬರೀ 50 ಪೈಸೆ ಅಲ್ವಾ ಎಂದು ಗ್ರಾಹಕನ ಬೇಡಿಕೆ ನಿರ್ಲಕ್ಷಿಸಿದ ಅಂಚೆ ಕಚೇರಿಯೊಂದಕ್ಕೆ 15,000 ರೂ. ದಂಡ ವಿಧಿಸಿದ ಅಪರೂಪದ ಘಟನೆ ನಡೆದಿದೆ.

    ಚೆನ್ನೈನ ಮಾನ್ಯ ಎಂಬುವರು 2023ರ ಡಿಸೆಂಬರ್‌ನಲ್ಲಿ ಅಂಚೆ ಕಚೇರಿಯಲ್ಲಿ ರಿಜಿಸ್ಟರ್ಡ್ ಪೋಸ್ಟ್ ಮಾಡಲು 30 ರೂ. ನೀಡಿದ್ದರು. ಅದಕ್ಕೆ ನಿಗದಿತ ಶುಲ್ಕ 29.50 ರೂ. ಆಗಿತ್ತು. ಬಾಕಿ 50 ಪೈಸೆ ಕೊಡಲು ಸಿಬಂದಿ ಒಪ್ಪಿಲ್ಲ. ನಮ್ಮ ಕಂಪ್ಯೂಟರ್ ವ್ಯವಸ್ಥೆಯಲ್ಲಿ ಮೊತ್ತ ರೌಂಡಾಫ್ ಆಗಿದ್ದು, 30 ರೂ. ತೋರಿಸುತ್ತಿದ್ದು ಅಷ್ಟನ್ನೇ ಪಾವತಿ ಮಾಡಿ ಎಂದರು. ಅದಕ್ಕೆ ಒಪ್ಪದ ಮಾನ್ಯ ಯುಪಿಐ ಮೂಲಕ ನಿಗದಿತ ಶುಲ್ಕ ಪಾವತಿ ಮಾಡುತ್ತೇನೆ ಎಂದರೂ ಸಿಬ್ಬಂದಿ ಒಪ್ಪಿರಲಿಲ್ಲ.

    ಅಂಚೆ ಕಚೇರಿ ವಿರುದ್ಧ ಚೆನ್ನೈ ಜಿಲ್ಲಾ ಗ್ರಾಹಕ ವೇದಿಕೆಗೆ ದೂರು ನೀಡಿ, ಪ್ರತಿ ದಿನ ರೌಂಡಾಫ್ ಮಾಡುವುದರಿಂದ ಬೃಹತ್ ಮೊತ್ತ ಸಂಗ್ರಹಿಸಿದಂತಾಗುತ್ತದೆ. ಇದು ಕಪ್ಪುಹಣಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ ಮತ್ತು ಸರಕಾರಕ್ಕೆ ಬರುವ ಜಿಎಸ್‌ಟಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ವೇದಿಕೆ ಅಂಚೆ ಇಲಾಖೆಗೆ 15,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

    Continue Reading

    LATEST NEWS

    Trending