Home ರಾಷ್ಟ್ರೀಯ ವಾರ್ತೆ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್: ದುರುಳರ ಬದುಕುವ ಆಸೆಗೆ ತಣ್ಣೀರೆರಚಿದ ಕೋರ್ಟ್

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್: ದುರುಳರ ಬದುಕುವ ಆಸೆಗೆ ತಣ್ಣೀರೆರಚಿದ ಕೋರ್ಟ್

ನಿರ್ಭಯಾ ಪ್ರಕರಣ: ಅತ್ಯಾಚಾರಿಗಳಿಗೆ ಮಾರ್ಚ್ 3ರ ಮುಂಜಾನೆ 6 ಗಂಟೆಗೆ ಗಲ್ಲುಶಿಕ್ಷೆ

ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸುವುದರೊಂದಿಗೆ, ನಿರ್ಭಯಾ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಚಿತವಾಗಿದೆ.

ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾ ಮಾಡಿತ್ತು.

ಇದರ ಬೆನ್ನಲ್ಲೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕ್ಷಮಾದಾನ ಅರ್ಜಿಯನ್ನೂ ತಿರಸ್ಕರಿಸಿದ್ದು, ಗಲ್ಲು ಶಿಕ್ಷೆ ಖಾಯಂ ಆಗಿದೆ.

ದಿಲ್ಲಿಯ ಪಟಿಯಾಲ ಹೌಸ್ ಕೋರ್ಟ್ ಫೆ.17ರಂದು ಹೊಸ ಡೆತ್ ವಾರಂಟ್ ಹೊರಡಿಸಿದ್ದು, ಅದರಂತೆ ಮಾ.3 ಅಂದ್ರೆ ನಾಳೆ ಗಲ್ಲು ಶಿಕ್ಷೆ ಆಗಬೇಕಿದೆ.

ನಾಳೆ ಮುಂಜಾನೆ 6 ಗಂಟೆಗೆ ದುರುಳರಿಗೆ ಗಲ್ಲುಶಿಕ್ಷೆಯಾಗಲಿದೆ.

ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್, ವಿನಯ್ ಶರ್ಮಾ, ಪವನ್ ಗುಪ್ತಾ, ಅಕ್ಷಯ್ ಕುಮಾರ್ ಗೆ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಇನ್ನು ಯಾವುದೇ ಅವಕಾಶ ಇಲ್ಲದಂತಾಗಿದೆ.

- Advertisment -

RECENT NEWS

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...

ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸದ್ದು: ಇಂದು 24 ಮಂದಿಗೆ ಕೊರೊನಾ ಸೋಂಕು ದೃಢ…..!!

ದ.ಕ ಜಿಲ್ಲೆಯಲ್ಲಿಂದು 24 ಮಂದಿಗೆ ಕೊರೊನಾ ಪಾಸಿಟಿವ್… ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆ… ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ 24 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...

ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದು ಹೆಮ್ಮಾರಿಯಂತೆ ವರ್ತಿಸಿದ ಬಿಜೆಪಿ ನಾಯಕಿ ಸೊನಾಲಿ ಪೋಗಟ್..

ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ದರ್ಪ: ವಿಡಿಯೋ ವೈರಲ್... ನವದೆಹಲಿ: ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ಅಧಿಕಾರಿಯೊಬ್ಬರಿಗೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...