Home ಪ್ರಮುಖ ಸುದ್ದಿ ನಿರ್ಮಲಾ ಸೀತಾರಾಮನ್ ಕೊರೊನಾ ಪ್ಯಾಕೇಜ್ ಬೆನ್ನಲ್ಲೆ ಆರ್.ಬಿ.ಐ ನಿಂದ ಬಂತು ನೋಡಿ ಸಿಹಿ ಸುದ್ದಿ.!

ನಿರ್ಮಲಾ ಸೀತಾರಾಮನ್ ಕೊರೊನಾ ಪ್ಯಾಕೇಜ್ ಬೆನ್ನಲ್ಲೆ ಆರ್.ಬಿ.ಐ ನಿಂದ ಬಂತು ನೋಡಿ ಸಿಹಿ ಸುದ್ದಿ.!

ನಿರ್ಮಲಾ ಸೀತಾರಾಮನ್ ಕೊರೊನಾ ಪ್ಯಾಕೇಜ್ ಬೆನ್ನಲ್ಲೆ ಆರ್.ಬಿ.ಐ ನಿಂದ ಬಂತು ನೋಡಿ ಸಿಹಿ ಸುದ್ದಿ.!

ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ 21 ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದ್ದರಿಂದ ಸಾಮಾನ್ಯ ಜನರ ಜೀವನ ಹಾಗೂ ಆರ್ಥಿಕ ಸ್ಥಿತಿ ಹದಗೆಟ್ಟಿದೆ.

ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಕೇಂದ್ರ ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು 1.70 ಲಕ್ಷ ಕೋಟಿ ರೂ. ಪರಿಹಾರದ ಪ್ಯಾಕೇಜ್ ಘೋಷಿಸಿದ್ದರು.

ಈ ಬೆನ್ನಲ್ಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಾಲಗಾರರಿಗೆ ಬಿಗ್ ರಿಲೀಫ್ ನೀಡಿದೆ.

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೊರೊನಾ ವೈರಸ್‍ನಿಂದಾಗಿ ವಿಶ್ವಾದ್ಯಂತ ಜನರ ಜೀವನ ಹಾಗೂ ಆರ್ಥಿಕ ಸ್ಥಿತಿ ಹದಗೆಟ್ಟಿದೆ.

ಹೀಗಾಗಿ ದೇಶದಲ್ಲಿ ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರೆಪೋ (ವಾಣಿಜ್ಯ ಬ್ಯಾಂಕುಗಳು ಆರ್ಬಿಐನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿದರಕ್ಕೆ ರೆಪೋ ದರ ಎಂದು ಕರೆಯಲಾಗುತ್ತದೆ. ರೆಪೋ ದರ ಕಡೆಮೆಯಾದರೆ ಬ್ಯಾಂಕ್ ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಹಣವನ್ನು ಪಡೆಯಬಹುದು) ದರದಲ್ಲಿ ಶೇ. 0.75 ಕಡಿತಗೊಳಿಸಲಾಗಿದೆ.

ಸಾಲದ ಅವಧಿಯ ಮರುಪಾವತಿಸಲು 3 ತಿಂಗಳ ಇಎಂಐ ಅನ್ನು ರಿಯಾಯಿತಿ ನೀಡಲಾಗಿದೆ ಎಂದು ತಿಳಿಸಿದರು.

ಕ್ರೆಡಿಟ್ ಕಾರ್ಡ್ ಹೊರತು ಪಡಿಸಿ ಎಲ್ಲ ಬ್ಯಾಂಕ್, ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ಸಾಲಕ್ಕೆ ಇದು ಅನ್ವಯವಾಗಲಿದೆ.

1.70 ಲಕ್ಷ ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಅನ್ನು ಸರ್ಕಾರ ಗುರುವಾರ ಪ್ರಕಟಿಸಿದೆ.

ಇದರಲ್ಲಿ ಬಡವರು, ರೈತರು, ಕಾರ್ಮಿಕರು, ಮಹಿಳೆಯರು, ವೃದ್ಧರು, ವಿಧವೆಯರು ಮತ್ತು ಅಂಗವಿಕಲರಿಗೆ ಪರಿಹಾರ ಘೋಷಿಸಲಾಯಿತು.

ಕೊರೊನಾ ವೈರಸ್‍ನಿಂದಾಗಿ ದೇಶದಲ್ಲಿ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಇದು ಆರ್ಥಿಕತೆ ಮತ್ತು ಜೀವನದ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...