Connect with us

FILM

ಮಹಿಳೆ ಮೇಲೆ ಎರಡು ವರ್ಷ ನಿರಂತರ ಅತ್ಯಾಚಾರ; ಸಿನಿಮಾ ಸೆಟ್​ನಿಂದಲೇ ನಿರ್ದೇಶಕ ಲಿಜು ಕೃಷ್ಣ ಅರೆಸ್ಟ್​..!

Published

on

ಕೊಚ್ಚಿ : ಮಲಯಾಳಂ ಚಿತ್ರರಂಗ ನಿರ್ದೇಶಕ ಲಿಜು ಕೃಷ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಮಲಯಾಳಂನ ಖ್ಯಾತ ನಟ ನಿವಿನ್ ಪೌಳಿ ಹಾಗೂ ಮಂಜು ವಾರಿಯರ್​ ಒಟ್ಟಾಗಿ ನಟಿಸುತ್ತಿರುವ ಸಿನಿಮಾಗೆ ಕೃಷ್ಣ ಅವರು ಆ್ಯಕ್ಷನ್​ ಕಟ್​ ಹೇಳುತ್ತಿದ್ದು.ಕಣ್ಣೂರಿನಲ್ಲಿ ಈ ಸಿನಿಮಾದ ಶೂಟಿಂಗ್​ ನಡೆಯುತ್ತಿರುವಾಗಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಕೃಷ್ಣ ಅವರನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರು ಪಡಿಸಿದ್ದು ಕೋರ್ಟ್​ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮಹಿಳೆ ಒಬ್ಬರು ಕಳೆದ ವಾರ ಕೃಷ್ಣ ವಿರುದ್ಧ ದೂರು ದಾಖಲು ಮಾಡಿದ್ದರು. ತನ್ನ ಮೇಲೆ ಕೃಷ್ಣ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಮಾಡಿರುವುದಾಗಿ ಆರೋಪ ಮಾಡಿದ್ದರು. ಈ ದೂರನ್ನು ಆಧರಿಸಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ನಾನಾ ಪ್ರದೇಶಗಳಲ್ಲಿ ನನ್ನ ಮೇಲೆ ಕೃಷ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನನ್ನ ಒಪ್ಪಿಗೆ ಇಲ್ಲದೆ ಲೈಂಗಿಕ ಕ್ರಿಯೆ ನಡೆಸಲಾಗಿದೆ. ಇದರಿಂದ ನನಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ಉಂಟಾಗಿದೆ’ ‘ಈ ಪ್ರಕರಣದಲ್ಲಿ ತೀರ್ಪು ಬರುವವರೆಗೆ ಅವರು ಸಿನಿಮಾ ಕೆಲಸಗಳಲ್ಲಿ ತೊಡಗದಂತೆ ನಿರ್ಬಂಧ ಹೇರಬೇಕು’ ಎಂದು ಸಂತ್ರಸ್ತೆ ಕೋರಿದ್ದಾರೆ.

‘ಕೃಷ್ಣನಿಂದ ನಾನು ಗರ್ಭಿಣಿ ಆದೆ. ನಂತರ ಗರ್ಭಪಾತ ಮಾಡಿಸಿಕೊಂಡೆ. ಇದರಿಂದ ನಾನು ನಿರಂತರ ಮಾನಸಿಕ ಮತ್ತು ದೈಹಿಕ ಒತ್ತಡಕ್ಕೆ ಒಳಗಾದೆ. ಇದರಿಂದ ನನ್ನ ಬದುಕು ನಾಶವಾಯಿತು’ ಎಂದು ಅವರು ದೂರಿದ್ದಾರೆ.

‘ಕೃಷ್ಣ ನನಗೆ ಎರಡು ವರ್ಷಗಳಿಂದ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದರು. ನಾನು ಇದನ್ನು ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿದ್ದರು. ನನಗಾದ ಅನ್ಯಾದ ಬಗ್ಗೆ ಚಿತ್ರ ತಂಡದವರ ಬಳಿ ಹೇಳಿಕೊಂಡೆ. ಆದರೆ ಅವರು ಯಾರು ಕೂಡ ಸಹಾಯಕ್ಕೆ ಬರಲಿಲ್ಲ ಸಂತ್ರಸ್ತೆ ಹೇಳಿದ್ದಾರೆ.

ಸದ್ಯ, ಈ ಘಟನೆ ಬೆನ್ನಲ್ಲೇ ‘ಪಡವೆಟ್ಟು’ ಸಿನಿಮಾದ ಶೂಟಿಂಗ್​ ನಿಂತಿದೆ. ಈ ಸಿನಿಮಾವನ್ನು ಸನ್ನಿ ವಾಯ್ನೆ ಅವರು ನಿರ್ಮಾಣ ಮಾಡುತ್ತಿದ್ದಾರೆ.

FILM

ದಾಂಪತ್ಯಕ್ಕೆ ಕಾಲಿಡಲಿದ್ದಾರಾ ‘ಪ್ರಭಾಸ್‌’..! ಈ ಪೋಸ್ಟ್‌ ಹಿಂದಿನ ಅಸಲಿಯತ್ತೇನು!?

Published

on

ಟಾಲಿವುಡ್‌ ನ ಮೋಸ್ಟ್ ಬ್ಯಾಚುಲರ್‌ ಎಂದೇ ಹೆಸರಾಗಿರುವ ಪ್ರಭಾಸ್ ಸದಾ ತಮ್ಮ ಮದುವೆಯ ವಿಚಾರವಾಗಿಯೇ ಸುದ್ದಿಯಲ್ಲಿರುತ್ತಾರೆ. ಸೂಪರ್ ಸ್ಟಾರ್ ಪ್ರಭಾಸ್‌ರವರ ಹೆಸರಿನ ಜೊತೆ ಹಲವು ಸ್ಟಾರ್ ನಟಿಯರ ಹೆಸರುಗಳು ತುಣುಕು ಹಾಕುತ್ತಿತ್ತು. ಅದರಲ್ಲೂ ಪುತ್ತೂರಿನ ಬೆಡಗಿ ಅನುಷ್ಕಾ ಶೆಟ್ಟಿ ಯವರ ಹೆಸರು ಆಗಾಗ ಕೇಳಿಬರುತ್ತಿತ್ತು. ಇನ್ನು ಬಾಹುಬಲಿ ಸಿನೆಮಾದ ಬಳಿಕ ಇವರಿಬ್ಬರು ಪ್ರೀತಿಯಲ್ಲಿದ್ದಾರೆ, ಇನ್ನೇನು ದಾಂಪತ್ಯ ಜೀವನಕ್ಕೂ ಕಾಲಿಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಮಧ್ಯೆ ಪ್ರಭಾಸ್ ಹಾಗೂ ಅನುಷ್ಕಾ ಅದೆಲ್ಲವನ್ನು ಅಲ್ಲಗಳೆದಿದ್ದಾರೆ.

ಇದೀಗ ಪ್ರಭಾಸ್ ಅವರ ಒಂದು ಪೋಸ್ಟ್‌ ಅಭಿಮಾನಿಗಳಲ್ಲಿ ಖುಷಿ ನೀಡಿದೆ. ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ‘ಡಾರ್ಲಿಂಗ್ಸ್‌!!.. ಕೊನೆಗೂ ನನ್ನ ಜೀವನದಲ್ಲಿ ಒಬ್ಬ ವಿಶೇಷ ವ್ಯಕ್ತಿ ಬರಲಿದ್ದಾರೆ.. ಸ್ವಲ್ಪ ಕಾಯಿರಿ” ಎಂದು ಬರೆದುಕೊಂಡು ಪೋಸ್ಟ್‌ ಮಾಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಖುಷಿ ಜೊತೆ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಇನ್ನೂ ಈ ಪೋಸ್ಟ್‌ ನೋಡಿದ ಬಳಿಕ ಪ್ರಭಾಸ್ ಮದುವೆಗೆ ಸಜ್ಜಾಗಿದ್ದಾರಾ..!? ಎಂಬುದಾಗಿಯೂ ಕುತೂಹಲ ಮೂಡಿದೆ. ಇನ್ನೂ ಕೆಲವರು ಸಿನೆಮಾ ಪ್ರಚಾರಕ್ಕಾಗಿ ಈ ತಂತ್ರವನ್ನು ಬಳಸಿದ್ದಾರಾ ಎನ್ನುವುದು ಅನುಮಾನ ಮೂಡಿದೆ.

ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!

ಸಿನೆಮಾ ಪ್ರಚಾರಕ್ಕಾಗಿ ಪೋಸ್ಟ್‌ ಹಾಕಿದ್ರಾ ಪ್ರಬಾಸ್..?

kalki

ಸಲಾರ್ ಸಿನೆಮಾ ಹಿಟ್ ಬಳಿಕ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ ‘ ಸಿನೆಮಾ ತೆರೆಗೆ ಬರಲು ಸಿದ್ಧವಾಗಿದೆ. ಇನ್ನೂ ಈ ಸಿನೆಮಾದಲ್ಲಿ ಘಟಾನುಘಟಿಗಳು ಬಣ್ಣ ಹಚ್ಚಿದ್ದಾರೆ. ಅಮಿತಾಬಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ದಿಶಾ ಪಟಾನಿ ಮುಂತಾದವರು ನಟಿಸಿದ್ದಾರೆ. ಇದೇ ಸಿನೆಮಾದ ಪ್ರಚಾರಕ್ಕಾಗಿ ಮಾಡಿರುವ ತಂತ್ರ ಎಂದು ಹೇಳಲಾಗಿದೆ. ಇನ್ನು ಈ ಸಿನೆಮಾ ಪ್ರಚಾರಕ್ಕಾಗಿಯೇ ಹೊಸ ವಿನ್ಯಾಸದ ಕಾರೊಂದನ್ನು ತಯಾರು ಮಾಡಲಾಗಿದೆಯಂತೆ. ಹೀಗಾಗಿ ಪ್ರಭಾಸ್ ‘ ನನ್ನ ಜೀವನದಲ್ಲಿ ಹೊಸ ವ್ಯಕ್ತಿ ಆಗಮನ’ ಎಂದು ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.

ಅದೇನೆ ಇರಲಿ ಪ್ರಭಾಸ್ ಮದುವೆ ಆಗಲು ನಿರ್ಧಿರಿಸಿದ್ದಾರಾ..? ಅಥವಾ ಸಿನೆಮಾ ಪ್ರಚಾರಕ್ಕಾಗಿ ಹೀಗೆ ಬರೆದುಕೊಂಡಿದ್ದಾರಾ..? ಅನ್ನೋದರ  ಅಸಲಿಯತ್ತು  ಇನ್ನೆರೆಡು ದಿನಗಳಲ್ಲಿ ಕಾದು ನೋಡಬೇಕಿದೆ.

 

 

Continue Reading

FILM

ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!

Published

on

ಬೆಂಗಳೂರು : ಚಾಲೆಂಜಿಂಗ್ ದರ್ಶನ್ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರದ ಪ್ರತೀ ಅಪ್ಡೇಟ್ ಗಾಗಿ ತುದಿಗಾಲಲ್ಲಿ ನಿಂತಿರುತ್ತಾರೆ. ಹೊಸ ಚಿತ್ರ ಅನೌನ್ಸ್ ಆದಾಗಿನಿಂದ ಪ್ರತಿ ಸುದ್ದಿಗಾಗಿಯೂ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷೆಯಲ್ಲಿರುತ್ತಾರೆ.
‘ಕಾಟೇರ’ ಚಿತ್ರದ ಯಶಸ್ಸಿನ ನಂತರ ದರ್ಶನ್ ‘ಡೆವಿಲ್’ ಚಿತ್ರವನ್ನು ಅನೌನ್ಸ್ ಮಾಡಿದ್ದರು. ಈಗಾಗಲೇ ಪೋಸ್ಟರ್, ಮೇಕಿಂಗ್ ವೀಡಿಯೋಗಳು ಸದ್ದು ಮಾಡುತ್ತಿವೆ. ಡಿ ಬಾಸ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಕರಾವಳಿ ಬೆಡಗಿ ನಾಯಕಿ :

ದರ್ಶನ್ ಜೊತೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲಕ್ಕೂ ಈಗ ತೆರೆ ಬಿದ್ದಿದೆ, ಕರಾವಳಿಯ ಬೆಡಗಿ ದರ್ಶನ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹೌದು, ಕರಾವಳಿ ಮೂಲದ ರಜನಾ ರೈ ‘ಡೆವಿಲ್’ ಚಿತ್ರದ ನಾಯಕಿ. ಈ ಹಿಂದೆಯೂ ರಚನಾ ಡೆವಿಲ್ ಗೆ ನಾಯಕಿ ಆಗಲಿದ್ದಾರೆ ಎಂಬ ಗಾಳಿ ಸುದ್ದಿಯೊಂದು ಹರಿದಾಡುತ್ತಿತ್ತು. ಇದೀಗ ಅದು ದೃಢವಾಗಿದೆ. ಪೋಸ್ಟರ್ ಕೂಡ ಬಿಡುಗಡೆಯಾಗಿದೆ.

ಸಿನಿಮಾದ ನಿರ್ಮಾಣ ಸಂಸ್ಥೆಯಾದ ಜೈ ಮಾತಾ ಕಂಬೈನ್ಸ್‌ ತನ್ನ ಸೋಶಿಯಲ್‌ ಮೀಡಿಯಾ ಪುಟದಲ್ಲಿ ಪೋಸ್ಟರ್ ಹಂಚಿಕೊಂಡಿದ್ದು, ‘ವೆಲ್‌ಕಮ್‌ ಆನ್‌ ಬೋರ್ಡ್‌, ಶುದ್ಧ ಕೌಶಲ್ಯಕ್ಕಾಗಿ ಗುರುತಿಸಲಾಗಿದೆ. ರಚನಾ ರೈ ಸ್ವಾಗತ’ ಎಂದುಬರೆದುಕೊಂಡಿದೆ. ಪೋಸ್ಟರ್ ನಲ್ಲಿ ನೆಲದ ಪ್ರತಿಭೆಗೆ ಮನ್ನಣೆ ಎಂದು ಬರೆಯಲಾಗಿದೆ.


ಪುತ್ತೂರು ಮೂಲದ ರಚನಾ ಈಗಾಗಲೇ ತುಳು, ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ತುಳು ಚಿತ್ರ ‘ಸರ್ಕಸ್’ನಲ್ಲಿ ನಾಯಕಿಯಾಗಿ ಮಿಂಚಿದ್ದಾರೆ. ಕನ್ನಡದಲ್ಲಿ ಧನ್ವೀರ್ ಗೌಡ ಜೊತೆ ‘ವಾಮನ’ದಲ್ಲೂ ನಟಿಸಿದ್ದಾರೆ. ಬ್ಯಾಡ್ಮಿಂಟನ್ ಪ್ಲೇಯರ್ ಆಗಿರುವ ರಚನಾ ಮಾಡೆಲ್ ಕ್ಷೇತ್ರದಲ್ಲೂ ಮಿಂಚಿದ್ದಾರೆ. ಡ್ಯಾನ್ಸರ್ ಕೂಡಾ ಹೌದು. ‘ಓ ಮೈ ಡಾಗ್’ ಎಂಬ ಪುಸ್ತಕವನ್ನೂ ಅವರು ಬರೆದಿದ್ದಾರೆ.

ಇದನ್ನೂ ಓದಿ : ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!

‘ತಾರಕ್’ ಬಳಿಕ ‘ಡೆವಿಲ್’ ಚಿತ್ರದ ಮೂಲಕ ಮತ್ತೆ ಪ್ರಕಾಶ್ ವೀರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು, ದರ್ಶನ್ ಕೈಗೆ ಪೆಟ್ಟಾದ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತವಾಗಿತ್ತು. ಸದ್ಯ ದರ್ಶನ್ ಗುಣಮುಖರಾಗಿದ್ದು, ಸದ್ಯದಲ್ಲೇ ಡೆವಿಲ್ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

FILM

ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!

Published

on

ಕಿರುತೆರೆಯ ಖ್ಯಾತ ನಟಿ ಪವಿತ್ರಾ ಜಯರಾಮ್ ಇತ್ತೀಚೆಗೆ ಹೈದರಾಬಾದ್ ಸಮೀಪ ಕಾರು ಅಪಘಾತದಲ್ಲಿ ಇಹಲೋಕ ತ್ಯಜಿಸಿದ್ದರು. ಈ ವೇಳೆ ಅವರ ಗೆಳೆಯ ಹಾಗೂ ತೆಲುಗು ನಟ ಚಂದು ಅವರಿಗೂ ಪೆಟ್ಟಾಗಿದೆ. ಗೆಳತಿಯನ್ನು ಕಳೆದುಕೊಂಡ ನೋವಿನಲ್ಲಿದ್ದ ಚಂದು ಆತ್ಮಹ*ತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಚಂದು ಹಾಗೂ ಪವಿತ್ರಾ ಜಯರಾಂ ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ಪವಿತ್ರಾ ಹಾಗೂ ಚಂದು ಇಬ್ಬರೂ ಸೋಶಿಯಲ್ ಮೀಡಿಯಾಗಳಲ್ಲಿ ಆ್ಯಕ್ಟಿವ್ ಆಗಿದ್ದರು. ಇಬ್ಬರು ಜೊತೆಯಾಗಿ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದರು. ಯಾವಾಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರು. ದರ್ಶನ್ ಸಿನಿಮಾಗೆ ಪವಿತ್ರಾ ಅವರಿಗೆ ಆಫರ್ ಬಂದಿತ್ತು. ಹೀಗಾಗಿ ಇವರಿಬ್ಬರು ಜೊತೆಯಾಗಿ ಬೆಂಗಳೂರಿಗೆ ಬಂದಿದ್ದರು. ಹಿಂತಿರುಗುವಾಗ ಪ್ರಯಾಣಿಸುತ್ತಿರುವ ಕಾರು ಅಪಘಾತವಾಗಿತ್ತು. ಈ ವೇಳೆ ನಟಿ ಪವಿತ್ರಾ ಜಯರಾಂ ಸಾ*ವನ್ನಪ್ಪಿದ್ದರು. ಚಂದು ಗಾಯಗೊಂಡಿದ್ದರು.

ಇದನ್ನೂ ಓದಿ : ಬ್ಯಾಂಡೇಜ್ ಸುತ್ತಿಕೊಂಡೇ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಂಡ ಐಶ್ವರ್ಯ ರೈ

ಪವಿತ್ರಾ ಸಾವಿಗೆ ತೀವ್ರ ನೊಂದಿದ್ದ ಚಂದು ಸೋಶಿಯಲ್ ಮೀಡಿಯಾದಲ್ಲಿ ಮಿಸ್ ಯೂ ಎಂದು ಪವಿತ್ರಾ ಜೊತೆಗಿನ ವೀಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಯಾಗಿದೆ.

 

Continue Reading

LATEST NEWS

Trending