Connect with us

    DAKSHINA KANNADA

    ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ

    Published

    on

    ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ.

    ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್​ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು.

    ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.

    ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

    DAKSHINA KANNADA

    ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು(ಜು.8)ರಜೆ

    Published

    on

    ಮಂಗಳೂರು : ಮಂಗಳೂರು ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.8ರಂದು ರಜೆ ಘೋಷಿಸಲಾಗಿದೆ.


    ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮಂಗಳೂರು ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮಂಗಳೂರು ತಹಶೀಲ್ದಾರ್ ರಜೆ ಘೋಷಿಸಿ ಆದೇಶಿಸಿದ್ದಾರೆ.

    Continue Reading

    BANTWAL

    ಕಳ್ಳತನಕ್ಕೆ ವೃದ್ಧೆಯ ಕತ್ತು ಹಿಸುಕಿದ ಕಿರಾತಕರು..!

    Published

    on

    ಮಂಗಳೂರು : ಕಿಟಕಿಯ ಸರಳು ತುಂಡರಿಸಿ ಒಳನುಗ್ಗಿದ ಕಳ್ಳರು ವೃದ್ಧೆಯ ಕತ್ತು ಹಿಸುಕಿ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡೂರು ಗ್ರಾಮದ ಬಲಿಪಗುಳಿ ಎಂಬಲ್ಲಿ  ನಡೆದಿದೆ.

    ವಿದೇಶದಲ್ಲಿರುವ ಸುಲೈಮಾನ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಮಹಡಿಯ ಕಿಟಕಿ ಸರಳು ತುಂಡರಿಸಿ ಬಾಗಿಲಿನ ಮೂಲಕ ಒಳನುಗ್ಗಿದ ಕಳ್ಳರು ಅಜ್ಜಿಯನ್ನು ಘಾಸಿಗೊಳಿಸಿ ಚಿನ್ನಾಭರಣ ಲೂಟಿದ್ದಾರೆ. ಮನೆಯ ಕೋಣೆಯೊಳಗೆ ನಿದ್ರಿಸಿದ್ದ ವೃದ್ಧೆ ಐಸಮ್ಮಾ(72)ಅವರ ಕತ್ತು ಹಿಸುಕಿ ಪ್ರಜ್ಞಾಹೀನರಾದ ಬಳಿಕ ಕಿವಿಯಲ್ಲಿದ್ದ ಚಿನ್ನ ಕಸಿದು ಪರಾರಿಯಾಗಿದ್ದಾರೆ.

    ಇನ್ನೊಂದು ಕೋಣೆಯಲ್ಲಿ ಮಕ್ಕಳೊಂದಿಗೆ ಮಲಗಿದ್ದ ಸೊಸೆ ಐಸಮ್ಮಾ ಅವರಿಗೆ ಈ ವಿಚಾರ ಬೆಳಗ್ಗೆ ಅರಿವಿಗೆ ಬಂದಿದೆ. ಬೆಳಗ್ಗೆ ಎದ್ದು ಅತ್ತೆಯನ್ನು ಎಚ್ಚರಿಸಲು ಬಂದಾಗ ಅತ್ತೆ ಐಸಮ್ಮಾ ಪ್ರಜ್ಞಾಹೀನರಾಗಿ ಬಿದ್ದುಕೊಂಡಿದ್ದರು. ಏನೋ ತೀವೃ ಅಸೌಖ್ಯ ಎಂದು ಶಂಕಿಸಿ ಮನೆಯವರು, ನೆರೆಯ ಸಂಬಂದಿಕರಿಗೆ ಮಾಹಿತಿ ನೀಡಿದ್ದಾರೆ. ಸಂಬಂದಿಗಳು ಬಂದು ನೋಡಿದಾಗ ಕಿಟಕಿಯ ಸರಳು ತುಂಡರಿಸಿರುವುದು ಮತ್ತು ಮಹಡಿಯ ಬಾಗಿಲು ತೆರೆದಿರುವುದು ಕಂಡುಬಂದಿತ್ತು. ಇದಾದ ಬಳಿಕ ಮನೆಯವರು ಮತ್ತಷ್ಟು ಪರಿಶೀಲಿಸಿದಾಗ ಅಜ್ಜಿಯ ಕಿವಿಯೋಲೆಗಳು ಕಳ್ಳತನ ಆಗಿರುವುದು ಗೊತ್ತಾಗಿದೆ. ಬಳಿಕ ಈ ಬಗ್ಗೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ಮೂಲಕ ಪರಿಶೀಲನೆ ನಡೆಸಲಾಗಿದೆ. ಗಾಯಗೊಂಡ ವೃದ್ಧೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಲೈಮಾನ್ ಸಹೋದರ ಇಬ್ರಾಹಿಂ ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Continue Reading

    DAKSHINA KANNADA

    ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಕಳವು ಪ್ರಕರಣ; ಕೋಡಿಕಲ್ ನ ಮನೆಯೊಂದರಲ್ಲಿ ಕಳ್ಳತನಕ್ಕೆ ವಿಫಲ ಯತ್ನ

    Published

    on

    ಮಂಗಳೂರು : ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿನ್ನೆ ಮಂಗಳೂರಿನ ಕೋಡಿಕಲ್ ನ ಮನೆಯೊಂದರಲ್ಲಿ ಕಳ್ಳರ ತಂಡವೊಂದು ಕಳ್ಳತನಕ್ಕೆ ಯತ್ನಿಸಿದೆ.


    ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯವರು ಮಲಗಿದ್ದ ಕೊಠಡಿಯ ಗ್ರಿಲ್ ಕಟ್ ಮಾಡಲಾಗಿದೆ. ಸುಮಾರು ಐದು ಜನರ ತಂಡ ಈ ಕೃತ್ಯ ನಡೆಸಿರುವುದು ಇಲ್ಲಿನ ಮನೆಯೊಂದರ ಸಿಸಿಟಿವಿಯಲ್ಲಿ ಅಸ್ಪಷ್ಟವಾಗಿ ಕಾಣಿಸಿದೆ.


    ಕಳ್ಳರ ಮುಖಚಹರೆ ಗುರುತಿಸಲು ಅಸಾಧ್ಯವಾಗಿದ್ದು, ಕಳ್ಳರು ಅದೇ ಮನೆಯನ್ನು ಗುರಿಯಾಗಿಸಿ ಕಳ್ಳತನಕ್ಕೆ ಯತ್ನಿಸಿದ್ದಾರೆ ಎಂಬುವುದು ಗೊತ್ತಾಗುತ್ತದೆ. ಇದು ಈ ಪ್ರದೇಶದಲ್ಲಿ ಓಡಾಡಿ ಮನೆಯಲ್ಲಿ ಯಾರು ಇಲ್ಲ ಎಂದು ಖಚಿತಪಡಿಸಿಕೊಂಡು ನಡೆಸಿದ ಕೃತ್ಯವಾಗಿರುವ ಅನುಮಾನ ಕಾಡಿದೆ. ಆದ್ರೆ, ರಾತ್ರಿಯಲ್ಲಿ ಮನೆಯಲ್ಲಿ ಜನರು ಇರುವುದು ಗಮನಿಸಿ ಯಾವುದೇ ಕಳ್ಳತನ ಮಾಡದೆ ಕಳ್ಳರ ತಂಡ ವಾಪಾಸಾಗಿದೆ. ಈ ಘಟನೆಯ ಬೆನ್ನಲ್ಲೇ ಪೊಲೀಸರು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ : ಭೂಮಿಗೆ ಕಾದಿದೆ ಅಪಾಯ..! ವಿಜ್ಞಾನಿಗಳಿಂದ ಅಧ್ಯಯನ

    ಪರಿಸರದಲ್ಲಿ ಯಾರಾದ್ರೂ ಅನುಮಾನಾಸ್ಪದವಾಗಿ ಓಡಾಡುವವರು ಕಂಡು ಬಂದ್ರೆ 112 ಗೆ ಕರೆ ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೆ ಮನೆ, ಅಂಗಡಿಗಳ ಮುಂದೆ ಸರಿಯಾದ ರೀತಿಯಲ್ಲಿ ರಸ್ತೆ ಹಾಗೂ ಪ್ರದೇಶ ಕಾಣುವ ರೀತಿಯಲ್ಲಿ ಹೈ ರೆಸೆಲ್ಯೂಷನ್ ಸಿಸಿ ಕ್ಯಾಮೆರಾ ಅಳವಡಿಸಲು ಸಲಹೆ ನೀಡಿದ್ದಾರೆ.

    Continue Reading

    LATEST NEWS

    Trending