Connect with us

STATE

ಶನಿವಾರಸಂತೆ: ನೆಮ್ಮದಿ ಕೇಂದ್ರದಿಂದ ಜನರಿಗೆ ನೆಮ್ಮದಿ ಇಲ್ಲ ಕರವೇ ಆರೋಪ

Published

on

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯಲ್ಲಿರುವ ಕಂದಾಯ ಇಲಾಖೆಯ ನೆಮ್ಮದಿ ಕೇಂದ್ರದಲ್ಲಿ ಓರ್ವ ಕಂಪ್ಯೂಟರ್ ಆಪರೇಟರ್‌ ಇದ್ದು, ಅವರು ಆಗಾಗೆ ರಜೆಯ ಮೇಲೆ ಹೋಗುತ್ತಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.


ಈ ಸಿಬ್ಬಂದಿ ರಜೆಯ ಮೇಲೆ ಹೋಗುವಾಗ ಬೇರೆ ಕಂಪ್ಯೂಟರ್ ಆಪರೇಟರ್ ನ್ನು ಸಹ ನೇಮಿಸುವುದಿಲ್ಲ. ಈ ಶನಿವಾರಸಂತೆ ಹೋಬಳಿಗೆ ಸೇರಿದ ಕಂದಾಯ ಇಲಾಖೆಯಲ್ಲಿ ತುಂಬಾ ಹಳ್ಳಿಗಾಡುಗಳಿಂದ ಕೂಡಿದ ಪ್ರದೇಶವಾಗಿರುವುದರಿಂದ ದೂರದ ಊರಿನಿಂದ ಬಂದ ಜನರು ಬೀಗ ಹಾಕಿರುವ ನೆಮ್ಮದಿ ಕೇಂದ್ರವನ್ನು ನೋಡಿ ವಾಪಸ್ ಹೋಗುವ ಪರಿಸ್ಥಿತಿ ಬಂದೊದಗಿದೆ.

ಹಾಗಾಗಿ ಶನಿವಾರಸಂತೆಗೆ ಹೊಸದಾಗಿ ಕಂಪ್ಯೂಟರ್ ಆಪರೇಟರ್ ನೇಮಿಸಿ ಕೊಡಬೇಕಾಗಿ ಕರವೇ ಕಾರ್ಯಕರ್ತರು ಹಾಗೂ ಸ್ಥಳೀಯರು ಜಿಲ್ಲಾಧಿಕಾರಿಯವರ ಬಳಿ ಆಗ್ರಹಿಸಿದ್ದಾರೆ.

LATEST NEWS

ಆಭರಣ ಪ್ರಿಯರಿಗೆ ನಿರಾಸೆ….ಇಂದು ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ…!

Published

on

ಬೆಂಗಳೂರು : ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ನಿನ್ನೆಗಿಂತ ಇಂದು(ಮಾ.29)  ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ.

ಮದುವೆ ಸಮಾರಂಭಗಳ ಸೀಸನ್ ಇದು. ಶುಭ ಸಮಾರಂಭಗಳಿಗೆ ಚಿನ್ನಾಭರಣವೂ ಅತೀ ಮುಖ್ಯ. ಹಾಗಾಗಿ ಚಿನ್ನ ಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ.

ಎಷ್ಟಿದೆ ಬೆಲೆ ?
ಸದ್ಯ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 61,700 ರೂಪಾಯಿ ಇದ್ದು, 24 ಕ್ಯಾರೆಟ್​ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂ ಬೆಲೆ 67,310 ರೂಪಾಯಿ ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 7,750 ರೂಪಾಯಿ ಇದೆ.

ಒಂದು ಗ್ರಾಂ ಚಿನ್ನದ ದರ
22 ಕ್ಯಾರೆಟ್ ಚಿನ್ನದ ದರ – 6,170 ರೂಪಾಯಿ
24 ಕ್ಯಾರೆಟ್ ಚಿನ್ನದ ದರ – 6,731 ರೂಪಾಯಿ

10 ಗ್ರಾಂ ಚಿನ್ನದ ದರ

22 ಕ್ಯಾರೆಟ್ ಆಭರಣ ಚಿನ್ನದ ದರ – 61,700 ರೂಪಾಯಿ
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – 67,310 ರೂಪಾಯಿ

8 ಗ್ರಾಂ ಚಿನ್ನದ ದರ
22 ಕ್ಯಾರೆಟ್ ಆಭರಣ ಚಿನ್ನದ ದರ – 49,360 ರೂಪಾಯಿ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
ಬೆಂಗಳೂರು- 61,700 ರೂಪಾಯಿ
ಚೆನ್ನೈ – 62,500 ರೂಪಾಯಿ
ಮುಂಬೈ – 61,700 ರೂಪಾಯಿ
ಕೇರಳ -61,700 ರೂಪಾಯಿ
ಕೋಲ್ಕತ್ತಾ – 61,700 ರೂಪಾಯಿ
ಜೈಪುರ್ -61,850 ರೂಪಾಯಿ
ಭುವನೇಶ್ವರ್- 61,700 ರೂಪಾಯಿ
ಅಹ್ಮದಾಬಾದ್- 61,750 ರೂಪಾಯಿ
ಲಕ್ನೋ – 61,850 ರೂಪಾಯಿ
ನವದೆಹಲಿ – 61,850 ರೂಪಾಯಿ

ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
ಬೆಂಗಳೂರು-7,750 ರೂಪಾಯಿ
ಚೆನ್ನೈ- 8,050 ರೂಪಾಯಿ
ಮುಂಬೈ-7,750 ರೂಪಾಯಿ
ಕೋಲ್ಕತ್ತಾ-7,750 ರೂಪಾಯಿ
ನವದೆಹಲಿ-7,750 ರೂಪಾಯಿ

Continue Reading

LATEST NEWS

ಏಪ್ರಿಲ್ 3 ರ ವರೆಗೆ ಭಾರೀ ಮಳೆ ಮುನ್ಸೂಚನೆ; ಎಲ್ಲೆಲ್ಲಿ ಮಳೆ?

Published

on

ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಮಳೆ ಬಂದರೆ ಸಾಕು ಅನ್ನೋ ಮನೋಭಾವನೆ ಇದೆ. ಈ ನಡುವೆ ಏಪ್ರಿಲ್‌ 3ರವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?

ಮಾರ್ಚ್ 29 ಮತ್ತು 30 ರಂದು ಪಶ್ಚಿಮ ಹಿಮಾಲಯ ಪ್ರದೇಶದ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಮಾರ್ಚ್ 29 ರಿಂದ 31 ರ ವರೆಗೆ ವಾಯುವ್ಯ ಮತ್ತು ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಸಾಧರಾಣ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?

ಚಂಡಮಾರುತದ ಪರಿಣಾಮವಾಗಿ, ಬಿಹಾರದ, ದಕ್ಷಿಣ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಚದುರಿದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಶ್ಚಿಮ ಬಂಗಾಳ, ಒಡಿಶಾ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 3ರ ವರೆಗೆ ಆರ್ದ್ರ ವಾತಾವರಣವನ್ನು ನಿರೀಕ್ಷಿಸಲಾಗಿದೆ. ಬಿಹಾರ ಮತ್ತು ಜಾರ್ಖಂಡ್‌ಗಳು ಮುಂದಿನ ಕೆಲವು ದಿನಗಳವರೆಗೆ ಮಳೆ ಸಾಧ್ಯತೆ ಇದೆ.

ಮಾರ್ಚ್ 31 ರಂದು ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಕೆಲವು ದಿನಗಳ ವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.

ಇದಲ್ಲದೆ, ಅರುಣಾಚಲ ಪ್ರದೇಶದದಲ್ಲಿ ಏಪ್ರಿಲ್ 1 ರಂದು ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Continue Reading

bangalore

ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!

Published

on

ಬೆಂಗಳೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರುವಾರ (ಮಾ.28) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

revannaನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ.

2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿದವಿಟ್‌ನಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್‌ನಲ್ಲಿ ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಈ ಪೈಕಿ 5.44 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 35.40 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೆ, 9.29 ಲಕ್ಷ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿವಿಧ ಬ್ಯಾಂಕ್​ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಇದ್ದು, 5 ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಸಿದ್ದು, 31 ಹಸುಗಳು, 4 ಎತ್ತುಗಳು, 1 ಟ್ರ್ಯಾಕ್ಟರ್ ಹೊಂದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಲಕ್ಷಾಧಿಪತಿ;ಅವರ ಆಸ್ತಿ ವಿವರ ಇಲ್ಲಿದೆ!

ಪ್ರಜ್ವಲ್ ರೇವಣ್ಣ ಮಾಡಿದ ಸಾಲ
ಬೆಂಗಳೂರು ನಗರ, ಮೈಸೂರು ಸೇರಿದಂತೆ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ, ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯಾರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಲಕ್ಷ ಸಾಲ ಪಡೆದಿದ್ದು, ತಂದೆ ರೇವಣ್ಣರಿಂದ 86 ಲಕ್ಷ, ಸೋದರ ಸೂರಜ್​ರಿಂದ 1 ಕೋಟಿ ಸಾಲ ಮಾಡಿದ್ದಾರೆ. ಹೀಗೆ ಒಟ್ಟು 4.48 ಕೋಟಿ ಸಾಲ ಹೊಂದಿದ್ದಾರೆ.

ತೆರಿಗೆ ಬಾಕಿ ಉಳಿಸಿಕೊಂಡ ಪ್ರಜ್ವಲ್ ರೇವಣ್ಣ
ಸರ್ಕಾರಕ್ಕೆ 3.4 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನ ಹೊಂದಿದ್ದಾರೆ. 17.48 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ, 1.90 ಲಕ್ಷ ಮೌಲ್ಯದ ವಜ್ರಾಭರಣ ಹೊಂದಿದ್ದಾರೆ ಎಂದು ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ್ದಾರೆ.

Continue Reading

LATEST NEWS

Trending