Connect with us

DAKSHINA KANNADA

ಮಂಗಳೂರಿನಲ್ಲಿ ಇಂದು ಅತ್ತಾವರ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

Published

on

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆ.ಚಿ ಪಾಂಡೇಶ್ವರ ಫೀಡರ್‍ನಲ್ಲಿ ಹಾಗೂ 33/11 ಕೆ.ವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮುನೀಶ್ವರ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.

ಆ ಪ್ರಯುಕ್ತ ಇಂದು ಬೆಳಿಗ್ಗೆ 10 ರಿಂದ 5 ಗಂಟೆಯ ವರೆಗೆ ಎ.ಬಿ ಶೆಟ್ಟಿ ಸರ್ಕಲ್, ಭಾರತೀಯ ವಿಶ್ವ ವಿಧ್ಯಾಭವನ, ಎಸ್.ಪಿ ಆಫೀಸ್, ಪಾಂಡೇಶ್ವರ ಕಟ್ಟೆ, ಪಾಂಡೇಶ್ವರ ನ್ಯೂ ರಸ್ತೆ, ಮಹಾಲಿಂಗೇಶ್ವರ ದೇವಸ್ಥಾನ, ಅಮೃತ ನಗರ, ರೋಸಾರಿಯೋ ಚರ್ಚ್ ರೋಡ್, ಪೊಲೀಸ್ ಲೇನ್, ಪಿ.ಡಬ್ಲ್ಯೂ.ಡಿ, ಕಮರ್ಷಿಯಲ್ ಟ್ಯಾಕ್ಸ್ ಕಚೇರಿ, ಕೇರಳ ಸಮಾಜ, ಎಮ್.ವಿ.ಶೆಟ್ಟಿ, ಓಲ್ಡ್ ಕೆಂಟ್ ರಸ್ತೆ, ದೂಮಪ್ಪ ಕಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಪದವು ಫೀಡರ್ ನಲ್ಲಿ, 11ಕೆ.ವಿ ದತ್ತನಗರ ಫೀಡರ್ ಹಾಗೂ 11ಕೆ.ವಿ ಇಂಡಸ್ಟ್ರೀಯಲ್ ಫೀಡರ್‍ನಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆ ನಿಮಿತ್ತ ಇಂದು ಬೆಳಿಗ್ಗೆ 10ರಿಂದ ಸಂಜೆ 5ರ ತನಕ ಬಿಕರ್ನಕಟ್ಟೆ, ಜಯಶ್ರೀಗೇಟ್, ಕಲಾಯಿಕಂಡೆಟ್ಟು, ನಾಯ್ಗರಕೇನ್, ರಮಾಶಕ್ತಿ, ಕಾನಡ್ಕ, ಕಾರ್ಮಿಕ ಕಾಲೋನಿ, ದತ್ತನಗರ, ಮೇಕೆದ ಗುಡ್ಟೆ, ಕೋಡಂಗೆ, ಶ್ರೀನಿವಾಸ ಮಲ್ಯ ಲೇಔಟ್, ಈಡನ್ ಎನ್ ಕ್ಲೇವ್, ಗುಂಡಳಿಕೆ,

ಮಲ್ಲಿ ಕಂಪೌಂಡ್, ಪದವು, ಶರಬತ್ ಕಟ್ಟೆ, ಎಸ್ಟೇಟ್ ಆಫಿಸ್, ಇಂಡಸ್ಟ್ರೀಯಲ್ ಏರಿಯಾ, ಯೆಯ್ಯಾಡಿ, ಬಜ್ಜೋಡಿ, ಮಾರಿಗುಡಿ, ಅಡುಮರೋಳಿ, ನಟ್ಟಿಮನೆ, ತಾರೆತೋಟ, ತಾತಾವು, ಬೋಟ್ ಹೌಸ್ ಹಾಗೂ ಸುತ್ತಮುತ್ತಲಿ ಪ್ರದೇಶದಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಅದೇ ರೀತಿ ತಡಂಬೈಲ್ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡ ಕಾರಣ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮುಕ್ಕ, ಸಸಿಹಿತ್ಲು, ಶ್ರೀನಿವಾಸ್ ನಗರ, ದಾಂಡಿ, ಮೂಡುಕೊಪ್ಪಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending