Connect with us

DAKSHINA KANNADA

ಮೂಡುಬಿದ್ರೆ ಸೇರಿದಂತೆ ಇಂದು ಮತ್ತು ನಾಳೆ ಮಂಗಳೂರಿನಲ್ಲಿ ಹಲವೆಡೆ ನೋ ಕರೆಂಟ್..

Published

on

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಾರ್ಕೆಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಂಡ ಕಾರಣ ಇಂದು ಹಾಗೂ ನಾಳೆ ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.


ಇಂದು ಲೇಡಿಗೋಷನ್ ಹಾಸ್ಪಿಟಲ್, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗ, ಜಿ.ಎಚ್.ಎಸ್ ರಸ್ತೆ, ಪಿ.ಎಮ್. ರಾವ್ ರೋಡ್, ಗೌರಿಮಠ ರಸ್ತೆ, ರಾಘವೇಂದ್ರ ಮಠ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡ ಕಾರಣ ಫೀಡರುಗಳಲ್ಲಿ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ,

ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವನಕಜೆ, ಅಮನೊಟ್ಟು, ಆನೆಗುಡ್ಡೆ, ಜೋಗೊಟ್ಟು, ವಾಲ್ಪಾಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.

ನಾಳೆ 33/11ಕೆ.ವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆ.ವಿ. ಡೊಂಗರಕೇರಿ ಫೀಡರ್ ಮತ್ತು 33/11ಕೆ.ವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಹಂಪನಕಟ್ಟ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಂಡ ಕಾರಣ ಸಿಟಿ ಸೆಂಟರ್, ಕೊಡಿಯಾಲ್ ಬೈಲ್, ಡಿಸ್ಟ್ರಿಕ್ಟ್ ಕೋರ್ಟ್,

ಕರ್ನಾಟಕ ಬ್ಯಾಂಕ್, ಅಲೋಶಿಯಸ್ ಕಾಲೇಜ್, ಜಯಶ್ರೀ ಹಾಸ್ಪಿಟಲ್, ಮನೋರಮ ಹೋಟೆಲ್, ಪಂಚವಟಿ ಲೇನ್, ಟೌನ್ ಹಾಲ್, ಜಿಲ್ಲಾ ಪಂಚಾಯತ್, ಮಿನಿ ವಿಧಾನಸೌಧ, ಐಡಿಯಲ್ ಐಸ್‍ಕ್ರೀಂ, ಭೂಷನ್ ಬಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.

220ಕೆ.ವಿ. ಎಸ್.ಆರ್.ಎಸ್ ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಯೆಯ್ಯಾಡಿ ಮತ್ತು ಹರಿಪದವು ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡ ಕಾರಣ ಸೆ.15ರ ಬೆಳಿಗ್ಗೆ 9.45 ರಿಂದ ಸಂಜೆ 4.30ರ ವರೆಗೆ ಮೇರಿಹಿಲ್, ಯೆಯ್ಯಾಡಿ, ಹರಿಪದವು, ಕುಂಟಲ್ಪಾಡಿ, ಕೆ.ಪಿ.ಟಿ., ಉದಯನಗರ, ಲ್ಯಾಂಡ್ ಲಿಂಕ್ಸ್, ಪೆರ್ಲಗುರಿ, ಪದವಿನಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending