Saturday, August 20, 2022

ಮಂಗಳೂರಿನಲ್ಲಿ ಇಂದು ಮತ್ತು ನಾಳೆ ಮೂಡುಬಿದ್ರೆ, ಸುರತ್ಕಲ್ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್‌ಸ್ಟ್ರೀಟ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ಇಂದು ಬೆಳಿಗ್ಗೆ 10 ರಿಂದ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್‍ಸ್ಟ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಕಾರ್ಪೊರೇಶನ್ ಬ್ಯಾಂಕ್, ಗೋಪಾಲ ಕೃಷ್ಣ ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಬಿಜೈ:
ಬಿಜೈ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬಿಜೈ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ್ದರಿಂದ ಇಂದು ಬೆಳಿಗ್ಗೆ 10 ರಿಂದ 2ರವರೆಗೆ ನೋಡುಲೇನ್, ಬಟ್ಟಗುಡ್ಡ, ರಾಮಕೃಷ್ಣ ಭಜನಾ ಮಂದಿರ, ಬಿಜೈ ಮ್ಯೂಸಿಯಂ, ಬಿಜೈ 5ನೇ ಕ್ರಾಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಮೂಡಬಿದ್ರೆ:
110/11 ಕೆ.ವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 110/11ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿದೆ.

ಆ ನಿಟ್ಟಿನಲ್ಲಿ ಇಂದು ಬೆಳಿಗ್ಗೆ 10 ರಿಂದ 5ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರ್ ಗದ್ದೆ, ಪೆಲಕುಂಜ,

ಮೂಡಾಯಿಕಾಡು, ಬೆಳುವಾಯಿ ಚರ್ಚ್, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವಣ ಕಜೆ, ಆನೆಗುಡ್ಡ, ಜೋಗೊಟ್ಟು, ವಾಲ್ವಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಮರಕಡ:
ಎಸ್.ಆರ್.ಎಸ್ ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮರಕಡ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.

ಇಂದು ಬೆಳಿಗ್ಗೆ 10 ರಿಂದ 4ರವರೆಗೆ ಕೆಂಜಾರು, ಕರಂಬಾರು, ಅಂತೋನಿಕಟ್ಟೆ, ಪೆÇರ್ಕೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗುತ್ತದೆ.

ತಡಂಬೈಲ್, ಕಾನ, ಸುರತ್ಕಲ್:
11 ಕೆ.ವಿ ತಡಂಬೈಲ್, ಕಾನ ಮತ್ತು ಸುರತ್ಕಲ್ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ನಾಳೆ ಬೆಳಿಗ್ಗೆ 10 ರಿಂದ 5.30ರವರೆಗೆ ಮುಕ್ಕ, ಸಸಿಹಿತ್ಲು, ಶ್ರೀನಿವಾಸ ನಗರ, ದಾಂಡಿ, ಅಯ್ಯಪ್ಪ ಗುಡಿ, ಮೂಡುಕೊಪ್ಪಳ, ಕಾನ, ಕಟ್ಲ, ಸುರತ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Hot Topics