Friday, July 1, 2022

ಗಮನಿಸಿ: ನಾಳೆ ಮಂಗಳೂರಿನಲ್ಲಿ ಹಲವೆಡೆ ಕರೆಂಟ್ ಇಲ್ಲ…

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಾರ್ಕೆಟ್ ಫೀಡರ್ ಮತ್ತು 11ಕೆ.ವಿ ವಿವೇಕ್ ಮೋಟಾರ್ ಫೀಡರ್‌ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ್ದರಿಂದ ನಾಳೆ ಬೆಳಿಗ್ಗೆ 10 ರಿಂದ 5ರವರೆಗೆ ಲೇಡಿಗೋಷನ್ ಆಸ್ಪತ್ರೆ, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗಾ, ಜೆ.ಎಚ್.ಎಸ್. ರಸ್ತೆ, ಪಿ.ಎಂ. ರಾವ್ ರಸ್ತೆ, ಗೌರಿಮಠ ರೋಡ್, ರಾಘವೇಂದ್ರ ಮಠ ರಸ್ತೆ, ಮೈದಾನ್ 3ನೇ ಕ್ರಾಸ್, ಮೈದಾನ್ 4ನೇ ಕ್ರಾಸ್, ಬೀಬಿ ಅಲಾಬಿ ರಸ್ತೆ, ರಾವ್ ಅಂಡ್ ರಾವ್ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.


ಕದ್ರಿ:
ಕದ್ರಿ ಉಪಕೇಂದ್ರದಿಂದ ಹೊರಡುವ 11ಕೆ.ವಿ ಶಿವಭಾಗ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.

ಆದ ಕಾರಣ ನಾಳೆ ಬೆಳಿಗ್ಗೆ 10 ರಿಂದ 4ರವರೆಗೆ ಶಿವಭಾಗ್ 1ನೇ ಕ್ರಾಸ್, 2ನೇ ಕ್ರಾಸ್, 3ನೇ ಕ್ರಾಸ್, 4ನೇ ಕ್ರಾಸ್, 5ನೇ ಕ್ರಾಸ್ ಮತ್ತು 6ನೇ ಕ್ರಾಸ್ ರಸ್ತೆ ಹಾಗೂ ಆಭರಣ ಜ್ಯುವೆಲ್ಲರಿಯ ಹಿಂದುಗಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಸುಳ್ಯ: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ-ಸ್ತಬ್ಧರಾದ ಜನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ.ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು...