Connect with us

    DAKSHINA KANNADA

    ದ.ಕ ಜಿಲ್ಲೆಯಲ್ಲಿ ನಡೆದ ಧರ್ಮ ಹತ್ಯೆಯಲ್ಲಿ ಕಾಂಗ್ರೆಸ್ ಪಾತ್ರವಿಲ್ಲ: ಮಾಜಿ ಸಚಿವ ರಮಾನಾಥ್ ರೈ

    Published

    on

    ಮಂಗಳೂರು: ದ.ಕ ಜಿಲ್ಲೆಯಲ್ಲಿ ಧರ್ಮದ ಹೆಸರಿನಲ್ಲಿ ಅನೇಕ ಹತ್ಯೆಗಳು ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷದ ಒಬ್ಬನೇ ಒಬ್ಬ ಕಾರ್ಯಕರ್ತನ ಹೆಸರು ಎಫ್ಐಆರ್‌ನಲ್ಲಿಲ್ಲ ಎಂದು ಮಾಜಿ ಸಚಿವ ಬಿ. ರಮಾನಾಥ್ ರೈ ಹೇಳಿದರು.


    ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ದ.ಕ ಜಿಲ್ಲೆಯಲ್ಲಿ ಧರ್ಮದ ಹೆಸರಿನಲ್ಲಿ ಅನೇಕ ಹತ್ಯೆಗಳು ನಡೆದಿದೆ. ಆದರೆ ಮುಸ್ಲಿಂಗಳಾಗಲಿ, ಹಿಂದೂಗಳಾಗಲಿ ಯಾವುದೇ ಒಬ್ಬ ಕಾಂಗ್ರೆಸ್ ಕಾರ್ಯಕರ್ತ ಇದರಲ್ಲಿ ಪಾಲ್ಗೊಂಡ ಬಗ್ಗೆ ಎಫ್‌ಐಆರ್ ದಾಖಲೆಗಳಿಲ್ಲ.

    ಆದರೆ ಯಾವಾಗ ಕೋಮುಗಲಭೆ, ಸಾಮರಸ್ಯ ಹಾಳು ಮಾಡುವ ಕೆಲಸ ನಡೆದರೂ ಕಾಂಗ್ರೆಸ್‌ನವರ ಮೇಲೆ ಆರೋಪ ಮಾಡುತ್ತಾರೆ. ಆದರೆ ಅದಕ್ಕೆ ಯಾವುದೇ ಆಧಾರಗಳನ್ನು ಕೊಡಲು ಅವರಿಂದ ಸಾಧ್ಯವಿಲ್ಲ’ ಎಂದು ಹೇಳಿದರು.

    ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು ಪಿಎಸ್‌ಐ ನೇಮಕಾತಿ ಗಂಭೀರವಾದ ವಿಷಯ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮಾಡಲು ಇರುವ ಪರೀಕ್ಷೆ ಅದು. ಅದರಲ್ಲಿಯೇ ಹೀಗಾಗುತ್ತದೆ ಎಂದರೆ ಮುಂದೆ ನಾವು ಸಮಾಜವನ್ನು ಹೇಗೆ ಕಟ್ಟಬಹುದು ಎಂದು ಯೋಚಿಸಬೇಕು ಎಂದು ವ್ಯಂಗ್ಯವನ್ನಾಡಿದರು.

    ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ , ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಮಾತನಾಡಿ ‘ಇತ್ತೀಚೆಗೆ ಕಮರ್ಶಿಯಲ್ ಗ್ಯಾಸ್‌ನ ದರವನ್ನು ಮತ್ತೆ ಹೆಚ್ಚು ಮಾಡಿದ್ದಾರೆ. ಇದರ ಪರಿಣಾಮ ಜನರ ಮೇಲೇಯೇ ಆಗುತ್ತಿದೆ.

    ದಿನಬಳಕೆಯ ವಸ್ತುಗಳ ಬೆಲೆ ಜಾಸ್ತಿಯಾಗುವುದರ ಜೊತೆಗೆ ಆಹಾರ ಸಾಮಾಗ್ರಿಗಳೆಲ್ಲದರ ದರ ಜಾಸ್ತಿಯಾಗುತ್ತಿದೆ. ಸಂಪೂರ್ಣವಾಗಿ ಸರ್ಕಾರ ಇದನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಆದರೆ ಕೇಂದ್ರಸರ್ಕಾರ ಮುಖ್ಯವಾಗಿ ಎಲ್ಲವನ್ನು ನಿರ್ಲಕ್ಷ್ಯ ಮಾಡ್ತಾ ಜನರ ಮೇಲೆ ಭಾರವನ್ನು ಹೊರೆಸುತ್ತಿದೆ’ ಎಂದು ಹೇಳಿದರು.

    ಇನ್ನು ಸಮಾಜದಲ್ಲಿ ಕೋಮು ಭಾವನೆ ಕೆರಳುತ್ತಿರುವುದರ ಬಗ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ ಅವರು ‘ ಸ್ವಾತಂತ್ರ್ಯ ಭಾರತದಲ್ಲಿ ಇಂತಹ ನಡೆಯನ್ನು ನಾವು ಮೊದಲು ನೋಡುತ್ತಿರುವುದು. ವ್ಯಾಪಾರ ಮಾಡಬಾರದು, ಅದು ಇದು ಅಂತ ಸುಮ್ನೆ ಮಾತನಾಡಿ ದಾರಿ ತಪ್ಪಿಸುತ್ತಿದ್ದಾರೆ. ಜನರನ್ನು ಗೊಂದಲಕ್ಕೆ ದೂಡುವ, ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಮನುಷ್ಯರ ನಡುವೆ ಜಗಳ ಹತ್ತಿಸಿ ಅದರ ಪ್ರಯೋಜನ ಪಡೆದುಕೊಳ್ಳಬಹುದೆಂಬ ಯೋಚನೆಯಲ್ಲಿ ಅವರಿದ್ದಾರೆ.

    ಅಷ್ಟೇ ಅಲ್ಲದೆ ಕೆಲವು ಮುಖಂಡರು ವೇದಿಕೆಯ ಮೇಲೆ ನಿಂತು ಪ್ರಚೋದನಕಾರಿ ಭಾಷಣಗಳನ್ನು ಗಲಾಟೆ ಆಗಬೇಕು ಅನ್ನುವ ಉದ್ದೇಶದಲ್ಲಿಯೇ ಮಾಡುತ್ತಾರೆ. ಕೆಟ್ಟ ಪದಗಳನ್ನು ಕೂಡಾ ಬಳಸುತ್ತಾರೆ. ಈ ರೀತಿಯಾಗಿ ಕಾಂಗ್ರೆಸ್‌ನವರು ಪ್ರಚೋದನಕಾರಿ ಭಾಷಣಗಳನ್ನು ಮಾಡುವುದನ್ನು ಅವರು ಒಮ್ಮೆ ತೋರಿಸಲಿ’ ಎಂದು ವಾಗ್ದಾಳಿ ನಡೆಸಿದರು.

    ಸಾಮಾಜಿಕ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು ಎನ್ನುವುದನ್ನು ನಾವು ನೋಡುತ್ತೇವೆ. ಸಾಮರಸ್ಯ ಸಾರುವ ಅನೇಕ ಕೆಲಸಗಳನ್ನು ನಾವು ಮಾಡಿದ್ದೇವೆ. ಅವರು ಏನು ಮಾಡಿದ್ದಾರೆ. ಅವರು ಮೀಟಿಂಗ್ ಮಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವುದನ್ನೇ ಮಾತಾಡುತ್ತಾರೆ.

    ಶಾಂತಿ ಕದಡುವವರಿಗೆ ಜನರೇ ಶೀಘ್ರದಲ್ಲಿ ಪಾಠ ಕಲಿಸುತ್ತಾರೆ. ಮುಂದೆ ಜನರು ಬುದ್ಧಿವಂತರಾಗಿ ಆಲೋಚಿಸುತ್ತಾರೆ ಎಂದು ನನಗೆ ಧೈರ್ಯವಿದೆ. ಬಿಜೆಪಿ, ಮತ್ತು ಇತರ ಪಕ್ಷಗಳು ಸಮಾಜದ ಸ್ವಾವನ್ನು ಹಾಳು ಮಾಡುತ್ತಿರುವುದಕ್ಕೆ ಜನರೇ ಸರಿಯಾದ ಉತ್ತರವನ್ನು ನೀಡಬೇಕು’ ಎಂದು ಹೇಳಿದರು.

    BIG BOSS

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಂಚು ರೂಪಿಸುತ್ತಿದ್ದಾಗಲೇ ಅರೆಸ್ಟ್‌

    Published

    on

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.

    ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್‌ನನ್ನು ಬಂಧಿಸಲು ಮುಂದಾಗಿದೆ.

    ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್‌ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

    ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .

    Continue Reading

    BIG BOSS

    ಕೊಣಾಜೆ: 3 ವರ್ಷದ ಬಾಲೆಗೆ ಕಿ*ರುಕುಳ ನೀಡಿದ 70ರ ಅಜ್ಜ ಅರೆಸ್ಟ್

    Published

    on

    ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ,‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.

    ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ

    Published

    on

    ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.

    ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.

    ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending