Wednesday, December 1, 2021

ಮುರಿದುಬಿದ್ದ ಅಮಿತ್​ ಷಾ-ರೈತ ಮುಖಂಡರ ನಡುವಿನ ಸಂಧಾನ ಸಭೆ: ಪ್ರತಿಭಟನೆ ಮುಂದುವರೆಸಲು ನಿರ್ಧಾರ..! 

ಮುರಿದುಬಿದ್ದ ಅಮಿತ್​ ಷಾ-ರೈತ ಮುಖಂಡರ ನಡುವಿನ ಸಂಧಾನ ಸಭೆ: ಪ್ರತಿಭಟನೆ ಮುಂದುವರೆಸಲು ನಿರ್ಧಾರ..! 

ನವದೆಹಲಿ: ಭಾರತ್ ಬಂದ್ ಬೆನ್ನಲ್ಲೇ ಮಂಗಳವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ರೈತ ಮುಖಂಡರ ನಡುವೆ ನಡೆದ ಸಭೆ ವಿಫಲವಾಗಿದೆ.ಷಾ ಮನವಿ ಹಿನ್ನೆಲೆಯಲ್ಲಿ 13ಕ್ಕೂ ಹೆಚ್ಚು ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸರ್ಕಾರ ಮತ್ತು ರೈತರು ಪಟ್ಟು ಸಡಿಲಿಸದೆ ತಮ್ಮ ನಿಲುವುಗಳಿಗೆ ಭದ್ರವಾಗಿ ಅಂಟಿಕೊಂಡಿರುವುದರಿಂದ ಮಾತುಕತೆ ಫಲಪ್ರದವಾಗಿಲ್ಲ.

ನೂತನ ಕೃಷಿ ಕಾಯ್ದೆಗಳಲ್ಲಿ ಕೆಲವು ತಿದ್ದುಪಡಿಗಳನ್ನು ಮಾಡಲು ಸರ್ಕಾರ ತಯಾರಿದೆ ಎಂದ ಅಮಿತ್​ ಷಾ ಮಾತನ್ನು ನಿರಾಕರಿಸಿದ ರೈತರು ಕಾಯ್ದೆಗಳನ್ನು ಸಂಪೂರ್ಣ ರದ್ದು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಅಲ್ಲದೆ, ಇಂದು ಕೇಂದ್ರ ಕೃಷಿ ಸಚಿವ ನರೇಶ್​ ಥೋಮರ್​ರೊಂದಿಗೆ ನಡೆಯಬೇಕಿದ್ದ ಆರನೇ ಸುತ್ತಿನ ಮಹತ್ವದ ಸಭೆಯು ಕೂಡ ರದ್ದಾಗಿದೆ.

ನಿನ್ನೆಯಷ್ಟೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆಯನ್ನು ರೈತರ ಮುಂದೆ ಮಂಡಿಸಿದ್ದು, ತಾವು ತಿದ್ದುಪಡಿ ಮಾಡಲಿರುವ ಲಿಖಿತ ರೂಪದ ಅಂಶಗಳನ್ನೊಳಗೊಂಡ ಪ್ರಸ್ತಾವನೆಯನ್ನು ಇಂದು ರೈತರಿಗೆ ಕಳುಹಿಸಿಕೊಡಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ನಾಳೆ ಸರ್ಕಾರ ಮತ್ತು ರೈತರ ನಡುವೆ ಯಾವುದೇ ಸಭೆಗಳು ನಡೆಯುವುದಿಲ್ಲ. ನಾಳೆ ಪ್ರಸ್ತಾವನೆಯನ್ನು ನೀಡುವುದಾಗಿ ಕೃಷಿ ಸಚಿವರು ಹೇಳಿದ್ದಾರೆ.

ಪ್ರಸ್ತಾವನೆ ಕುರಿತು ಚರ್ಚಿಸಲು ರೈತರು ಸಭೆ ಸೇರಲಿದ್ದೇವೆ ಎಂದು ಅಖಿಲ ಭಾರತ ಕಿಸಾನ್​ ಸಭಾದ ಪ್ರಧಾನ ಕಾರ್ಯದರ್ಶಿ ಹನ್ನಾನ್​ ಮೊಲ್ಲಾ ಮಂಗಳವಾರ ರಾತ್ರಿ ನಡೆದ ಸಭೆಯ ಬಳಿಕ ಮಾಧ್ಯಮಗಳಿಗೆ ತಿಳಿಸಿದರು

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...