Connect with us

LATEST NEWS

MRPL ನಂತರ ತುಳುನಾಡಿನವರಿಗೆ ದ್ರೋಹ ಬಗೆಯುತ್ತಿರುವ ಮಂಗಳೂರು ವಿಮಾನ ನಿಲ್ದಾಣ: ಮುನೀರ್‌ ಕಾಟಿಪಳ್ಳ ಆರೋಪ

Published

on

ಮಂಗಳೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳೀಯರನ್ನು ಹಲವು ನೆಪ ಮುಂದಿಟ್ಟು ಕೆಲಸದಿಂದ ಬಿಡಲಾಗುತ್ತಿದೆ.

ಜೊತೆಗೆ ಹೊರ ರಾಜ್ಯದವರನ್ನು ನೇಮಿಸಲಾಗುತ್ತಿದೆ. ವಿಮಾನ ನಿಲ್ದಾಣದ ಅಗ್ನಿಶಾಮಕ ದಳದಲ್ಲೂ ಹೊರ ರಾಜ್ಯದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಆರೋಪಿಸಿದ್ದಾರೆ.


ಕೇಂದ್ರ ಸರ್ಕಾರವು ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಮಾರಾಟಗೊಂಡಾಗ ನಾವು ವ್ಯಕ್ತ ಪಡಿಸಿದ ಆತಂಕಗಳು ನಿಜವಾಗತೊಡಗಿದೆ.

ಈಗಾಗಲೇ ವಿಮಾನ ನಿಲ್ದಾಣದ ಗುತ್ತಿಗೆ ಕಂಪೆನಿಗಳ ಅಡಿ ದುಡಿಯುತ್ತಿದ್ದ ಸ್ಥಳೀಯ ಕಾರ್ಮಿಕರನ್ನು ಹಲವು ನೆಪಗಳನ್ನು ಮುಂದಿಟ್ಟು ಕೈ ಬಿಡಲಾಗುತ್ತಿದೆ. ಹೊರ ರಾಜ್ಯದ ಗುತ್ತಿಗೆ ಕಾರ್ಮಿಕರ ಸೇರ್ಪಡೆಗೆ ಆದ್ಯತೆ ನೀಡಲಾಗುತ್ತಿದೆ.

ಈ ನಡುವೆ ಮಂಗಳೂರು ವಿಮಾನ ನಿಲ್ದಾಣದ ಅಗ್ನಿಶಾಮಕ ದಳಕ್ಕೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿಯನ್ನು ಗುತ್ತಿಗೆ ನೀಡಲು ಅವಕಾಶ ಇಲ್ಲದಿರುವುದರಿಂದ ಅದಾನಿ ಕಂಪೆನಿ ನೇರ ನೇಮಕಾತಿ ಮಾಡಬೇಕಿದೆ.


ಮಂಗಳೂರು ವಿಮಾನ ನಿಲ್ದಾಣ ಅಗ್ನಿಶಾಮಕ ದಳದ ಸಿಬ್ಬಂದಿ ನೇಮಕಾತಿಯ ಕುರಿತು ಕೆಲವು ಮಾಹಿತಿಗಳು ಹೊರ ಬಂದಿದ್ದು ಸ್ಥಳೀಯರ ಮಟ್ಟಿಗೆ ಆಘಾತಕಾರಿಯಾಗಿದೆ.

80 ಸಿಬ್ಬಂದಿಗಳ ನೇಮಕಾತಿಯ ಅಗತ್ಯ ಇದ್ದರೂ ಸದ್ಯ 20 ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

ಇಲ್ಲಿ ಆಘಾತಕಾರಿ ಸಂಗತಿಯೆಂದರೆ SSLC ವಿದ್ಯಾಭ್ಯಾಸ ಸಾಕಾಗುವ ಅಗ್ನಿ ಶಾಮಕ ದಳದ ಸಿಬ್ಬಂದಿಯಂತಹ ಸಾಮಾನ್ಯ ಹುದ್ದೆಗೂ ಆದಾನಿ ಕಂಪೆನಿ ಸ್ಥಳೀಯರಿಗೆ ಆದ್ಯತೆ, ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.


ಈಗ ಇರುವ ಸುದ್ದಿಯ ಪ್ರಕಾರ ಅದಾನಿ ಕಂಪೆನಿಯು ಸ್ಥಳೀಯರಿಗೆ ಆದ್ಯತೆ ನೀಡಿ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಸುತ್ತಿಲ್ಲ.

ಬದಲಿಗೆ ತನಗೆ “ಅನುಭವಸ್ಥರು” ಬೇಕು ಎಂದು ಹೊರ ರಾಜ್ಯಗಳಲ್ಲಿ‌ ಸಿಬ್ಬಂದಿಗಳ ಹುಡುಕಾಟ ನಡೆಸುತ್ತಿದೆ.

ವಿಮಾನ ನಿಲ್ದಾಣಕ್ಕೆ ಜಮೀನು ನೀಡಿದವರು, ತುಳುನಾಡಿನವರು ಬಿಡಿ ಇಡೀ ಕರುನಾಡಿನವರೂ ಅದಾನಿ ಕಂಪೆನಿಯವರು “ಹುಡುಕಾಟ” ನಡೆಸುತ್ತಿರುವ ಅನುಭವಸ್ಥರ ಪಟ್ಟಿಯಲ್ಲಿ ಇಲ್ಲ ಎಂಬುದು ವಿಮಾನ ನಿಲ್ದಾಣದ ಒಳಗಡೆಯಿಂದ‌ ನುಸುಳಿ ಬರುತ್ತಿರುವ ಸುದ್ದಿ.

ಅಗ್ನಿಶಾಮಕ ದಳಕ್ಕೆ ಸಾಮಾನ್ಯವಾಗಿ ನೇಮಕಾತಿ ನಡೆಯುವುದು ಎಸ್‌ಎಸ್‌ಎಲ್‌ಸಿ ಸರ್ಟಿಫಿಕೇಟ್ ಹಾಗೂ ದೈಹಿಕ ಫಿಟ್ನೆಸ್ ಆಧಾರದಲ್ಲಿ.

ನೇಮಕಾತಿಯ ನಂತರ ತರಬೇತಿ ನೀಡಿ ಅವರನ್ನು ವೃತ್ತಿಗೆ ಸಿದ್ಧಗೊಳಿಸಲಾಗುತ್ತದೆ‌. ಆದರೆ ಅದಾನಿ ಕಂಪೆನಿ ಮಾತ್ರ ತುಳುನಾಡಿನವರನ್ನು ಮಾತ್ರ ಅಲ್ಲ ಇಡೀ ಕರ್ನಾಟಕದವರನ್ನೇ ಹೊರಗಿಡಲು “ಅನುಭವೀ ಸಿಬ್ಬಂದಿ” ಎಂಬ ಸೂತ್ರವನ್ನು ಮುಂದಿಟ್ಟು ತುಳುವರನ್ನು ವಂಚಿಸಲು ಹೊರಟಿದೆ.
ಇದು ಅಪಾಯಕಾರಿ ಬೆಳವಣಿಗೆ.

ದೇಶದ ಬೇರೆ ಬೇರೆ ಮಹಾ ನಗರಗಳಲ್ಲಿ ಉದ್ಯೋಗ ಕಳೆದು ಕೊಂಡು ತುಳುವರು ತಮ್ಮ ತವರು ಜಿಲ್ಲೆಗೆ ವಾಪಾಸಾಗುತ್ತಿರುವ,

ನಿರುದ್ಯೋಗ ಭೀಕರ ಸ್ವರೂಪ ತಾಳುತ್ತಿರುವ ಸಂದರ್ಭ ಹೊಸ ಉದ್ಯೋಗವಾಕಾಶಗಳು ತುಳುನಾಡಿನಲ್ಲಿ ಸೃಷ್ಟಿಯಾಗಬೇಕಿತ್ತು.

ದುರಂತ ಏನೆಂದರೆ, ಹೊಸ ಉದ್ಯೋಗಗಳ ಸೃಷ್ಟಿಗೆ ಸರಕಾರ ಇಲ್ಲಿ ಯಾವ ಯೋಜನೆಯನ್ನೂ ಹೊಂದಿಲ್ಲ. ಬದಲಿಗೆ ಇರುವ ಉದ್ಯೋಗಗಳನ್ನೂ ಸ್ಥಳೀಯರಿಗೆ ವಂಚಿಸಿ ಹೊರ ರಾಜ್ಯದವರ ಪಾಲಾಗುವಂತೆ ಮಾಡಲಾಗುತ್ತಿದೆ.

ಅದಾನಿ ಕಂಪೆನಿ ವಿಮಾನ ನಿಲ್ದಾಣದಲ್ಲಿ ಮಾಡುತ್ತಿರುವುದು ಅದನ್ನೆ. ಜಿಲ್ಲಾಡಳಿತ ಕಣ್ಣು ಮುಚ್ಚಿದೆ ಎಂದು ಆರೋಪಿಸಿದ್ದಾರೆ.
ವಿಮಾನ‌ ನಿಲ್ದಾಣವನ್ನು ಮಾರಾಟ ಮಾಡಿಲ್ಲ. ಕೇವಲ ಮೈಂಟನೆನ್ಸ್ ಮಾತ್ರ ಅದಾನಿ ಕಂಪೆನಿಗೆ ನೀಡಲಾಗಿದೆ ಎಂದು ಜನರನ್ನು ದಿಕ್ಕು ತಪ್ಪಿಸಲು ನೋಡಿದ ಬಿಜೆಪಿ ಬೆಂಬಲಿಗರು ಈಗ ಏನಂತಾರೊ ತಿಳಿಯದು. ಆದರೆ ತುಳುನಾಡಿನ ಜನ ಈಗ ಸುಮ್ಮನಿರಬಾರದು.

ಧ್ವನಿ ಎತ್ತರಿಸಬೇಕು.‌ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೃಷ್ಟಿಯಾಗುವ ಪ್ರತಿಯೊಂದು ಉದ್ಯೋಗಗಳೂ ತುಳುವ ಮಣ್ಣಿನ ಮಕ್ಕಳಿಗೇ ಮೀಸಲಾಗಬೇಕು.

ಎಮ್ ಆರ್ ಪಿ ಎಲ್ ನ 233 ಉದ್ಯೋಗದಲ್ಲಿ ಆದ ಮೋಸ ಇಲ್ಲಿ ಮರುಕಳಿಸಲು ಬಿಡಬಾರದು‌.

ಈಗ ನಾವು ಕೈ ಚೆಲ್ಲಿದರೆ ಮುಂದಕ್ಕೆ ವಿಮಾನ ನಿಲ್ದಾಣ ಮಾತ್ರ ಅಲ್ಲ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕೈಗಾರಿಕೆ, ಉದ್ಯಮಗಳ ಉದ್ಯೋಗಗಳೂ ನಮ್ಮ ಕೈತಪ್ಪಲಿದೆ.

ಅದಾನಿ ಕಂಪೆನಿ ವಿಮಾನ ನಿಲ್ದಾಣ ಅಗ್ನಿಶಾಮಕ ದಳದ ನೇಮಕಾತಿ ಪ್ರಕ್ರಿಯೆಯನ್ನು ಕೈ ಬಿಡಬೇಕು. ಪೂರ್ತಿ ನೇಮಕಾತಿ ಸ್ಥಳೀಯರಿಗೇ ಮೀಸಲಿಡಬೇಕು‌.

ಹಾಗಂತ ಇಡೀ ಕರಾವಳಿ ಒಕ್ಕೊರಲಿನಿಂದ ಮಾತಾಡಬೇಕು. ಶಾಸಕ, ಸಂಸದರನ್ನು ತಡೆದು ಪ್ರಶ್ನಿಸಬೇಕು ಎಂದರು.
ಹಾಗೆಯೆ ನಿಮ್ಮ ಮಾಹಿತಿಗೆ. ಇನ್ನು ಮೂರು ವರ್ಷ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಅದಾನಿ ಕಂಪೆನಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಜೊತೆಯಾಗಿ ಕಾರ್ಯ ನಿರ್ವಹಿಸಲಿದೆ.

ಅಷ್ಟರಲ್ಲಿ ಅದಾನಿ ಕಂಪೆನಿಗೆ ವಿಮಾನ ನಿಲ್ದಾಣ ನಿರ್ವಹಣೆ ತರಬೇತಿಯನ್ನು ಪೂರ್ತಿಗೊಳಿಸಿ ವಿಮಾನ ನಿಲ್ದಾಣ ಪ್ರಾಧಿಕಾರದ ಸಿಬ್ಬಂದಿ ಅಲ್ಲಿಂದ ಹೊರ ನಡೆಯಲಿದ್ದಾರೆ‌.

ಅದರ ಭಾಗವಾಗಿ ಅದಾನಿ ಕಂಪೆನಿ ಸುಮಾರು ನೂರರ ಹತ್ತಿರ ಸಿಬ್ಬಂದಿಗಳನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಕರೆ ತಂದಿದೆ‌.

ಈಗ ಇರುವ ಮಾಹಿತಿ ಪ್ರಕಾರ ಇದರಲ್ಲಿ ಒಬ್ಬರೂ ತುಳುನಾಡಿನವರಿಲ್ಲ.

ಕರುನಾಡಿನವರೂ ಇರುವುದು ಅನುಮಾನ. ಎಲ್ಲ ಉತ್ತರ ಭಾರತ ಮಯ. ನಿಮಗೆ ಅರ್ಥ ಆಗುತ್ತದೆ ಎಂದು ಭಾವಿಸುವೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

DAKSHINA KANNADA

ಹಿಂಜಾವೇ ಮುಖಂಡ ಅಕ್ಷಯ್ ರಜಪೂಜ್‌ಗೆ ಗಡಿಪಾರು.!.

Published

on

ಪುತ್ತೂರು:  ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್‌ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್‌ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

akshaya rajaputh

ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

ಅಕ್ಷಯ್‌ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.

Continue Reading

LATEST NEWS

ಪ್ರಿಯಕರನ ಮೇಲೆ ಆ್ಯ*ಸಿಡ್ ಎರಚಿದ ಯುವತಿ!

Published

on

ಮಂಗಳೂರು/ ಉತ್ತರ ಪ್ರದೇಶ : ಪ್ರೀತಿಸಿ ಮೋಸ ಮಾಡಿದರೆ ಯುವಕರು ಪ್ರೇಯಸಿಯನ್ನು ಹ*ತ್ಯೆ ಮಾಡುವುದನ್ನು, ಆ್ಯಸಿ*ಡ್ ಎರಚುವ ಸುದ್ದಿಗಳನ್ನು ಕೇಳುತ್ತೇವೆ. ಆದರೆ, ಉತ್ತರ ಪ್ರದೇಶದಲ್ಲಿ ವಿಭಿನ್ನವಾದ ಘಟನೆ ನಡೆದಿದೆ. ಇಲ್ಲಿ ಪ್ರೇಯಸಿಯೊಬ್ಬಳು ತನ್ನ ಪ್ರಿಯಕರನ ಮೇಲೆ ಆ್ಯ*ಸಿಡ್ ದಾಳಿ ನಡೆಸಿದ್ದಾರೆ. ಮಂಗಳವಾರ(ಏ.23) ಬಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.


ಕೃತ್ಯ ಎಸಗಿದ್ದು ಯಾಕೆ?

ಯುವತಿ ಈ ರೀತಿ ದುಷ್ಕೃತ್ಯ ಮೆರೆಯಲು ಕಾರಣ ‘ಪ್ರೀತಿ’. ಆಕೆಯ ಪ್ರಿಯತಮ ಪ್ರೀತಿಸಿ ಮೋಸ ಮಾಡಿ ಮತ್ತೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದ ಎನ್ನಲಾಗಿದೆ. ಹೀಗಾಗಿ ಯುವತಿ ಆತನ ಮುಖದ ಮೇಲೆ ಆ್ಯ*ಸಿಡ್ ಎರಚಿದ್ದಾಳೆ. ಮದುವೆಯ ಮೆರವಣಿಗೆಯ ವೇಳೆ ಯುವತಿ ವೇಷ ಮರೆಸಿಕೊಂಡು ಬಂದು ವರನ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ ಎನ್ನಲಾಗಿದೆ.

ಆ್ಯ*ಸಿಡ್ ಬಿದ್ದ ಪರಿಣಾಮ ಗಾಯಗೊಂಡ ಯುವಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನಿಗೆ ಆ್ಯ*ಸಿಡ್ ಎರಚಿದ ಯುವತಿಯನ್ನು ಹಿಡಿದ ಮಹಿಳೆಯರು ಸರಿಯಾಗಿ ಥಳಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನ ತಾಯಿಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 326 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಬಲಿಯಾದ ಪೊಲೀಸ್ ಅಧಿಕಾರಿ ಮುನ್ನಾ ಲಾಲ್ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!
ಯುವಕ – ಯುವತಿ ಪರಸ್ಪರ ಪ್ರೀತಿಸಿದ್ದರು. ದೈಹಿಕ ಸಂಪರ್ಕ ಹೊಂದಿದ್ದರು. ಆದರೆ, ಇವರ ಸಂಬಂಧವನ್ನು ಎರಡೂ ಕುಟುಂಬ ವಿರೋಧಿಸಿತ್ತು ಎನ್ನಲಾಗಿದೆ. ಏಪ್ರಿಲ್ 22 ರಂದು ಯುವಕನ ಮನೆಯವರು ಬೇರೆ ಯುವತಿಯೊಂದಿಗೆ ಮದುವೆ ಮಾಡಲು ಸಿದ್ಧತೆ ಮಾಡಿದ್ದರು. ಇದರಿಂದ ಕೋಪಗೊಂಡ ಯುವತಿ ಮದುವೆ ಮೆರವಣಿಗೆಯಲ್ಲಿ ಈ ಕೃತ್ಯ ಎಸಗಿದ್ದಾಳೆ ಎಂದು ವರದಿಯಾಗಿದೆ.

 

Continue Reading

LATEST NEWS

ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

Published

on

ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ ಯುವಕನನ್ನು ಬರ್ಬರವಾಗಿ ಕೊ*ಲೆಗೈದಿರುವ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ.


ಖಾದರ್ ಭಾಷಾ (28) ಕೊ*ಲೆಯಾದ ವ್ಯಕ್ತಿ. ಮಾರುತಿ ಹ*ತ್ಯೆಗೈದ ಪೂಜಾರಿ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳು. ಆದರೆ, ಖಾದರ್ ಭಾಷಾ ಮಾರುತಿ ಪತ್ನಿ‌ ಮೇಲೆ ಕಣ್ಣು ಹಾಕಿದ್ದಾನೆ. ಹೀಗಾಗಿ ಮಾರುತಿ, ಖಾದರ್‌ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಭೀ*ಭತ್ಸವಾಗಿ ಹ*ತ್ಯೆ ಮಾಡಿದ್ದಾನೆ.

ಕೊ*ಲೆಗೈದ ಮಾರುತಿ ಖುದ್ದಾಗಿ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಕೊ*ಲೆಯಲ್ಲಿ ಇತರರೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ : ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

Continue Reading

LATEST NEWS

Trending