ಬೆಂಗಳೂರು: ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯ ಸರಕಾರದ ಮುಂದಿಲ್ಲ. ಯಾರೂ ಈ ಬಗ್ಗೆ ಯಾವುದೇ ಗಾಬರಿಪಡುವುದು ಬೇಡ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ರೂಪಾಂತರಿತ ಹೊಸ ತಳಿ ಒಮಿಕ್ರಾನ್ ವಿಚಾರವನ್ನು ಮುಂದಿಟ್ಟು ಲಾಕ್ ಡೌನ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗೊಂದಲಮಯ, ತಪ್ಪು ಸುದ್ದಿ ಹರಡುತ್ತಿರುವುದು ಕಂಡುಬರುತ್ತಿದೆ.
ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೋವಿಡ್ 1 ಮತ್ತು 2 ಅಲೆಯಿಂದ ಈಗಾಗಲೇ ಜನಸಾಮಾನ್ಯರು ಬಹಳ ಕಷ್ಟನಷ್ಟ ಅನುಭವಿಸಿದ್ದಾರೆ.
ಹಲವು ಜೀವಹಾನಿ ಉಂಟಾಗಿದೆ. ಆದ್ದರಿಂದ ಜನರಲ್ಲಿ ಮತ್ತೆ ಗೊಂದಲ ಮೂಡಿಸಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ.