Connect with us

ಉಡುಪಿ ಜಿಲ್ಲೆಯಲ್ಲಿ ಇಲ್ಲ ಲಾಕ್ ಡೌನ್ : 14 ದಿನ ಗಡಿಗಳು ಸಂಪೂರ್ಣ ಬಂದ್..!

Published

on

ಉಡುಪಿ ಜಿಲ್ಲೆಯಲ್ಲಿ ಇಲ್ಲ ಲಾಕ್ ಡೌನ್ : 14 ದಿನ ಗಡಿಗಳು ಸಂಪೂರ್ಣ ಬಂದ್..!

ಉಡುಪಿ : ಉಡುಪಿಯಲ್ಲೂ ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ತುರ್ತು ಸಭೆ ನಡೆಸಿದರು.

ಮಾನ್ಯ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್, ಕಾರ್ಕಳ ಶಾಸಕರಾದ ಸುನೀಲ್ ಕುಮಾರ್, ಬೈಂದೂರು ಶಾಸಕರಾದ ಸುಕುಮಾರ್ ಶೆಟ್ಟಿ, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕುಂದಾಪುರ ಶಾಸಕರಾದ ಶ್ರೀನಿವಾಸ್ ಶೆಟ್ಟಿ ಅಧಿಕಾರಿ ವರ್ಗದವರು ಪಾಲ್ಗೊಂಡಿದ್ದರು. ಜಿಲ್ಲೆಯಲ್ಲಿ ಕೋವಿಡ್ 19 ತಡೆಗಟ್ಟುವಿಕೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಾಮರ್ಶೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರೀತಿ ಗೆಲ್ಹೋತ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಸಹಾಯಕ ಆಯುಕ್ತರಾದ ಕೆ. ರಾಜು, ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಸುಧೀರ್ ಚಂದ್ರ ಸೂಡ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿಗಳಾದ ಪ್ರಶಾಂತ್ ಭಟ್, ಜಿಲ್ಲಾ ಸರ್ಜನ್ ಮಧುಸೂದನ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಜಿ ಜಗದೀಶ್ ಅಂತರ್ ಜಿಲ್ಲೆಗೆ ಹೋಗುವವರಿಗೆ, ಬರುವವರಿಗೆ ನಾಳೆ ರಾತ್ರಿ ಎಂಟು ಗಂಟೆಯವರೆಗೆ ಅವಕಾಶವಿದೆ.

ಬಳಿಕ ಮುಂದಿನ‌ಹದಿನಾಲ್ಕು ದಿನ ಜಿಲ್ಲೆಯ ಗಡಿಭಾಗ ಬಂದ್ ಮಾಡೋದಕ್ಕೆ ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

ಇನ್ನು ರಾಜ್ಯ ಸರ್ಕಾರದ ಆದೇಶದಂತೆ ಭಾನುವಾರ ಸಂಪೂರ್ಣ ಲಾಕ್ಡೌನ್ ಇರಲಿದೆ ಎಂದು ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಕೋವಿಡ್ ಸ್ಥಿತಿಗತಿಗಳ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿದ್ದೇವೆ. ಅಂತರ್ ರಾಜ್ಯ, ಅಂತರ ಜಿಲ್ಲೆಯಿಂದ ಬಂದವರಲ್ಲಿ ಹೆಚ್ಚು ಸೋಂಕಿತ ಪ್ರಕರಣ ಕಂಡು ಬಂದಿದೆ.

ನಾವು ಕೊರೊನಾ ಎದುರಿಸಲು ತಯಾರಿಲ್ಲ ಎನ್ನುವಾಗ ಲಾಕ್ ಡೌನ್ ಮಾಡಬೇಕು. ಆದ್ರೆ ನಮ್ಮ ಜಿಲ್ಲೆಯಲ್ಲಿ ಅಂತ ಪರಿಸ್ಥಿತಿ ಇಲ್ಲ. ಜಿಲ್ಲೆಯಲ್ಲಿ ಕೊರೊನಾ ಎದುರಿಸಲು ಎಲ್ಲ ವ್ಯವಸ್ಥೆ ಮಾಡಿಕೊಂಡಿದ್ದೇವೆ.

ರೋಗ ಲಕ್ಷಣ ಇರುವವರಿಗೆ 470 ಬೆಡ್ ಮೀಸಲು ಇಟ್ಟಿದ್ದೇವೆ. ಒಟ್ಟು 1100 ಬೆಡ್ ಗಳು ನಮ್ಮಲ್ಲಿ ಇದೆ, ಅದರಲ್ಲಿ 700 ಬೆಡ್ ಖಾಲಿ ಇದೆ.

ಖಾಸಗಿ ಆಸ್ಪತ್ರೆಯಲ್ಲೂ 1500 ಬೆಡ್ ಮೀಸಲು ಇಟ್ಟಿದ್ದೇವೆ. ಹೀಗಾಗಿ ಜಿಲ್ಲೆಯಲ್ಲಿ ಯಾವುದೇ ದೊಡ್ಡ ಸಮಸ್ಯೆ ಆಗುವುದಿಲ್ಲ ಎಂದಿದ್ದಾರೆ.

ಇನ್ನು, ಜಿಲ್ಲೆಯಲ್ಲಿ ಲಾಕ್ ಡೌನ್ ಇಲ್ಲ, ಜಿಲ್ಲೆಯ ಗಡಿಯನ್ನು ಸೀಲ್ ಡೌನ್ ಮಾತ್ರ ಮಾಡಲಾಗಿದೆ. ಲಾಕ್ ಡೌನ್ ಬೇಡ ಎನ್ನುವ ಅಭಿಪ್ರಾಯ ಜಿಲ್ಲೆಯ ಜನ ಪ್ರತಿನಿಧಿಗಳದ್ದೂ ಆಗಿತ್ತು.

ನಾಳೆ ರಾತ್ರಿ 8 ಗಂಟೆಯಿಂದ ಉಡುಪಿ ಗಡಿ ಸೀಲ್ ಡೌನ್ ಮಾಡುತ್ತೇವೆ. ಹೀಗಾಗಿ ಜಿಲ್ಲೆಗೆ ಬರುವವರು ಇದ್ರೆ ನಾಳೆ‌ ರಾತ್ರಿ 8 ಗಂಟೆ ಮುಂಚೆ ಬರಬೇಕು.

ತುರ್ತು ವೈದ್ಯಕೀಯ ಅವಶ್ಯಕತೆಗೆ ಗಡಿ ನಿರ್ಬಂಧ ಇಲ್ಲ . ಸಾರ್ವಜನಿಕ ಸಾರಿಗೆ ನಿರ್ಬಂಧ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಯಾವುದೇ ಸಂತೆ ಮಾಡುದಕ್ಕೆ ಅವಕಾಶ ಇಲ್ಲ, ಆದ್ರೆ ಅಂಗಡಿ ಮುಂಗಟ್ಟುಗಳ ವ್ಯವಹಾರಕ್ಕೆ ಅವಕಾಶವಿದೆ.

ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಸಾರ್ವಜನಿಕ ಹಬ್ಬ ಆಚರಣೆಗೆ ಅವಕಾಶ ಇಲ್ಲ, ಮನೆಯಲ್ಲಿ ಹಬ್ಬ ಮಾಡಬಹುದು. ಧಾರ್ಮಿಕ ಕೇಂದ್ರಗಳಲ್ಲಿ 20 ಕ್ಕಿಂತ ಹೆಚ್ಚು ಜ‌ನ ಸೇರುವಂತಿಲ್ಲ,

ವಿಶೇಷ ಪೂಜೆ, ಸಮಾರಂಭ ಕಾರ್ಯಕ್ರಮ ಮಾಡುವಂತಿಲ್ಲ. ಸರಕಾರ ಆದೇಶದಂತೆ ಭಾನುವಾರ ಸಂಪೂರ್ಣ ಲಾಕ್ ಡೌನ್ ಇರುತ್ತದೆ. ಅಗತ್ಯ ವಸ್ತುಗಳ ಖರೀದಿ ವೈದ್ಯಕೀಯ ಸೇವೆಗಳಿಗೆ ಭಾನುವಾರ ಅವಕಾಶ ಇದೆ.

ದಿನ ನಿತ್ಯ ಹೊರ ಜಿಲ್ಲೆಗೆ ಹೋಗುವವರಿಗೆ ಜಿಲ್ಲಾಡಳಿತದಿಂದ ಪಾಸ್ ನೀಡುತ್ತೇವೆ. ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *

DAKSHINA KANNADA

ತಡೆಬೇಲಿಗೆ ಡಿಕ್ಕಿ ಹೊಡೆದು ಅಂಡರ್‌ಪಾಸ್‌ ಗೆ ಉರುಳಿದ ವಾಹನ; ಹಲವರಿಗೆ ಗಾಯ

Published

on

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಅಂಡರ್ ಪಾಸ್ ಬಳಿ ಬೈಕ್ ಗೆ ಬೋಲೇರೋ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೊಲೆರೋ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಹಾಗೂ ಪಿಕಪ್ ಹೆದ್ದಾರಿ ಬದಿಯ ಅಪಘಾತ ತಡೆಗೆ ಹಾಕಿದ್ದ ತಡೆ ಬೇಲಿಗೆ ಡಿಕ್ಕಿ ಹೊಡೆದು ಸುಮಾರು 12 ಅಡಿ ಆಳದ ಅಂಡರ್ ಪಾಸ್ ಕೆಳಗಡೆ ಬಿದ್ದಿದೆ.

ಇದನ್ನೂ ಓದಿ: ಕೊಣಾಜೆ : ಸ್ಕೂಟರ್ – ಟೆಂಪೋ ನಡುವೆ ಅಪ*ಘಾತ; ಸವಾರ ಸಾವು

ಅಪಘಾತದಿಂದ ಬೈಕ್ ಸವಾರ ಸಹಿತ ಬೊಲೆರೋ ಪಿಕಪ್ ನಲ್ಲಿದ್ದ ವಾಹನದ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕ್ರೇನ್ ಮೂಲಕ ಎರಡು ವಾಹನಗಳನ್ನು ತೆರವುಗೊಳಿಸಲಾಯಿತು. ಅಪಘಾತದ ಗಾಯಾಳುಗಳ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು : ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಶಿಲಾನ್ಯಾಸ

Published

on

ಮಂಗಳೂರು : ಸುಮಾರು 50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಲಾನ್ಯಾಸ ನೆರವೇರಿಸಿದ್ದಾರೆ. ಮೇರಿ ಹಿಲ್‌ನಲ್ಲಿ ನಿರ್ಮಾಣವಾಗಲಿರುವ ಈ ಪ್ರಾದೇಶಿಕ ಕೇಂದ್ರ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರಗಳಿಗೆ ಪೂರಕವಾಗಲಿರುವ ವ್ಯವಸ್ಥೆಗಳು ಈ ಕೇಂದ್ರದಲ್ಲಿ ಇರಲಿದೆ. ಇದು ವಿದ್ಯಾರ್ಥಿಗಳಿಂದ ಹಿಡಿದು ಸಂಶೋಧನೆ ನಡೆಸುವ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.

ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಏಷ್ಯಾದಲ್ಲೇ ಅತೀ ದೊಡ್ಡ ಸಂಸ್ಥೆಯಾಗಿದ್ದು, ಮಂಗಳೂರಿನಲ್ಲಿ ನಿರ್ಮಾಣವಾಗುವ ಪ್ರಾದೇಶಿಕ ಕೇಂದ್ರ ದೇಶದಲ್ಲೇ ದೊಡ್ಡ ಕೇಂದ್ರವಾಗಲಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಕೇಂದ್ರ ಸ್ಥಾಪನೆಗೆ 2024-25ರ ಬಜೆಟ್‌ನಲ್ಲಿ ಅನುದಾನ ನೀಡಲಾಗಿದ್ದು, ಈಗ ಚಾಲನೆ ನೀಡಲಾಗುತ್ತಿದೆ. ಈ ಕೇಂದ್ರ ಸ್ಥಾಪನೆ ಬಳಿಕ ಕರಾವಳಿ ಭಾಗದ ಜನರಿಗೆ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರವಾಗಿ ಬೆಂಗಳೂರಿಗೆ ಹೋಗುವುದು ತಪ್ಪಲಿದೆ ಎಂದು ಹೇಳಿದ್ದಾರೆ.

ಬಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಬೇಕು ಎಂಬ ಚಿಂತನೆ ಸರ್ಕಾರಕ್ಕೆ ಇದೆ. ಇದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ

ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್‌, ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಿದ್ದರು.

Continue Reading

FILM

ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ

Published

on

ಮಂಗಳೂರು/ಮುಂಬೈ : ಕೆಲವು ನಟಿಯರು ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸುತ್ತಾರೆ. ಈ ಬಗ್ಗೆ ಸಿನಿಮಾ ಒಪ್ಪಿಕೊಳ್ಳುವ ಮೊದಲೇ ಮಾತುಕತೆ ನಡೆಸಿರುತ್ತಾರೆ. ಇದನ್ನು ಬಾಲಿವುಡ್‌ನ ಈ ಸ್ಟಾರ್ ನಟಿ ಕೂಡ ಅನುಸರಿಸುತ್ತಿದ್ದರು.

ಆದರೆ ಆ ಒಬ್ಬ ನಟ ಬಲವಂತವಾಗಿ ಕಿಸ್ ಮಾಡಿದಕ್ಕೆ ವಾಂತಿ ಮಾಡಿ 100 ಸಲ ಮುಖ ತೊಳೆದಿದ್ದೆ ಎಂದು ಸ್ಟಾರ್ ನಟಿ ಹೇಳಿದ್ದಾರೆ.

ಬಾಲಿವುಡ್ ನಟಿ ರವೀನಾ ಟಂಡನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ರವಿನಾ ಟಂಡನ್ ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸಿದ ನಟಿಯರಲ್ಲಿ ರವೀನಾ ಟಂಡನ್ ಕೂಡ ಒಬ್ಬರು.

ಆದರೆ ಸಿನಿಮಾವೊಂದರ ಶೂಟಿಂಗ್ ವೇಳೆ ಸಹ ನಟರೊಬ್ಬರು ಆಕಸ್ಮಿಕವಾಗಿ ರವೀನಾ ಟಂಡನ್ ತುಟಿಗಳಿಗೆ ಮುತ್ತಿಟ್ಟ ಘಟನೆ ನಡೆದಿತ್ತು. ಆ ನಂತರ ಏನಾಯಿತು ಎಂಬುದನ್ನು ಸ್ವತಃ ರವೀನಾ ಅವರೇ ಹೇಳಿದ್ದಾರೆ.

ಇದನ್ನೂ ಓದಿ: ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್

ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ರವೀನಾ ಮಾತನಾಡಿದ್ದಾರೆ. ರವೀನಾ ಟಂಡನ್ ಅವರೊಂದಿಗೆ ಒಂದು ಘಟನೆ ನಡೆದಿತ್ತಂತೆ. ಅವರ ಸಹ ನಟರೊಬ್ಬರು ತಪ್ಪಾಗಿ ಅವರನ್ನು ಚುಂಬಿಸಿದ್ದರಂತೆ. ಈ ದೃಶ್ಯವು ಸ್ಕ್ರಿಪ್ಟ್ ನ ಭಾಗವೂ ಆಗಿರಲಿಲ್ಲ. ಇದಾದ ನಂತರ ರವೀನಾ ಟಂಡನ್ ತುಂಬಾ ಅನ್‌ಕಂಫರ್ಟ್ ಫೀಲ್ ಮಾಡಿಕೊಂಡರಂತೆ.

ಆ ಬಳಿಕ ವಾಂತಿ ಕೂಡ ಮಾಡಿದರಂತೆ. 100 ಸಲ ತಮ್ಮ ಬಾಯಿ ತೊಳೆದುಕೊಂಡಿದ್ದಾರಂತೆ. ನಂತರ ಆ ನಟ ರವೀನಾ ಟಂಡನ್ ಅವರ ಬಳಿಕ ಕ್ಷಮೆಯಾಚಿಸಿದರಂತೆ. ಸಂದರ್ಶನ ಸಮಯದಲ್ಲಿ ರವೀನಾ ಟಂಡನ್ ಈ ವಿಚಾರ ಹೇಳಿದ್ದಾರೆ. ಸಿನಿಮಾಗಳಲ್ಲಿ ಕಿಸ್ ಮಾಡದಿರುವುದು ನನ್ನ ಆಯ್ಕೆ ಎಂದು ರವೀನಾ ಟಂಡನ್ ಹೇಳಿದ್ದಾರೆ.

 

Continue Reading

LATEST NEWS

Trending

Exit mobile version