Connect with us

  LATEST NEWS

  ದರ್ಶನ್ ಗಾಗಿ ಶಪಥ ಮಾಡಿದ ಅಭಿಮಾನಿ..!! ಅದೇನು ಗೊತ್ತಾ?

  Published

  on

  ಮೈಸೂರು/ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್, ಪವಿತ್ರಾ ಸೇರಿದಂತೆ ಕೊಲೆಯಲ್ಲಿ ಭಾಗಿಯಾದ ಅನೇಕರು ಜೈಲು ಪಾಲಾಗಿದ್ದಾರೆ. ಪತ್ನಿ ವಿಜಯಲಕ್ಷ್ಮೀ ದರ್ಶನ್ ಬಿಡುಗಡೆಗಾಗಿ ವಕೀಲರ ಮೂಲಕ ಕಾನೂನು ಹೋರಾಟ ನಡೆಸುತ್ತಿದ್ದಾರೆ.

  ಶಿಂಧೆ ಬಣದ ಪದಾಧಿಕಾರಿ ಕುಟುಂಬ ಅರೆಸ್ಟ್‌..! 60 ಗಂಟೆಗಳ ಕಾರ್ಯಾಚರಣೆ..! ಇಲ್ಲಿದೆ ಕಾರಣ

  ಈ ಮಧ್ಯೆ ಕೆಲವು ಸ್ಟಾರ್‌ ನಟರೂ ಕೂಡಾ ದರ್ಶನ್ ಪರ ಬ್ಯಾಟ್ ಬೀಸಲು ಹಿಂದೇಟು ಹಾಕುತಿದ್ರೆ, ದರ್ಶನ್ ಅಭಿಮಾನಿಗಳು ಮಾತ್ರ ಇವರ ಬೆನ್ನೆಲುಬಾಗಿ ನಿಂತಿದ್ದಾರೆ. ದರ್ಶನ್‌ ಫ್ಯಾನ್ ಕ್ರೇಜ್ ಮಾತ್ರ ಇನ್ನೂ ಕಮ್ಮಿ ಆಗಿಲ್ಲ. ದರ್ಶನ್ ಅಭಿಮಾನಿಗಳ ಬಳಗ ಅವರ ನೆಚ್ಚಿನ ನಟನ ಬಿಡುಗಡೆಗಾಗಿ ದೇವರ ಮೊರೆ ಹೋಗಿದ್ದಾರೆ. ಇನ್ನೂ ಕೆಲವರು ಮಕ್ಕಳಿಗೆ ದರ್ಶನ್‌ ಖೈದಿ ನಂಬರ್‌ ಇರುವ ಬಟ್ಟೆಯನ್ನು ಧರಿಸಿ ಫೊಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಇನ್ನೂ ಕೆಲವರು ಖೈದಿ ನಂಬರ್ ಅನ್ನು ಹಚ್ಚೆ ಹಾಕಿಸಿಕೊಂಡರೆ, ಕೆಲವರು ವಾಹನಗಳ ಹಿಂದೆ ಬರೆಸಿಕೊಂಡಿದ್ದಾರೆ. ಇದೀಗ ಮೈಸೂರಿನ ದರ್ಶನ್  ಅಭಿಮಾನಿ ಧನುಷ್ ಎಂಬಾತ ದರ್ಶನ್ ಬಿಡುಗಡೆಯಾಗುವವರೆಗೂ ನಾನು ಕಾಲಿಗೆ ಚಪ್ಪಲಿಯನ್ನು ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾನೆ. ದರ್ಶನ್ ರಿಲೀಸ್ ಆದ ಬಳಿಕ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದಾನೆ. ಧನುಷ್ ದರ್ಶನ್ ರವರ ಅಪ್ಪಟ ಅಭಿಮಾನಿ ಅನ್ನುವುದಕ್ಕೆ ಅವರ ಮನೆ ಮೇಲೆ ಡಿ ಬಾಸ್ ಎಂದು ಬರೆದುಕೊಂಡಿರುವುದು ಸಾಕ್ಷಿಯಾಗಿದೆ.

  DAKSHINA KANNADA

  ಬಜಪೆ: ಅದ್ಯಪಾಡಿ ಗ್ರಾಮದ 30ಕ್ಕೂ ಹೆಚ್ಚು ಮನೆಗಳು ಜಲಾವೃತ

  Published

  on

  ಬಜಪೆ ಸಮೀಪದ ಅದ್ಯಪಾಡಿ ಗ್ರಾಮದ ಸುಮಾರು 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, 80 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಲ್ಗುಣಿ ನದಿಗೆ ಮರವೂರಿನಲ್ಲಿ ನಿರ್ಮಸಿದ ಕಿಂಡಿ ಅಣೆಕಟ್ಟು ಈ ನೆರೆಗೆ ಕಾರಣವಾಗಿದೆ ಎಂದು ಜನರು ಆರೋಪಿಸಿದ್ದಾರೆ.

  ಕಳೆದ ಹತ್ತು ವರ್ಷದಿಂದ ಈ ಗ್ರಾಮದ ಜನರು ಮಳೆಗಾಲದಲ್ಲಿ ಸಂಕಷ್ಟಕ್ಕೆ ಗುರಿಯಾಗುತ್ತಿದ್ದು, ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅವೈಜ್ಞಾನಿಕವಾಗಿ ನಿರ್ಮಿಸಿದ ಕಿಂಡಿ ಅಣೆಕಟ್ಟಿನಿಂದ ಇಲ್ಲಿನ ರೈತರು ಈಗಾಗಲೇ ತಮ್ಮ ಕೃಷಿ ಕಳೆದುಕೊಂಡಿದ್ದಾರೆ. ಪ್ರತಿ ವರ್ಷ ಉಂಟಾಗುವ ನೆರೆಯಿಂದ ಮನೆಗಳೂ ಕುಸಿಯುವ ಭೀತಿ ಎದುರಾಗಿದೆ.

  ಈ ಗ್ರಾಮಕ್ಕೆ ಇಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿ ಜನರ ಸಂಕಷ್ಟ ಕೇಳಿದ್ದಾರೆ. ದೋಣಿಯ ಮೂಲಕ ಇಲ್ಲಿನ ಮನೆಗಳಿಗೆ ತೆರಳಿದ ಜಿಲ್ಲಾದಿಕಾರಿ ಮನೆಯಲ್ಲಿದ್ದ ವೃದ್ಧರಿಗೆ ಸಾಂತ್ವಾನ ಹೇಳಿದ್ದಾರೆ. ಸುಮಾರು 80 ಜನರು ಇಲ್ಲಿ ವಾಸವಾಗಿದ್ದು, ಜನರನ್ನು ಸ್ಥಳಾಂತರ ಮಾಡಿ ಸುರಕ್ಷಿತ ಜಾಗಕ್ಕೆ ಕಳುಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

  ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಸ್ಥಳೀಯ ಜನರ ಬಳಿ ಮಾತನಾಡಿದ್ದು, ಅವರು ಪ್ರಮುಖ ಸಮಸ್ಯೆಯ ಬಗ್ಗೆ ಗಮನಕ್ಕೆ ತಂದಿದ್ದಾರೆ. ಆ ಬಗ್ಗೆ ಗಮನ ಹರಿಸಲಾಗುವುದು ಆದ್ರೆ ಅದಕ್ಕೂ ಮೊದಲು ಈಗ ಇವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.

  Continue Reading

  LATEST NEWS

  ಮಂಗಳೂರು: ಬೆಂಗ್ರೆ ಪರಿಸರದ ಶಾಲೆ ಹಾಗೂ ಮನೆಗಳಿಗೆ ನುಗ್ಗಿದ ನೀರು

  Published

  on

  ಮಂಗಳೂರು: ಕರಾವಳಿಯ ಮಳೆಯ ಸರಿಯಾದ ಮಾಹಿತಿ ಇಲ್ಲದೆ ನಡೆಸುವ ಕಾಮಗಾರಿಗಳು ಇಲ್ಲಿನ ಜನರಿಗೆ ಶಾಪವಾಗಿ ಪರಿಣಮಿಸಿದೆ. ಮಂಗಳೂರಿನ ಬೆಂಗ್ರೆಯ ಜನರೂ ಕೂಡಾ ಅಂತಹದೇ ಪರಿಸ್ಥಿತಿ ಎದುರಿಸುತ್ತಿದ್ದು, ಇಲ್ಲಿನ ಕೋಸ್ಟಲ್‌ ಬರ್ತ್‌ ಕಾಮಗಾರಿಯಿಂದ ಉಂಟಾಗಿರುವ ಕೃತಕ ನೆರೆಯಿಂದ ಜನರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

  ಕೋಸ್ಟಲ್‌ ಬರ್ತ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ನದಿ ನೀರು ಸರಿಯಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಕಳೆದ ಕೆಲ ದಿನದಿಂದ ಸುರಿಯುತ್ತಿರುವ ಮಳೆಗೆ ಬೆಂಗ್ರೆಯ ಹಲವು ಮನೆಗಳು ಜಲಾವೃತಗೊಂಡಿದೆ. ಶಾಲೆಗಳಿಗೂ ನದಿ ನೀರು ನುಗ್ಗಿದ್ದು, ತೀರದಲ್ಲಿದ್ದ ಮೀನುಗಾರರ ದೋಣಿಗಳನ್ನು ಕಟ್ಟಿ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

  ಕೆಲ ದಿನಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ ಅಧಿಕಾರಿ ಶೀಘೃ ಸಮಸ್ಯೆ ಬಗೆ ಹರಿಸುವ ಬರವಸೆ ನೀಡಿದ್ದರು. ಶಾಲೆಯ ಆವರಣಕ್ಕೆ ಮರಳು ಹಾಕಿ ನೀರು ಬಾರದಂತೆ ತಡೆಯುವುದಾಗಿ ಹೇಳಿದ್ದರು. ಆದ್ರೆ ನಿನ್ನೆ ತುಂಬೆ ಅಣೆಕಟ್ಟು ತುಂಬಿದ ಕಾರಣ ಎಲ್ಲಾ ಗೇಟ್‌ಗಳನ್ನು ತೆಗೆದಿರುವ ಕಾರಣ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಇದರಿಂದ ಕೋಸ್ಟಲ್‌ ಬರ್ತ್‌ ನಿರ್ಮಾಣದ ಪ್ರದೇಶದಲ್ಲಿ ನೀರು ಸರಾಗವಾಗಿ ಹರಿಯದೇ ಬೆಂಗ್ರೆ ಪರಿಸರದ ಮನೆಗಳಿಗೆ ಹಾಗೂ ಶಾಲೆಗಳಿಗೆ ನುಗ್ಗಿದೆ. ಹೀಗಾಗಿ ತಕ್ಷಣ ಬರ್ತ್ ನಿರ್ಮಾಣ ಕಾಮಗಾರಿಯನ್ನು ತಡೆಹಿಡಿಯುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.

  Continue Reading

  LATEST NEWS

  ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ 13 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

  Published

  on

  ಮಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಪಟ್ಟಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿಎಲ್ ಆನಂದ್ ಸೇರಿದಂತೆ 13 ಮಂದಿ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ(ಜು.19) ದಾಳಿ ನಡೆಸಿದ್ದಾರೆ. ಒಟ್ಟು ಕರ್ನಾಟಕದ 55 ಕಡೆಗಳಲ್ಲಿ ದಾಳಿ ನಡೆದಿದೆ.
  ಆನಂದ್ ಅವರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳೂ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

  ಆನಂದ್ ಅವರು ಹಿರಿಯ ದರ್ಜೆಯ ಕರ್ನಾಟಕ ಆಡಳಿತ ಸೇವೆಗಳ (ಕೆಎಎಸ್) ಅಧಿಕಾರಿಯಾಗಿದ್ದು, ಜೂನ್, 2023 ರಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದರು. ಸರ್ಕಾರ ಜುಲೈ 4 ರಂದು ಅವರನ್ನು ವರ್ಗಾವಣೆ ಮಾಡಿತ್ತು. ಇದರ ವಿರುದ್ಧ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಜುಲೈ 9 ರಂದು ಅವರ ವರ್ಗಾವಣೆಯನ್ನು ರದ್ದುಗೊಳಿಸಲಾಗಿತ್ತು.

  ಇನ್ನು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ನಗರ ಪಾಲಿಕೆ ಆಯುಕ್ತರು ಮತ್ತು ಕೆಎಎಸ್ ಅಧಿಕಾರಿ ಕೆ.ನರಸಿಂಹಮೂರ್ತಿ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರಿನ ಕೆಐಎಡಿಬಿ ಅಪರ ನಿರ್ದೇಶಕ ಸಿ.ಟಿ ಮುದ್ದುಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸಿ.ಟಿ ಮುದ್ದುಕುಮಾರ್ ಬೆಂಗಳೂರಿನ ನಾಗರಭಾವಿಯ ಎರಡನೇ ಹಂತದಲ್ಲಿ ವಾಸವಾಗಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿ ಕಚೇರಿ ಇದೆ.

  ಇದನ್ನೂ ಓದಿ : Watch : ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟ; ಮೂಕ ಜೀವಿಗಳು ಬ*ಲಿ

  ಯಾದಗಿರಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಲವಂತ ರಾಠೋಡ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಿರಿಯ ಪಶು ವೈದ್ಯಾಧಿಕಾರಿ ಆರ್ ಸಿದ್ದಪ್ಪ, ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ರಮೇಶ್ ಕುಮಾರ್, ಕಾನೂನು ಮಾಪನ ಶಾಸ್ತ್ರ ಉಪ ನಿಯಂತ್ರಕ ಅಥರ್ ಅಲಿ, ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗೇಶ್ ಬಿ ಗೌಡ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಪ್ರಕಾಶ್ ಮತ್ತು ಮಂಡ್ಯ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್ ಶುಕ್ರವಾರ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರು, ತುಮಕೂರು, ಶಿವಮೊಗ್ಗ, ಯಾದಗಿರಿ ಮತ್ತು ಕಲಬುರ್ಗಿಯಲ್ಲಿ ಕೂಡ ದಾಳಿ ನಡೆಸಲಾಗಿದೆ.

  Continue Reading

  LATEST NEWS

  Trending