Wednesday, December 1, 2021

ಅತ್ಯಾಚಾರಗೈಯುವವರಿಗೆ ಬದುಕುವ ಯಾವುದೇ ಹಕ್ಕಿಲ್ಲ: ಪ್ರತಿಭಾ ಕುಳಾಯಿ

ಮಂಗಳೂರು: ಹೆಣ್ಮಕ್ಕಳನ್ನು ಅತ್ಯಾಚಾರಗೈದು ಕೊಲೆ ಮಾಡುವ ಕಿರಾತಕರನ್ನು ಕಂಡಲ್ಲಿ ಗುಂಡಿಕ್ಕಿ ಸಾಯಿಸಬೇಕು. ಅಂಥವರಿಗೆ ಬದುಕುವ ಯಾವುದೇ ಹಕ್ಕಿಲ್ಲ ಎಂದು ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 20 ದಿನದ ಹಿಂದೆ ಎರಡು ವರ್ಷದ ಹೆಣ್ಣು ಮಗುವನ್ನು ಅತ್ಯಾಚಾರ ಮಾಡಿ, ಕೊಲೆಗೈಯ್ಯುವ ಯತ್ನ ನಡೆಸಲಾಗಿತ್ತು. ಆಗ ನಾವ್ಯಾರೂ ಪ್ರತಿಭಟಿಸಿಲ್ಲ.

ಇದೀಗ ಎರಡನೇ ಮುಗ್ಧ ಮಗು ಅತ್ಯಾಚಾರಿಗಳಿಗೆ ಬಲಿಯಾಗಿದೆ. ನಾವು ದನಿ ಎತ್ತದಿದ್ದರೆ ಇನ್ನಷ್ಟು ಹೆಣ್ಮಕ್ಕಳು ಬಲಿಯಾಗುವ ಸಾಧ್ಯತೆ ಇದು ಆತಂಕ ವ್ಯಕ್ತಪಡಿಸಿದರು.
ಉಳಾಯಿಬೆಟ್ಟುವಿನ ಪರಾರಿಯಲ್ಲಿ 8 ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ, ಕೊಲೆಗೈದವರನ್ನು ಬಂಧಿಸಿದ ಪೊಲೀಸ್ ಕಮಿಷನರ್ ಹಾಗೂ ತಂಡವನ್ನು ಅಭಿನಂದಿಸುತ್ತೇನೆ.

ಕೇವಲ ಆರೋಪಿಗಳನ್ನು ಬಂಧಿಸಿದರೆ ಸಾಲದು, ಆರೋಪಿಗಳಿಗೆ ನ್ಯಾಯಾಲಯ ಶೀಘ್ರ ಹಾಗೂ ಕಠಿಣ ಶಿಕ್ಷೆ ವಿಧಿಸಬೇಕು. ಇದಕ್ಕಾಗಿ ಜನಜಾಗೃತಿ, ಹೋರಾಟದ ಅಗತ್ಯವಿದೆ ಎಂದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...