Connect with us

LATEST NEWS

ನಾರಿಶಕ್ತಿಯ ಮುಂದೆ ಯಾರ ಶಕ್ತಿ ಪ್ರದರ್ಶನವೂ ನಡೆಯದು-ಡಾ. M.N ರಾಜೇಂದ್ರ ಕುಮಾರ್

Published

on

ಉಡುಪಿ: ‘ನಾರಿ ಶಕ್ತಿಯ ಮುಂದೆ ಯಾರ ಶಕ್ತಿ ಪ್ರದರ್ಶನವೂ ನಡೆಯುವುದಿಲ್ಲ. ಯಾಕೆಂದರೆ ಇಲ್ಲಿ ಸೇರಿರುವ 90%ದಷ್ಟು ಮಹಿಳೆಯರು ನಮ್ಮ ನವೋದಯ ಸ್ವಸಹಾಯ ಸಂಘದ ಸದಸ್ಯರು ಅಂತ ಹೇಳಲು ನನಗೆ ಹೆಮ್ಮೆ ಅನಿಸುತ್ತದೆ. ನಾವು ಶಕ್ತಿ ತೋರಿಸಲು ಇಲ್ಲಿ ಬಂದಿಲ್ಲ ನಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇಲ್ಲಿಗೆ ಬಂದಿದ್ದೇವೆ’ ಎಂದು ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.


ಅವರು ಇಂದು ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ., ಮಂಗಳೂರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ, ಮಂಗಳೂರು; ದ.ಕ. ಹಾಗೂ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನಿ., ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಲಿ. ಹಾಗೂ ಉಡುಪಿ ಜಿಲ್ಲೆಯ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಗಳು, ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಮತ್ತು

ಉಡುಪಿ ಜಿಲ್ಲೆಯ ಸಮಸ್ತ ಸಹಕಾರ ಸಂಘಗಳು ಹಾಗೂ ಸೌಹಾರ್ದ ಸಹಕಾರಿಗಳ ನೇತೃತ್ವದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಹಾಗೂ ಅವರಿಗೆ ಅಭಿನಂದನಾ ಸಮಾರಂಭವನ್ನು ಉದದ್ಘಾಟಿಸಿ ಮಾತನಾಡಿದ ಅವರು ‘ಎಲ್ಲರೂ ಸಹಕಾರ ಸಂಘಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂಬ ದೃಷ್ಟಿಯಿಂದ ವಾರಗಳ ಕಾಲ ಸಹಕಾರ ಸಪ್ತಾಹವನ್ನು ಆಚರಿಸಲಾಗುತ್ತಿದೆ.

ಏಳು ದಿನಗಳ ಕಾಲ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಪ್ತಾಹ ಕಾರ್ಯಕ್ರಮ ನಡೆಯಲಿದ್ದು ಇದರ ಸದುಪಯೋಗವನ್ನು ಸಹಕಾರಿ ಸಂಘಗಳು ಮತ್ತು ಸದಸ್ಯರು ಪಡೆದುಕೊಳ್ಳಬೇಕು. ಎಲ್ಲರನ್ನೂ ಸಮಾನವಾಗಿ ಕಾಣಬೇಕೆಂಬ ಉದ್ದೇಶದಿಂದ, ಜಾತಿ ಮತ ಧರ್ಮದ ಬೇಧ ಹೊಂದಬಾರದು ಎಂಬ ಕಾರಣಕ್ಕೆ ಸಂಘದ ಮಹಿಳೆಯರಿಗೆ ಒಂದೇ ಬಣ್ಣದ ಸೀರೆಯನ್ನು ನೀಡಲಾಗಿದೆ” ಎಂದು ಆಶಯ ವ್ಯಕ್ತಪಡಿಸಿದರು.

ಗಣನಾಥ ಎಕ್ಕಾರು ಸಹಕಾರಿ ಕ್ಷೇತ್ರ ಮತ್ತು ಸಹಕಾರಿ ತತ್ವದ ಕುರಿತು ದಿಕ್ಸೂಚಿ ಭಾಷಣದಲ್ಲಿ, “ಸಮಾಜದಲ್ಲಿ ಪರಸ್ಪರ ಸಾಮರಸ್ಯ, ನಂಬಿಕೆ ಮತ್ತು ಸ್ವಾವಲಂಬನೆ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಮಾತ್ರ ಸಹಕಾರಿ ಸಂಘಟನೆಯ ಜೊತೆ ಜೊತೆಗೆ ಅಭಿವೃದ್ಧಿ ಕಾಣಲು ಸಾಧ್ಯವಿದೆ. ಹಿಂದೆ ಶಿಕ್ಷಣ ಇಲ್ಲದವರನ್ನು ಆಶಿಕ್ಷಿತರು ಎಂದು ಕರೆಯಲಾಗುತ್ತಿತ್ತು.

ಆದರೆ ಇಂದು ಆಧುನಿಕ ತಂತ್ರಜ್ಞಾನದ ಜೊತೆಗೆ ಬೆಳೆಯದೆ ಇದ್ದಲ್ಲಿ ಅಂತವರನ್ನು ಆಶಿಕ್ಷಿತರು ಎಂದು ಕರೆಯಬಹುದಾಗಿದೆ. ಯಾವುದೇ ಕೌಶಲ್ಯ ನಮಗೆ ಕರಗತ ಆಗಬೇಕಿದ್ದರೆ ಮೊದಲು ಅದನ್ನು ಒಪ್ಪಿಕೊಳ್ಳಬೇಕು” ಎಂದರು.
ದೇವಿಪ್ರಸಾದ್ ಶೆಟ್ಟಿ ಬೆಳಪು ಅತಿಥಿಗಳನ್ನು ಸ್ವಾಗತಿಸಿದರು.


ಬಳಿಕ ಆಶೀರ್ವಚನ ನೀಡಿದ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು, “ಸಹಕಾರ ಅನ್ನುವುದು ಸಾರ್ವಕಾಲಿಕ ಏಳಿಗೆಯ ಸೂತ್ರ.

ಬ್ಯಾಂಕಿಗ್ ಕ್ಷೇತ್ರ ಮಾತ್ರವಲ್ಲ ಸಮಾಜದಲ್ಲಿ ಜಾತಿ ಮತ ಪಂಥಗಳಲ್ಲಿ ಹರಿದು ಹಂಚಿಹೋಗಿರುವ ನಾವು ಸಹಕಾರಿ ತತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅಭಿವೃದ್ಧಿ ಸಾಧ್ಯವಿದೆ. ರಾಜೇಂದ್ರ ಕುಮಾರ್ ಅವರ ಸಾಧನೆಯಿಂದ ಸಹಕಾರಿ ಕ್ಷೇತ್ರ ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಮುಂದೆಯೂ ಅವರ ಮಾರ್ಗದರ್ಶನದಲ್ಲಿ ಸಹಕಾರಿ ರಂಗ ಇನ್ನಷ್ಟು ಬೆಳೆಯಲಿ” ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಎಂ.ಎನ್. ರಾಜೇಂದ್ರ ಕುಮಾರ್ ದಂಪತಿಯನ್ನು ಬೆಳ್ಳಿಯ ಶಂಖ ಹಾಗೂ ಅಪರೂಪದ ಭಾವಚಿತ್ರ ಕೊಟ್ಟು ಶಾಲು ಹೊದೆಸಿ ಸನ್ಮಾನಿಸಲಾಯಿತು.


ಬಳಿಕ ಮಾತಾಡಿದ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರು “ಕಾಂತಾರ ಚಿತ್ರ ಯಾವ ರೀತಿ ದೇಶ ವಿದೇಶಗಳಲ್ಲಿ ತುಳುನಾಡಿನ ದೈವಾರಾಧನೆ ಬಗ್ಗೆ ವೈಬ್ರೇಷನ್ ಸೃಷ್ಟಿ ಮಾಡಿದೆಯೋ ಹಾಗೇ ಸಹಕಾರಿ ಕ್ಷೇತ್ರದಲ್ಲಿ ವೈಬ್ರೇಷನ್ ಸೃಷ್ಟಿಸಿದವರು ಎಂ.ಎನ್. ರಾಜೇಂದ್ರ ಕುಮಾರ್ ಅವರು. ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಸಹಕಾರಿ ಎಂಬ ಬಿರುದಿಗೆ ಪಾತ್ರರಾಗಿರುವ ಜೊತೆಗೆ ತಮ್ಮ ಜೊತೆ ಇರುವವರನ್ನು ಬೆಳೆಸುವ, ಒಗ್ಗೂಡಿಸುವ ಧುರೀಣರಾಗಿದ್ದಾರೆ.

ಅವರು ಚುನಾವಣೆಗೆ ನಿಲ್ಲುವುದಾಗಿ ಹೇಳಿದ ಕೂಡಲೇ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವೈಬ್ರೇಷನ್ ಪ್ರಾರಂಭ ಆಯ್ತು. ಇಂತಹ ರಾಜೇಂದ್ರ ಕುಮಾರ್ ಅವರು ಹಮ್ಮಿಕೊಂಡಿರುವ ಸಹಕಾರಿ ಸಪ್ತಾಹದ ಆಶಯ ಈಡೇರಲಿ” ಎಂದರು.


ವೇದಿಕೆಯಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಧರ್ಮಪತ್ನಿ ಅರುಣಾ ರಾಜೇಂದ್ರ ಕುಮಾರ್, ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇದರ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಕಾಪು ಶಾಸಕ ಲಾಲಾಜಿ ಎಸ್. ಮೆಂಡನ್,
ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಇದರ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು,

ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಎ. ಸುವರ್ಣ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಇದರ ನಿರ್ದೇಶಕ ಮಂಜುನಾಥ್ ಎಸ್.ಕೆ., ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಕೆ.ಎಂ.ಎಫ್. ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ. ಉಮೇಶ್ ಜಿ., ಲಕ್ಷ್ಮೀನಾರಾಯಣ ಜಿ.ಎನ್., ಗಣೇಶ್ ಮಯ್ಯ, ಎಸ್ ಸಿಡಿಸಿಸಿ ಬ್ಯಾಂಕ್ ಡಿಜಿಎಂ ಗೋಪಿನಾಥ್ ಭಟ್, ಜಗದೀಶ್ ಅಂಚನ್ ಸೂಟರ್ ಪೇಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LATEST NEWS

ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?

Published

on

ಮಹಾರಷ್ಟ್ರ: ಅಪ್ರಾಪ್ತ ಬಾಲಕಿಯೊಬ್ಬಳು ಎರಡು ಬಾರಿ ಅಕ್ರಮ ಗರ್ಭ ಧರಿಸಿ ಇದೀಗ ತನ್ನ ಪೋಷಕರ ವಿರುದ್ಧ ಠಾಣೆ ಮೆಟ್ಟಿಲೇರಿರುವ ಘಟನೆ ಮಹಾರಷ್ಟ್ರದಲ್ಲಿ ನಡೆದಿದೆ. ಹೌದು, 17 ವರ್ಷದ ಬಾಲಕಿಯೊಬ್ಬಳು ಬೇರೆ ಬೇರೆ ಯುವಕರಿಂದ ಎರಡು ಬಾರಿ ಗರ್ಭ ಧರಿಸಿದ್ದಾಳೆ.

pregnant

ಮೊದಲಾಗಿ ಅಕ್ರಮ ಸಂಬಂಧ ಹೊಂದಿದ್ದ ಪುರುಷನಿಂದ ಗರ್ಭ ಧರಿಸಿದ್ದಳು. ಈ ಮಗುವನ್ನು ಪೋಷಕರು ತನಗರಿಯದೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಬಾಲಕಿ ಪೋಷಕರು ಸೇರಿದಂತೆ ಶಿಕ್ಷಕರು, ವಕೀಲರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಮುಂದೆ ಓದಿ..; 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ಪೋಷಕರು ನನ್ನನ್ನು ಮುಂಬೈಗೆ ಕರೆದುಕೊಂಡು ಹೋಗಿ ವಕೀಲರ ನೇತೃತ್ವದಲ್ಲಿ ಕೆಲವು ದಾಖಲೆ ಪತ್ರಗಳಿಗೆ ಸಹಿ ಹಾಕಿಸಿದ್ದಾರೆ.  7ನೇ ತರಗತಿಯ ಬಳಿಕ ಶಾಲೆಯಿಂದ ಹೊರಗುಳಿದ ಬಾಲಕಿಯ ನಿಯಮಿತ ತಪಾಸಣೆ ಮತ್ತು ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 2021ರ ಸೆಪ್ಟೆಂಬರ್ 24ರಂದು ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮರುದಿನ ಆ ಮಗುವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಹಸ್ತಾಂತರಿಸಿದ್ದು, ಹೆರಿಗೆಯ ಬಗ್ಗೆ ಯಾರಲ್ಲೂ ಮಾತನಾಡದಂತೆ ಆಕೆಗೆ ಪೋಷಕರು ಎಚ್ಚರಿಕೆ ನೀಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.

ಇನ್ನು ಹೆರಿಗೆ ಆದ ಆರು ತಿಂಗಳ ಬಳಿಕ ಅಪ್ರಾಪ್ತೆ ಮಗುವಿನ ತಂದೆಯನ್ನು ಸಂಪರ್ಕಿಸಿದ್ದಾಳೆ. ಈ ವೇಳೆ ಆತ ಅವಳನ್ನು ವರಿಸಳು ಸಿದ್ಧನಾಗಿದ್ದೇನೆ ಎಂದು ಹೇಳುತ್ತಾನೆ. ಆದರೆ ಮನೆಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ತನ್ನ ಪೋಷಕರು ಮಗುವನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಈ ಪೈಕಿ ಪೋಷಕರು ಮತ್ತು ಚಿಕ್ಕಪ್ಪ ತಲಾ 1.5 ಲಕ್ಷ ರೂ. , ಸಾಮಾಜಿಕ ಕಾರ್ಯಕರ್ತೆ ಮತ್ತು ಇತರ ಕೆಲವರು ಉಳಿದ 1 ಲಕ್ಷ ರೂ.ಗಳನ್ನು ಹಂಚಿಕೊಂಡಿದ್ದಾರೆ ಎಂದು ಅಪ್ರಾಪ್ತೆ ದೂರಿನಲ್ಲಿ ತಿಳಿಸಿದ್ದಾಳೆ.

ಈ ಕುರಿತಾಗಿ ಪ್ರಶ್ನಿಸಿದಕ್ಕೆ ಅಜ್ಜಿ ಮನೆಗೆ ಕಳುಹಿಸಿದ್ದಾರೆ. ಇನ್ನು ಅಲ್ಲಿ ಈ ಬಾಲಕಿಗೆ 23ವರ್ಷದ ಯುವಕನ ಜೊತೆ ಮದುವೆ ಫಿಕ್ಸ್ ಮಾಡಲಾಗಿತ್ತು.  ಈ ವೇಳೆ ವಿವಾಹ ನಿಶ್ಚಯವಾಗಿದ್ದ ಯುವಕನ ಜೊತೆ ಲೈಂಗಿಕ ಸಂಪರ್ಕ ಹೊಂದುತ್ತಾಳೆ. ಬಳಿಕ ಬಾಲಕಿ ಮತ್ತೊಮ್ಮೆ ಗರ್ಭ ಧರಿಸುತ್ತಾಳೆ. ಅಷ್ಟಾಗಲೇ ವಿವಾಹ ನಿಶ್ಚಯವಾಗಿದ್ದ ಹುಡುಗನಿಗೆ ಇವಳ ಮೊದಲ ಮಗುವಿನ ಕುರಿತಾಗಿ ತಿಳಿದು ಇವಳನ್ನು ಮದುವೆಯಾಗಲು ನಿರಾಕರಿಸುತ್ತಾನೆ. ಬಳಿಕ ಅಜ್ಜಿ ಮನೆಯಿಂದ ಹೊರಟು ಬರ್ತಾಳೆ. ಪರಿಚಯಸ್ಥರ ನೆರವಿನಿಂದ ಗಂಡು ಮಗುವಿಗೆ ಜನ್ಮ ನೀಡಿದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ಪೋಷಕರು ಎರಡನೇ ಮಗವನ್ನೂ ಮಾರಾಟ ಮಾಡುವಂತೆ ಒತ್ತಡ ಹೇರುತ್ತಿದ್ದು ಈ ನಿಟ್ಟಿನಲ್ಲಿ ಬಾಲಕಿ ಪೊಲೀಸ್ ಮೆಟ್ಟಿಲೇರಿದ್ದಾಳೆ. ಇನ್ನು ಪೊಲೀಸರು ಮಾರಾಟ ಮಾಡಿದ್ದ ಹೆಣ್ಣು ಮಗುವನ್ನು ಹುಡುಕಲು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

 

 

Continue Reading

FILM

ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ

Published

on

ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್‌’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.


ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ :

‘ಪುಷ್ಪ 2 : ದಿ ರೂಲ್‌’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.

ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.

ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ.  ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ತೆರೆಗೆ ಯಾವಾಗ?

ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.

‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್‌ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.

Continue Reading

LATEST NEWS

ಹೊಸ ಅಪ್​ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?

Published

on

ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.


ಏನಿದು ಫೀಚರ್ ?

ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್​ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ನಿಯರ್ ​ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ.

Continue Reading

LATEST NEWS

Trending