Friday, August 19, 2022

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಕೇಂಡ್ ಕರ್ಫ್ಯೂ ರದ್ದು ಮಾಡಿದ ಜಿಲ್ಲಾಧಿಕಾರಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಘೋಷಣೆ ಮಾಡಿದ್ದಾರೆ.

ಆದರೆ ಜಿಲ್ಲೆಯಲ್ಲಿ ಪ್ರತಿದಿನ ವಿಧಿಸಿದ್ದ ನೈಟ್​ ಕರ್ಫ್ಯೂ ಮುಂದುವರೆಯಲಿದೆ. ಧಾರ್ಮಿಕ ಸ್ಥಳಗಳಲ್ಲಿ ದೇವರ ದರ್ಶನಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಇದುವರೆಗ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವುಗೊಳಿಸಲು ಆದೇಶಿಸಲಾಗಿದೆ.

ಗಡಿ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಕಂಡುಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಕೊವಿಡ್ ಸೋಂಕು ಹೆಚ್ಚಳವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಬಹುದಾಗಿದೆ.

ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕು.

ಈಗ ಜಾರಿಯಲ್ಲಿರುವ ಮಾರ್ಗಸೂಚಿಯನ್ನು ಜನರು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪಾಲನೆ ಮಾಡದೆ ಮತ್ತೆ ಸೋಂಕು ಹೆಚ್ಚಾದ್ರೆ, ಈ ನಿಯಮಗಳನ್ನು ಅನಿವಾರ್ಯವಾಗಿ ನಿಲ್ಲಿಸಲಾಗುವುದು.

ಜನರು ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡಿ, ಸೋಂಕು ಕಡಿಮೆ ಮಾಡಲು ಸಹಕಾರಿಸಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಆ.22ರಂದು ನಾಡದೋಣಿ ಎಂಜಿನ್ ತಪಾಸಣೆ

ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆ.22ರ ಸೋಮವಾರ ನಡೆಯಲಿದೆ.ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು...

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.ಈ...

E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ

ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ...